Homeಮುಖಪುಟದೇಶದ ಒಂದಿಂಚೂ ಭೂಮಿ ಚೀನಾ ವಶಪಡಿಸಿಕೊಂಡಿಲ್ಲ ಎಂಬ ಪ್ರಧಾನಿ ಮೋದಿ ಹೇಳಿಕೆ ಸಂಪೂರ್ಣ ಸುಳ್ಳು: ರಾಹುಲ್

ದೇಶದ ಒಂದಿಂಚೂ ಭೂಮಿ ಚೀನಾ ವಶಪಡಿಸಿಕೊಂಡಿಲ್ಲ ಎಂಬ ಪ್ರಧಾನಿ ಮೋದಿ ಹೇಳಿಕೆ ಸಂಪೂರ್ಣ ಸುಳ್ಳು: ರಾಹುಲ್

- Advertisement -
- Advertisement -

”ದೇಶದ ಒಂದಿಂಚೂ ಭೂಮಿಯನ್ನು ಚೀನಾ ವಶಪಡಿಸಿಕೊಂಡಿಲ್ಲ ಎಂಬ ಪ್ರಧಾನಿ ನರೇಂದ ಮೋದಿ ಹೇಳಿರುವುದು ಸಂಪೂರ್ಣ ಸುಳ್ಳು.. ಪ್ರಧಾನಿ ಸತ್ಯವನ್ನು ನುಡಿಯುತ್ತಿಲ್ಲ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಲಡಾಖ್ ಗಡಿ ವಿವಾದವನ್ನು ಮತ್ತೆ ಪ್ರಸ್ತಾಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದೇಶದ ಗಡಿ ಪ್ರದೇಶವನ್ನು ಚೀನಾ ವಶಪಡಿಸಿಕೊಂಡಿದೆ ಎಂಬುದು ಇಲ್ಲಿರುವ ಪ್ರತಿಯೊಬ್ಬ ನಾಗರಿಕರಿಗೂ ತಿಳಿದಿರುವ ವಿಷಯ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ಒಂಬತ್ತು ದಿನಗಳ ಲಡಾಖ್ ಪ್ರವಾಸ ಕೈಗೊಂಡಿದ್ದರು. ಇಂದು ಕೊನೆಯ ದಿನ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ”ನಿಮ್ಮ ಕಷ್ಟದಲ್ಲಿ ಕಾಂಗ್ರೆಸ್ ಪಕ್ಷ ಸದಾ ನಿಮ್ಮೊಂದಿಗೆ ಇರಲಿದೆ. ಅದು ರಕ್ಷಣೆಯ ಅಥವಾ ಉದ್ಯೋಗಕ್ಕೆ ಸಂಬಂಧಿಸಿದ ವಿಷಯಗಳಾಗಿರಬಹುದು. ಲಡಾಕ್ ನೈಸರ್ಗಿಕ ಸಂಪನ್ಮೂಲದಿಂದ ಸಮೃದ್ಧವಾಗಿದೆ. 21ನೇ ಶತಮಾನವು ಸೌರಶಕ್ತಿಯಿಂದ ಕೂಡಿದ್ದು, ಲಡಾಖ್ ಗೆ ಯಾವುದೇ ಕೊರತೆ ಕಾಡುತ್ತಿಲ್ಲ” ಎಂದು ಹೇಳಿದರು.

”ಗೌತಮ್ ಅದಾನಿಗಾಗಿ ನಿಮ್ಮ ನೆಲವನ್ನು ಸ್ವಾಧೀನಪಡಿಸಿಕೊಳ್ಳಲು ಬಿಜೆಪಿ ಬಯಸುತ್ತಿದೆ. ಆದರೆ ಯಾವುದೇ ಕಾರಣಕ್ಕೂ ಅದನ್ನು ಬಿಡುವುದಿಲ್ಲ” ಎಂದು ಅವರು ಹೇಳಿದರು.

”ಕೆಲವರು ತಮ್ಮ ಹೃದಯದಲ್ಲಿರುವುದರ ಬಗ್ಗೆ ಮಾತನಾಡುತ್ತಾರೆ ಆದರೆ ನಾನು ಇಲ್ಲಿ ನಿಮ್ಮ ಹೃದಯದಲ್ಲಿ ಏನಿದೆ ಎಂಬುದನ್ನು ತಿಳಿಯಲು ಬಂದಿದ್ದೇನೆ. ಗಾಂಧಿ ಮತ್ತು ಕಾಂಗ್ರೆಸ್‌ನ ಸಿದ್ಧಾಂತವು ಲಡಾಖ್ ಜನರ ರಕ್ತದಲ್ಲಿ ಮತ್ತು ಡಿಎನ್ಎಯಲ್ಲಿ ಅಡಗಿದೆ” ಎಂದು ಹೇಳಿದರು.

ಬಿಜೆಪಿ ಮತ್ತು ಆರ್‌ಎಸ್‌ಎಸ್ ಹರಡಿದ ದ್ವೇಷವನ್ನು ತೊಲಗಿಸಲು ಭಾರತ್ ಜೋಡ ಯಾತ್ರೆ ನಡೆಸಿರುವುದಾಗಿ ಅವರು ಹೇಳಿದರು.

ಇದನ್ನೂ ಓದಿ: ಲಡಾಖ್‌ಗೆ ಬೈಕ್‌ ರೈಡ್‌ ಹೊರಟ ರಾಹುಲ್ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...