Homeಮುಖಪುಟಮಣಿಪುರ ಹಿಂಸಾಚಾರ ಕುರಿತು ಪ್ರಧಾನಿ ಮೋದಿ ಸಂಸತ್ತಿನಲ್ಲಿ ಸಮಗ್ರ ಹೇಳಿಕೆ ನೀಡಬೇಕು: INDIA ಒಕ್ಕೂಟದಿಂದ ಒತ್ತಾಯ

ಮಣಿಪುರ ಹಿಂಸಾಚಾರ ಕುರಿತು ಪ್ರಧಾನಿ ಮೋದಿ ಸಂಸತ್ತಿನಲ್ಲಿ ಸಮಗ್ರ ಹೇಳಿಕೆ ನೀಡಬೇಕು: INDIA ಒಕ್ಕೂಟದಿಂದ ಒತ್ತಾಯ

- Advertisement -
- Advertisement -

ಮಣಿಪುರ ಹಿಂಸಾಚಾರ ಮತ್ತು ಅಲ್ಲಿಯ ಬುಡುಕಟ್ಟು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ ಸಾಮೂಹಿಕ ಅತ್ಯಾಚಾರ ನಡೆಸಿದ ಹೇಯ ಕೃತ್ಯದ ಬಗ್ಗೆ ದೇಶವ್ಯಾಪಿ ಕೋಲಾಹಲ ಸೃಷ್ಟಿಯಾಗಿದೆ. ಈ ಬಗ್ಗೆ ಪ್ರಧಾನಿ ಮೋದಿ  ಸಂಸತ್ತಿನಲ್ಲಿ ಸಮಗ್ರ ಹೇಳಿಕೆ ನೀಡಬೇಕು ಎಂದು ವಿರೋಧ ಪಕ್ಷದ ಮೈತ್ರಿ INDIA ಆಗ್ರಹಿಸಿದೆ. ಪ್ರಧಾನಿ ಮೋದಿಯವರ ಹೇಳಿಕೆಯ ನಂತರವೇ ಈ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ

ಲೋಕಸಭೆಯಲ್ಲಿ ಅಧಿವೇಶನ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷಗಳ ಸಂಸದರು ”ಇಂಡಿಯಾ ಫಾರ್ ಮಣಿಪುರ” ಮತ್ತು ”ಭಾರತ ಮಣಿಪುರ ಕುರಿತು ಪ್ರಧಾನಿ ಹೇಳಿಕೆ ನೀಡಲೇಬೇಕು” ಎಂಬ ಫಲಕಗಳನ್ನು ಹಿಡಿದುಕೊಂಡಿದ್ದಾರೆ.

ಈ ಬಗ್ಗೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ”ನಾವು ಸಿದ್ಧರಿದ್ದೇವೆ…140 ಕೋಟಿ ಜನರ ನಾಯಕ(ಮೋದಿ) ಸಂಸತ್ತಿನ ಹೊರಗೆ ಹೇಳಿಕೆ ನೀಡಿದರೆ, ಜನಪ್ರತಿನಿಧಿಗಳು ಕುಳಿತುಕೊಳ್ಳುವ ಸಂಸತ್ತಿನಲ್ಲಿ ಹೇಳಿಕೆ ನೀಡಬೇಕು” ಎಂದು ರಾಜ್ಯಸಭೆ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾತನಾಡಿ, ”ಸಂಸತ್ತಿನ 3ನೇ ದಿನದ ಮುಂಗಾರು ಅಧಿವೇಶನ ಇಂದು ಆರಂಭವಾಗಿದೆ. INDIAದ ಬೇಡಿಕೆ ನೇರವಾಗಿದೆ… ಮಣಿಪುರದಲ್ಲಿ ಮೇ 3ರ ನಂತರದ ಭೀಕರ ಬೆಳವಣಿಗೆಗಳ ಬಗ್ಗೆ ಪ್ರಧಾನಿ ಸಮಗ್ರ ಹೇಳಿಕೆ ನೀಡಬೇಕು. ಆನಂತರ ನಮ್ಮ ಸಾಮೂಹಿಕ ನೋವು, ವೇದನೆ ಮತ್ತು ಸಾಮರಸ್ಯದ ಬಯಕೆಯನ್ನು ವ್ಯಕ್ತಪಡಿಸಲು ಚರ್ಚೆ ನಡೆಯಲಿದೆ” ಎಂದು ರಮೇಶ್ ಟ್ವೀಟ್ ಮಾಡಿದ್ದಾರೆ.

”ಇಂತಹ ಸಂದರ್ಭಗಳಲ್ಲಿ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಪ್ರಧಾನಮಂತ್ರಿ ಮಾಡುವ ಯಾವುದೇ 5D ನಾಟಕ: ಮೊದಲು ಆ ಬಗ್ಗೆ ಮಾತನಾಡಲು ನಿರಾಕರಿಸುತ್ತಾರೆ, ವಿಷಯವನ್ನು ತಿರುಚಲು ಯತ್ನಿಸುತ್ತಾರೆ, ವಿಷಯವನ್ನು ಬೇರೆಡೆಗೆ ತಿರುಗಿಸುತ್ತಾರೆ ಮತ್ತು ‘ಮಾನನಷ್ಟಗೊಳಿಸುತ್ತಾರೆ.” ಈ ವಿಚಾರದಲ್ಲೂ ಹಾಗೇ ಮಾಡುತ್ತಾರೆಯೇ? ಮಣಿಪುರ ಸೇರಿ ಇಡೀ ದೇಶ ಗಮನಿಸುತ್ತಿದೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಎಎಪಿ ಸಂಸದ ರಾಘವ್ ಚಡ್ಡಾ ಮಾತನಾಡಿ, ”ದೇಶದಲ್ಲಿ ಶಾಂತಿಯನ್ನು ಮರುಸ್ಥಾಪಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ. ಮಣಿಪುರದ ವಿಷಯದ ಬಗ್ಗೆ ಸರ್ಕಾರ ಮತ್ತು ಪ್ರಧಾನಿ ಮೋದಿ ಮಾತನಾಡಬೇಕು ಎಂದು ದೇಶವು ಒತ್ತಾಯಿಸುತ್ತದೆ” ಎಂದು ಹೇಳಿದ್ದಾರೆ.

”ನ್ಯಾಯಾಂಗ ಇದರಲ್ಲಿ ಮಧ್ಯಪ್ರವೇಶಿಸಬೇಕು, ಮಣಿಪುರದಲ್ಲಿ ಏನು ನಡೆಯುತ್ತಿದೆ ಮತ್ತು ದೇಶದ ಇತರ ಭಾಗಗಳಲ್ಲಿ ಏನು ನಡೆಯುತ್ತಿದೆ ಎಂಬುದರ ನಡುವೆ ವ್ಯತ್ಯಾಸವಿದೆ” ಎಂದು ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಹೇಳಿದ್ದಾರೆ.

ಮಣಿಪುರದ ಪರಿಸ್ಥಿತಿಯನ್ನು ಚರ್ಚಿಸಲು ಹಲವಾರು ವಿರೋಧ ಪಕ್ಷದ ನಾಯಕರು ನೋಟಿಸ್ ನೀಡಿದ್ದಾರೆ. ಯಾವುದೇ ನಿರ್ಬಂಧವಿಲ್ಲದೆ ಎಲ್ಲಾ ಪಕ್ಷಗಳಿಗೆ ಮಾತನಾಡಲು ಅವಕಾಶ ನೀಡಬೇಕು ಮತ್ತು ಗುರುವಾರ ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ ಈ ವಿಚಾರವಾಗಿ ಪ್ರತಿಭಟನೆಗಳು ನಡೆಸುತ್ತಿವೆ.

ಇದನ್ನೂ ಓದಿ: ಸರ್ಕಾರದ ಮನವಿ ಧಿಕ್ಕರಿಸಿ ಮಣಿಪುರಕ್ಕೆ ಭೇಟಿ ಕೊಟ್ಟ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...