Homeಮುಖಪುಟಮಣಿಪುರದ ವಿಚಾರದಲ್ಲಿ ಪ್ರಧಾನಿ ಮೋದಿಯವರ ವೈಫಲ್ಯ ಅಕ್ಷಮ್ಯ : ಮಲ್ಲಿಕಾರ್ಜುನ ಖರ್ಗೆ

ಮಣಿಪುರದ ವಿಚಾರದಲ್ಲಿ ಪ್ರಧಾನಿ ಮೋದಿಯವರ ವೈಫಲ್ಯ ಅಕ್ಷಮ್ಯ : ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಮಣಿಪುರದ ವಿಚಾರದಲ್ಲಿ ಪ್ರಧಾನಿ ಮೋದಿಯವರ ವೈಫಲ್ಯ ಅಕ್ಷಮ್ಯ, ಒಪ್ಪುವಂತದಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

ಎಕ್ಸ್‌ನಲ್ಲಿ ಸುದೀರ್ಘ ಪೋಸ್ಟ್‌ ಹಾಕಿ ಪ್ರಧಾನಿ ಮೋದಿ ಹಾಗೂ ಒಕ್ಕೂಟ ಸರ್ಕಾರದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಮಣಿಪುರಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಪಕ್ಷದ ಕೆಲ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.

ಮಣಿಪುರದ ಮಾಜಿ ರಾಜ್ಯಪಾಲೆ ಅನುಸೂಯಾ ಉಯಿಕೆ ಅವರು ಅಲ್ಲಿನ ಜನರ ಪರ ಧ್ವನಿ ಎತ್ತಿದ್ದಾರೆ. “ಸಂಘರ್ಷ ಪೀಡಿತ ರಾಜ್ಯದ ಜನರು ಅಸಮಾಧಾನಗೊಂಡಿದ್ದಾರೆ ಮತ್ತು ದುಃಖಿತರಾಗಿದ್ದಾರೆ. ಪ್ರಧಾನಿ ಮೋದಿಯವರನ್ನು ಭೇಟಿಯಾಗಬೇಕೆಂದು ಅವರು ಬಯಸಿದ್ದಾರೆ” ಎಂದು ಹೇಳಿದ್ದಾರೆ ಎಂಬುವುದಾಗಿ ಖರ್ಗೆ ಬರೆದುಕೊಂಡಿದ್ದಾರೆ.

“ಮಣಿಪುರದಲ್ಲಿ ಹಿಂಸಾಚಾರ ಅವ್ಯಾಹತವಾಗಿ ಮುಂದುವರಿದಿದ್ದರೂ, ಮೋದಿ-ಶಾ ಸಹಭಾಗಿತ್ವದ ಪರಿಣಾಮಗಳನ್ನು ಜನರು ಅನುಭವಿಸುತ್ತಿದ್ದರೂ, ಕಳೆದ 16 ತಿಂಗಳಲ್ಲಿ ಪ್ರಧಾನಿ ಮೋದಿಯವರು ಒಂದೇ ಒಂದು ಸೆಕೆಂಡ್ ಅನ್ನು ಕೂಡ ಮಣಿಪುರದಲ್ಲಿ ಕಳೆದಿಲ್ಲ. ಮಣಿಪುರದ ಬಿಜೆಪಿ ಸಿಎಂ ರಾಜ್ಯಕ್ಕೆ ಸೇನೆಯನ್ನು ಆಹ್ವಾನಿಸಿದ್ದಾರೆ. ಈ ಮೂಲಕ ತನ್ನ ಸ್ಥಾನದ ಅಸಮರ್ಥತೆಯನ್ನು ನಾಚಿಕೆಯಿಲ್ಲದೆ ತೋರ್ಪಡಿಸಿದ್ದಾರೆ” ಎಂದು ಖರ್ಗೆ ಕಿಡಿಕಾರಿದ್ದಾರೆ.

“ಏಕೀಕೃತ ಕಮಾಂಡ್ ಮಣಿಪುರದಲ್ಲಿ ಭದ್ರತಾ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದೆ. ಪ್ರಸ್ತುತ ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳು, ರಾಜ್ಯ ಭದ್ರತಾ ಸಲಹೆಗಾರರು ಮತ್ತು ಭಾರತೀಯ ಸೇನೆಯ ತಂಡವು ಅಲ್ಲಿನ ಭದ್ರತೆ ನೋಡಿಕೊಳ್ಳುತ್ತಿದೆ. ಪ್ರಧಾನಮಂತ್ರಿಯವರಂತೆಯೇ, ಕೇಂದ್ರ ಗೃಹ ಸಚಿವರೂ ಕೂಡ ಮಣಿಪುರದಲ್ಲಿ ಭದ್ರತೆಯನ್ನು ಖಾತ್ರಿಪಡಿಸುವ ತಮ್ಮ ಸಾಂವಿಧಾನಿಕ ಜವಾಬ್ದಾರಿಯನ್ನು ಬಿಟ್ಟುಕೊಟ್ಟಿದ್ದಾರೆ. ರಾಜ್ಯಗಳ ಚುನಾವಣಾ ರ್‍ಯಾಲಿಗಳಲ್ಲಿ ಅವರು ನಿರತರಾಗಿದ್ದಾರೆ” ಎಂದು ಹೇಳಿದ್ದಾರೆ.

“ಡ್ರೋನ್ ಮತ್ತು ರಾಕೆಟ್-ಚಾಲಿತ ಗ್ರೆನೇಡ್ ದಾಳಿಗಳು ಪ್ರಾರಂಭವಾಗಿವೆ. ಇದು ಈಗ ರಾಷ್ಟ್ರೀಯ ಭದ್ರತೆಯ ಬೆದರಿಕೆಯಾಗಿ ಬದಲಾಗಿದೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಬಿಜೆಪಿ ರಾಜೀನಾಮೆ ನಾಟಕವಾಡುತ್ತಿದೆ” ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಪಕ್ಷದ ವತಿಯಿಂದ ನಾಲ್ಕು ಬೇಡಿಕೆಗಳನ್ನು ಮಲ್ಲಿಕಾರ್ಜುನ ಖರ್ಗೆ ಒಕ್ಕೂಟ ಸರ್ಕಾರದ ಮುಂದಿಟ್ಟಿದ್ದಾರೆ. ಅವುಗಳು ಹೀಗಿವೆ…

1.ಮಣಿಪುರ ಸಿಎಂ ತಕ್ಷಣವೇ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕು

2. ಕೇಂದ್ರ ಸರ್ಕಾರ ಸೂಕ್ಷ್ಮ ಭದ್ರತಾ ಪರಿಸ್ಥಿತಿಯ ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ರಾಜ್ಯ ಪಡೆಗಳ ಸಹಾಯದಿಂದ ಎಲ್ಲಾ ರೀತಿಯ ದಂಗೆಕೋರ ಗುಂಪುಗಳನ್ನು ದಮನ ಮಾಡಬೇಕು.

3. ಜನಾಂಗೀಯ ಹಿಂಸಾಚಾರದ ತನಿಖೆಗೆ ಆಯೋಗ ರಚಿಸಬೇಕು ಮತ್ತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ಮಾಡಬೇಕು. ಹಿಂಸಾಚಾರದ ತನಿಖೆ ನಡೆಸುತ್ತಿರುವ ಸಿಬಿಐ, ಎನ್‌ಐಎ ಮತ್ತು ಇತರ ಏಜೆನ್ಸಿಗಳನ್ನು ಮೋದಿ ಸರ್ಕಾರ ದುರುಪಯೋಗಪಡಿಸಿಕೊಳ್ಳಬಾರದು.

4. ರಾಜಕೀಯ ಪಕ್ಷಗಳು, ಪ್ರತಿನಿಧಿಗಳು ಮತ್ತು ಸಮುದಾಯಗಳ ಸದಸ್ಯರ ಸಮಿತಿ ಮಂಡಳಿ ರಚಿಸಬೇಕು. ಮಣಿಪುರದಲ್ಲಿ ಶಾಂತಿ ಸ್ಥಾಪಿಸಿ, ಸಹಜ ಸ್ಥಿತಿಯನ್ನು ಮರಳಿ ತರಬೇಕು. ಈ ಪ್ರಯತ್ನಗಳು ತಕ್ಷಣ ಪ್ರಾರಂಭಿಸಬೇಕು.

ರಾಜ್ಯದಲ್ಲಿ ಹಿಂಸಾಚಾರ ಕೊನೆಗೊಳಿಸಲು ಮೋದಿಯವರು ಏಕೆ ಮುಂದಾಗುತ್ತಿಲ್ಲ ಎಂದು ರಾಜ್ಯದ ಜನತೆ ಕೇಳುತ್ತಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇದನ್ನೂ ಓದಿ : ದೇಶದ ರಾಜಕೀಯದಲ್ಲಿ ಪ್ರೀತಿ, ಗೌರವ, ನಮ್ರತೆ ಕಾಣೆಯಾಗಿದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...