Homeಅಂತರಾಷ್ಟ್ರೀಯಜಿ7 ಶೃಂಗಸಭೆ| ಪ್ರಧಾನಿ ಮೋದಿಗೆ ಆಹ್ವಾನ ನೀಡದ ಕೆನಡಾ; ವರದಿ

ಜಿ7 ಶೃಂಗಸಭೆ| ಪ್ರಧಾನಿ ಮೋದಿಗೆ ಆಹ್ವಾನ ನೀಡದ ಕೆನಡಾ; ವರದಿ

- Advertisement -
- Advertisement -

ಕೆನಡಾದಲ್ಲಿ ನಡೆಯಲಿರುವ ಈ ಬಾರಿಯ ಜಿ7 ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದುವರೆಗೆ ಯಾವುದೇ ಅಧಿಕೃತ ಆಹ್ವಾನ ಬಂದಿಲ್ಲ. ಒಂದು ವೇಳೆ ಬಂದಿದ್ದರೂ ಭಾಗವಹಿಸುತ್ತಿರಲಿಲ್ಲ ಎಂದು ವರದಿಗಳು ಹೇಳಿವೆ.

“ಜೂನ್ 15ರಿಂದ 17ರವರೆಗೆ ಕೆನಡಾಡದ ಆಲ್ಬರ್ಟಾದಲ್ಲಿ ಈ ವರ್ಷದ ಜಿ7 ಶೃಂಗಸಭೆ ನಡೆಯಲಿದೆ. ಕಳೆದ 6 ವರ್ಷಗಳಲ್ಲಿ ಮೊದಲ ಬಾರಿಗೆ ಪ್ರಧಾನಿ ಮೋದಿಗೆ ಆಹ್ವಾನ ಬಂದಿಲ್ಲ. ಒಂದು ವೇಳೆ ಬಂದಿದ್ದರೂ ಖಲಿಸ್ತಾನಿ ವಿಚಾರದಲ್ಲಿ ಭಾರತದ ಕಳವಳಗಳಿಗೆ ಕೆನಡಾ ಸ್ಪಂದಿಸುತ್ತದೆಯೇ? ಎಂದು ಇನ್ನೂ ಖಚಿತವಾಗದ ಕಾರಣ ಮೋದಿ ಭಾಗವಹಿಸುವುತ್ತಿರಲಿಲ್ಲ” ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಮೋದಿ ಅವರನ್ನು ಆಹ್ವಾನಿಸಲಾಗುತ್ತದೆಯೇ ಎಂಬುದನ್ನು ಕೆನಡಾದ ಜಿ7 ವಕ್ತಾರರು ಭಾನುವಾರ ತಡರಾತ್ರಿವರೆಗೆ ದೃಢಪಡಿಸಲಿಲ್ಲ ಎಂದು ವರದಿ ತಿಳಿಸಿದೆ.

ಫ್ರಾನ್ಸ್, ಜರ್ಮನಿ, ಇಟಲಿ, ಯುನೈಟೆಡ್ ಕಿಂಗ್‌ಡಂ (ಯುಕೆ) ಜಪಾನ್, ಯುನೈಟೆಡ್ ಸ್ಟೇಟ್ಸ್ (ಯುಎಸ್‌), ಯುರೋಪಿಯನ್ ಒಕ್ಕೂಟ (ಇಯು), ಐಎಮ್‌ಎಫ್‌, ವಿಶ್ವ ಬ್ಯಾಂಕ್ ಮತ್ತು ವಿಶ್ವಸಂಸ್ಥೆಗಳು ಶೃಂಗಸಭೆಯಲ್ಲಿ ಭಾಗವಹಿಸಲಿವೆ.

ದಕ್ಷಿಣ ಆಫ್ರಿಕಾ, ಉಕ್ರೇನ್ ಮತ್ತು ಆಸ್ಟ್ರೇಲಿಯಾ ಕೂಡ ಕೆನಡಾದಿಂದ ಆಹ್ವಾನಗಳನ್ನು ಸ್ವೀಕರಿಸಿವೆ ಎಂದು ವರದಿಯಾಗಿದ್ದರೂ, ಪ್ರಧಾನಿ ಮೋದಿಯವರ ಭೇಟಿಯ ಬಗ್ಗೆ ಅನಿಶ್ಚಿತತೆ ಮುಂದುವರೆದಿದೆ.

ಕಳೆದ ತಿಂಗಳು, ವಿದೇಶಾಂಗ ಸಚಿವಾಲಯವು ಎರಡು ಸಂದರ್ಭಗಳಲ್ಲಿ, ಜಿ 7 ಶೃಂಗಸಭೆಗಾಗಿ ಪ್ರಧಾನಿ ಮೋದಿ ಕೆನಡಾಕ್ಕೆ ಭೇಟಿ ನೀಡುವ ಬಗ್ಗೆ ‘ಯಾವುದೇ ಮಾಹಿತಿ ಇಲ್ಲ’ ಎಂದು ಹೇಳಿದೆ.

ಈ ನಡುವೆ, ಕೆನಡಾದ ವಿದೇಶಾಂಗ ಸಚಿವೆ ಅಂಕಿತಾ ಆನಂದ್, ಕೆನಡಾದ ಪತ್ರಿಕೆ ದಿ ಗ್ಲೋಬ್ ಅಂಡ್ ಮೇಲ್‌ಗೆ ನೀಡಿದ ಸಂದರ್ಶನದಲ್ಲಿ, ಹೊಸದಾಗಿ ಆಯ್ಕೆಯಾದ ಮಾರ್ಕ್ ಕಾರ್ನಿ ಸರ್ಕಾರವು ಭಾರತದೊಂದಿಗೆ ಸಂಬಂಧ ಸುಧಾರಿಸಲು ಆಸಕ್ತಿ ಹೊಂದಿದೆ ಎಂದು ಹೇಳಿದ್ದಾರೆ.

ಆದರೆ, ಕೆನಡಾ ನೆಲದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಅವರ ಹತ್ಯೆಯು ಎರಡೂ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಹದಗೆಡಿಸಿದೆ ಎಂದು ಅಂಕಿತಾ ಆನಂದ್ ಒಪ್ಪಿಕೊಂಡಿದ್ದಾರೆ.

ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ನರೇಂದ್ರ ಮೋದಿ ಸರ್ಕಾರ ಭಾಗಿಯಾಗಿದೆ ಎಂದು ಕೆನಡಾದ ಮಾಜಿ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ್ದರು. ಟ್ರುಡೊ ಅವರ ಆರೋಪಗಳನ್ನು ಭಾರತ ತಳ್ಳಿಹಾಕಿದೆ. ಆದರೆ, ಈ ವಿಚಾರ ಎರಡೂ ರಾಷ್ಟ್ರಗಳ ಸಂಬಂಧ ಹದೆಗೆಡಿಸಿದೆ.

ಪ್ಯಾಲೆಸ್ತೀನಿಯನ್ನರ ನೆರವು ವಿತರಣಾ ಸ್ಥಳದ ಮೇಲೆ ಇಸ್ರೇಲ್ ದಾಳಿ; ಕನಿಷ್ಠ 30 ಜನ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...