Homeಮುಖಪುಟಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಶರದ್ ಪವಾರ್!

ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಶರದ್ ಪವಾರ್!

- Advertisement -
- Advertisement -

ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಯಿಂದ ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ) ಸೋತ ವಾರಗಳ ನಂತರ ಎನ್‌ಸಿಪಿ-ಎಸ್‌ಪಿ ಮುಖ್ಯಸ್ಥ ಶರದ್ ಪವಾರ್ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ. ಆದರೆ, ಭೇಟಿಯ ವೇಳೆ ಅವರು ರಾಜ್ಯದ ರೈತರಿಬ್ಬರನ್ನು ಮೋದಿಗೆ ಭೇಟಿ ಮಾಡಿಸಿದ್ದಾಗಿ ವರದಿ ಹೇಳಿವೆ. ಪ್ರಧಾನಿ ಮೋದಿಯನ್ನು

ಶರದ್ ಪವಾರ್ ಅವರು ಪಶ್ಚಿಮ ಮಹಾರಾಷ್ಟ್ರದ ಫಾಲ್ತಾನ್‌ನ ಇಬ್ಬರು ರೈತರೊಂದಿಗೆ ಸಂಸತ್ತಿನ ಅವರ ಕಚೇರಿಯಲ್ಲಿ ಪ್ರಧಾನಿಯನ್ನು ಭೇಟಿ ಮಾಡಿದ್ದಾರೆ. ದಾಳಿಂಬೆ ಬೆಳೆಯುವ ರೈತರ ಸಮಸ್ಯೆಗೆ ಸಂಬಂಧಿಸಿದಂತೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ ಎನ್ನಲಾಗಿದೆ. ಈ ವೇಳೆ ಅವರು ರೈತರ ಜಮೀನಿನಲ್ಲಿ ಬೆಳೆದ ದಾಳಿಂಬೆ ಪೆಟ್ಟಿಗೆಯನ್ನು ಅವರಿಗೆ ನೀಡಿದ್ದಾಗಿ ವರದಿ ಹೇಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇತ್ತೀಚೆಗಷ್ಟೆ, ಶರದ್ ಪವಾರ್ ಅವರು ಫೆಬ್ರವರಿಯಲ್ಲಿ ರಾಷ್ಟ್ರ ರಾಜಧಾನಿಯ ಟಾಲ್ಕಟೋರಾ ಕ್ರೀಡಾಂಗಣದಲ್ಲಿ ನಡೆಯಲಿರುವ 98 ನೇ ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಲು ಆಹ್ವಾನಿಸಿ ಪ್ರಧಾನಿಗೆ ಪತ್ರ ಬರೆದಿದ್ದರು. ಆದರೆ, ಈ ಭೇಟಿಯಲ್ಲಿಅವರು ಸಾಹಿತ್ಯ ಸಮ್ಮೇಳನದ ವಿಷಯವನ್ನು ಪ್ರಸ್ತಾಪಿಸಿಲ್ಲ ಎಂದು ಪವಾರ್ ಪ್ರಧಾನಿ ಭೇಟಿಯ ನಂತರ ಹೇಳಿದ್ದಾರೆ. ಪ್ರಧಾನಿ ಮೋದಿಯನ್ನು

ಕಳೆದ ತಿಂಗಳು ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಎನ್‌ಸಿಪಿ(ಎಸ್‌ಪಿ)-ಶಿವಸೇನೆ(ಯುಬಿಟಿ)ಯ ಎಂವಿಎ ಮೈತ್ರಿಕೂಟವು ಬಿಜೆಪಿ-ಶಿವಸೇನೆ-ಎನ್‌ಸಿಪಿಯ ಮಹಾಯುತಿ ಮೈತ್ರಿಕೂಟದ ವಿರುದ್ಧ ಹೀನಾಯ ಸೋಲನ್ನು ಎದುರಿಸಿತ್ತು. 288 ಸದಸ್ಯರ ವಿಧಾನಸಭೆಯಲ್ಲಿ ಮಹಾಯುತಿ 235 ಸ್ಥಾನಗಳನ್ನು ಗೆದ್ದರೆ, ಎಂವಿಎ  46ಕ್ಕೆ ಸೀಮಿತವಾಯಿತು.

ಇದನ್ನೂ ಓದಿ: ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...