Homeಮುಖಪುಟಮತ್ತೇ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿರುವ ಪ್ರಧಾನಿ ಮೋದಿ

ಮತ್ತೇ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿರುವ ಪ್ರಧಾನಿ ಮೋದಿ

- Advertisement -
ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಾಳೆ ಮಧ್ಯಾಹ್ನ 3 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.
ಕೊರೊನಾ ವೈರಸ್ ಕಾರಣದಿಂದ ಹೇರಲಾಗಿರುವ ಲಾಕ್‍ಡೌನ್ ಸೇರಿದಂತೆ ವಿವಿಧ ಕ್ರಮಗಳ ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ಪ್ರಧಾನಿ ಈ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಮೇ 17ರಂದು ಮೂರನೇ ಹಂತದ ಲಾಕ್‍ಡೌನ್ ಮುಕ್ತಾಯವಾಗಲಿದೆ. ಮುಂದೆ ಯಾವ ರೀತಿ ಕ್ರಮ ಕೈಗೊಳ್ಳಬೇಕು, ರಾಜ್ಯದಲ್ಲಿ ಯಾವ ರೀತಿ ಪರಿಸ್ಥಿತಿ ಇದೆ ಎಂಬ ವಿಚಾರವಾಗಿ ಸಲಹೆ ಸಂಗ್ರಹಿಸಲಿದ್ದಾರೆ ಎನ್ನಲಾಗಿದೆ.

- Advertisement -

ಕೊರೊನಾ ಸೋಂಕಿತರ ಸಂಖ್ಯೆ ಆಧಾರದ ಮೇಲೆ ವಿಭಾಗಿಸಲಾಗಿರುವ ರೆಡ್, ಆರೇಂಜ್ ಹಾಗೂ ಗ್ರೀನ್ ಝೋನ್ ನಿಯಮಗಳ ಬಗ್ಗೆ ದೇಶದ ಅನೇಕ ರಾಜ್ಯಗಳು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿವೆ. ಅದಲ್ಲದೆ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಹೋಗಲು ನೀಡಿದ್ದರಿಂದ ಗ್ರೀನ್ ಝೂನ್‌ಗಳು ಕೂಡ ಕೊರೊನಾ ಸೋಂಕಿನಿಂದ ತತ್ತರಿಸಿ ಹೋಗಿವೆ ಎಂದು ಅನೇಕ ರಾಜ್ಯಗಳ ಆರೋಪಿಸಿದೆ ಎಂದು ತಿಳಿದು ಬಂದಿದೆ.

ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕಮೀಷನರ್ ಜೊತೆಗೆ ವಿಡಿಯೋ ಕಾನ್ಫರೆನ್ಸ್‌ ನಡೆಸಲಿದ್ದಾರೆ. ಹಾಗೂ ದೇಶದ ಮುಂದಿನ ನಡೆಯ ಬಗ್ಗೆ ಸಲಹೆಯನ್ನು ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ.
ಭಾರತದಲ್ಲಿ ಒಟ್ಟು 62 ಸಾವಿರಕ್ಕಿಂತಲೂ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗಿದ್ದು, 19 ಸಾವಿರ ಜನರು ಮೃತಪಟ್ಟಿದ್ದಾರೆ.


ಇದನ್ನೂ ಓದಿ: ಕೊರೋನ ಹೆಸರಲ್ಲಿ ಕಾರ್ಮಿಕರಿಗೆ ಮೋದಿ ಸರಕಾರದ ಮೋಸ


ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಿ 


ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...