Homeಮುಖಪುಟಇಂದು ಮಂಗಳೂರಿಗೆ ಪ್ರಧಾನಿ ಮೋದಿ: ಪ್ರಶ್ನೆಗಳ ಸುರಿಮಳೆಗೈದ ಕಾಂಗ್ರೆಸ್

ಇಂದು ಮಂಗಳೂರಿಗೆ ಪ್ರಧಾನಿ ಮೋದಿ: ಪ್ರಶ್ನೆಗಳ ಸುರಿಮಳೆಗೈದ ಕಾಂಗ್ರೆಸ್

- Advertisement -
- Advertisement -

ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿಯವರು ಇಂದು ಕರ್ನಾಟಕದ ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಕಲ ಸಿದ್ಧತೆಗಳನ್ನು ನಡೆಸಿದೆ. ಆದರೆ ಪ್ರತಿಪಕ್ಷ ಕಾಂಗ್ರೆಸ್ ಪ್ರಧಾನಿ ಭೇಟಿಗೆ ವಿರೋಧ ವ್ಯಕ್ತಪಡಿಸಿ ಪ್ರಶ್ನೆಗಳ ಸುರಿಮಳೆಗೈದಿದೆ.

ದಕ್ಷಿಣ ಕನ್ನಡದ ಉದ್ಯಮ ಶೀಲ ಹಿರಿಯರು ಸಿಂಡಿಕೇಟ್, ಕಾರ್ಪೋರೇಷನ್, ವಿಜಯಾ, ಕೆನರಾ ಮತ್ತು ಕರ್ನಾಟಕ ಹೀಗೆ ಐದು ಬ್ಯಾಂಕ್‌ಗಳನ್ನು ಹುಟ್ಟುಹಾಕಿದ್ದರು. ನೀವು ಇವುಗಳಲ್ಲಿ ಮೂರು ಬ್ಯಾಂಕುಗಳ ನಾಮಾವಶೇಷ ಮಾಡಿದ್ದೀರಿ. ಇದು ವಿಕಾಸವೋ? ವಿನಾಶವೋ? ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಬಜ್ಪೆ ವಿಮಾನ ನಿಲ್ದಾಣ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಕೊಡುಗೆ. (25-12-1971) ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ. ಈ ವಿಮಾನ ನಿಲ್ದಾಣವನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಅರ್ಪಿಸಿದ್ದು (20-10-2020) ಪ್ರಧಾನಿ ನರೇಂದ್ರ ಮೋದಿ. ಇದು ವಿಕಾಸವೋ? ವಿನಾಶವೋ? ಉತ್ತರಿಸಿ ಎಂದಿದ್ದಾರೆ.

ನವಮಂಗಳೂರು ಬಂದರು ಮಾಜಿ ಪ್ರಧಾನಿ ಇಂದಿರಾಗಾಂಧಿ ಕೊಡುಗೆ (1975). ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ. ನವಮಂಗಳೂರು ಬಂದರನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಹಂತಹಂತವಾಗಿ ಮಾರುತ್ತಿರುವುದು ಪ್ರಧಾನಿ ನರೇಂದ್ರ ಮೋದಿ. ಅಲ್ಲದೆ ಬಜ್ಪೆ ವಿಮಾನ ನಿಲ್ದಾಣ, ಎನ್‌ಎಂಪಿಟಿ, ಎನ್ ಎಚ್-66, ರೀಜನಲ್ ಎಂಜನಿಯರಿಂಗ್ ಕಾಲೇಜ್, ಎಂಸಿಎಫ್-ಇವೆಲ್ಲ ಕಾಂಗ್ರೆಸ್ ಸಂಸದರ ಕೊಡುಗೆ.
ಬಿಜೆಪಿ ಸಂಸದ ನಳಿನ್ ಕುಮಾರ ಕೊಡುಗೆ ಏನು? ಮಳೆಯಲ್ಲಿ ಮುಳುಗುವ ಮಂಗಳೂರು ಅಥವಾ ಕೋಮುದ್ವೇಷದ ಬೆಂಕಿಯಲ್ಲಿ ಬೇಯುತ್ತಿರುವ ಮಂಗಳೂರ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಜೂನ್ ತಿಂಗಳೊಂದರಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದುವರೆ ಕೋಟಿ ಬೆಲೆಯ ಮಾದಕ ದ್ರವ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಾದಕದ್ರವ್ಯ ಸೇವನೆಯಲ್ಲಿ ದೇಶದಲ್ಲಿಯೇ ದಕ್ಷಿಣ ಕನ್ನಡ ಎರಡನೇ ಸ್ಥಾನದಲ್ಲಿದೆ. ಇದು ವಿಕಾಸನೋ? ವಿನಾಶನೋ? ಉತ್ತರಿಸಿ ಎಂದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಾಖಲೆಯ ಮಳೆಯಾಗಿದೆ. ಹೆಜ್ಜೆಹೆಜ್ಜೆಗೂ ಗುಂಡಿಬಿದ್ದ ರಸ್ತೆಗಳು, ಕುಸಿದು ಬಿದ್ದಿರುವ ಮನೆಗಳು, ನೆರೆಯಲ್ಲಿ ಕೊಚ್ಚಿಹೋದ ರೈತರ ಬೆಳೆಗಳು.. ಪ್ರಧಾನಿ ಭೇಟಿಗಾಗಿ ಮಳೆ ಹುಳುಕನ್ನು ಮುಚ್ಚಿಟ್ಟು ರಸ್ತೆಗಳಿಗೆ ತೇಪೆ ಹಾಕಲಾಗಿದೆ ಇದು ವಿಕಾಸನೋ? ವಿನಾಶನೋ? ಎಂದು ಅವರು ಪ್ರಶ್ನಿಸಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಕಡಲ್ಕೊರೆತ ತಡೆಗೆ ರಾಜ್ಯ ಸರ್ಕಾರ ಖರ್ಚು ಮಾಡಿರುವ ಹಣ ಅಂದಾಜು ರೂ.250 ಕೋಟಿ. ಇದರಲ್ಲಿ 40% ಜನಪ್ರತಿನಿಧಿಗಳ ಜೇಬಿಗೆ, 60% ಕಡಲ ನೀರಿಗೆ. ಕಡಲ್ಕೊರೆತ ಮುಂದುವರಿದಿದೆ. ಕರಾವಳಿ ಮೀನುಗಾರರ ಮೇಲೆ ಸಿಆರ್ ಜೆಡ್, ಸಿಎಂ ಜೆಡ್ ನಿಯಮಾವಳಿಗಳ ಹೇರಿಕೆ
ಪ್ರವಾಸೋದ್ಯಮದ ಹೆಸರಲ್ಲಿ ರೆಸಾರ್ಟ್, ಥೀಮ್ ಪಾರ್ಕ್ ಗಳಿಗೆ ಮುಕ್ತ ಪರವಾನಿಗೆ
ಇದು ವಿಕಾಸನೋ? ವಿನಾಶನೋ? ಎಂದು ಅವರು ಕೇಳಿದ್ದಾರೆ.

48 ಕಿ.ಮೀ. ಅಂತರದಲ್ಲಿ ಬ್ರಹ್ಮರಕೂಟ್ಲು, ಸುರತ್ಕಲ್, ತಲಪಾಡಿ ಮತ್ತು ಹೆಜಮಾಡಿಗಳಲ್ಲಿ 4 ನಿಯಮಬಾಹಿರ ಟೋಲ್ ಗೇಟ್‌ಗಳಿಂದಾಗಿ ವಾಹನ ಸಂಚಾರಿಗಳ ಜೇಬು ಖಾಲಿಯಾಗಿದೆ. ಆದರೆ ಅಕ್ರಮದ ರೂವಾರಿಗಳಾದ ಬಿಜೆಪಿ ಸಂಸದರು ಮತ್ತು ಶಾಸಕರ ಜೇಬು ಭರ್ತಿಯಾಗಿದೆ ಇದು ವಿಕಾಸನೋ? ವಿನಾಶನೋ? ಮೋದಿಯವರೆ ಉತ್ತರಿಸಿ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ಪ್ರಕರಣ: ಎದೆ ನೋವು ನೆಪದಲ್ಲಿ ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್ ಆದ ಮುರುಘಾ ಶರಣರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...