Homeಮುಖಪುಟರೈಲ್ವೆ ನಿಲ್ದಾಣಗಳಲ್ಲಿ ಮೋದಿ ಪೋಟೋ ಇರುವ ಸೆಲ್ಫಿ ಬೂತ್‌ ನಿರ್ಮಾಣ: ಸಾರ್ವಜನಿಕ ನಿಧಿ ಬಳಕೆ

ರೈಲ್ವೆ ನಿಲ್ದಾಣಗಳಲ್ಲಿ ಮೋದಿ ಪೋಟೋ ಇರುವ ಸೆಲ್ಫಿ ಬೂತ್‌ ನಿರ್ಮಾಣ: ಸಾರ್ವಜನಿಕ ನಿಧಿ ಬಳಕೆ

- Advertisement -
- Advertisement -

ದೇಶದ ವಿವಿಧ ರೈಲ್ವೆ ನಿಲ್ದಾಣಗಳಲ್ಲಿ ಮೋದಿ ಪೋಟೋ ಇರುವ  3D ಸೆಲ್ಫಿ ಬೂತ್‌ ನಿರ್ಮಾಣ ಕಾರ್ಯ ನಡೆಯುತ್ತಿದೆ. ಅದಕ್ಕೆ 1.62 ಕೋಟಿ ರೂ.ಖರ್ಚು ಆಗಲಿದೆ ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಪ್ರಶ್ನೆಗೆ ಕೇಂದ್ರ ರೈಲ್ವೆ ಇಲಾಖೆ ಉತ್ತರವನ್ನು ನೀಡಿದ್ದು, ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಚಾರಕ್ಕೆ ಸಾರ್ವಜನಿಕರ ಹಣವನ್ನು ದುರ್ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಈ ಮೊದಲು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ(ಯುಜಿಸಿ) ಪ್ರಧಾನಿ ನರೇಂದ್ರ ಮೋದಿ ಹಿನ್ನೆಲೆಗೆ ಇರುವಂತೆ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸಲು ದೇಶಾದ್ಯಂತ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಗೆ ಪತ್ರ ಬರೆದು ವಿವಾದವನ್ನು ಸೃಷ್ಟಿಸಿತ್ತು. ಇದೀಗ ಮೋದಿ ಚಿತ್ರವಿರುವ 3D ಸೆಲ್ಫಿ ಬೂತ್‌ಗಳ ನಿರ್ಮಾಣ ಕಾರ್ಯ ದೇಶದ ಹಲವು ರೈಲ್ವೇ ನಿಲ್ಧಾಣದಲ್ಲಿ ನಡೆಯುತ್ತಿದೆ ಎನ್ನುವುದು ಬಹಿರಂಗವಾಗಿದೆ.

ಮೋದಿ ಅವರ ಚಿತ್ರವಿರುವ ಶಾಶ್ವತ 3D ಸೆಲ್ಫಿ ಬೂತ್‌ಗೆ 6.25 ಲಕ್ಷದವರೆಗೆ ಮತ್ತು ತಾತ್ಕಾಲಿಕ ಸೆಲ್ಫಿ ಬೂತ್‌ಗೆ 1.25 ಲಕ್ಷಗಳವರೆಗೆ ವೆಚ್ಚ ಮಾಡಲಾಗುತ್ತದೆ ಎಂದು ಆರ್‌ಟಿಐ ನೀಡಿರುವ ಮಾಹಿತಿಯು ಬಹಿರಂಗಪಡಿಸಿದೆ.

ನಿವೃತ್ತ ರೈಲ್ವೇ ಅಧಿಕಾರಿ ಅಜಯ್ ಬೋಸ್ ಅವರು ಆರ್‌ಟಿಐ ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರವಾಗಿ ಸೆಂಟ್ರಲ್ ರೈಲ್ವೇ ಡೆಪ್ಯುಟಿ ಜನರಲ್ ಮ್ಯಾನೇಜರ್ ಅಭಯ್ ಮಿಶ್ರಾ ಅವರು ಪ್ರತಿಕ್ರಿಯಿಸಿದ್ದು, ಮೋದಿ ಅವರ 3ಡಿ ಸೆಲ್ಫಿ ಬೂತ್‌ಗಳನ್ನು ಮುಂಬೈ, ಭೂಸಾವಲ್, ನಾಗಪುರ, ಪುಣೆ ಮತ್ತು ಸೊಲ್ಲಾಪುರಗಳ 50 ರೈಲು ನಿಲ್ದಾಣಗಳಲ್ಲಿ ಸ್ಥಾಪಿಸಲಾಗಿದೆ. ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್, ಕಲ್ಯಾಣ್, ನಾಗ್ಪುರ ಮತ್ತು ಬೇತುಲ್ ಸೇರಿದಂತೆ 30 ಕೆಟಗರಿ ಎ ಸ್ಟೇಷನ್‌ಗಳಲ್ಲಿ ತಾತ್ಕಾಲಿಕ ಬೂತ್‌ಗಳನ್ನು ಸ್ಥಾಪಿಸಿದರೆ, ಕರ್ಜತ್, ಲಾತೂರ್ ಮತ್ತು ಕೋಪರ್‌ಗಾಂವ್ ಸೇರಿದಂತೆ 20 ನಿಲ್ದಾಣಗಳಲ್ಲಿ ಶಾಶ್ವತ ಬೂತ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದೆ.

ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಷನ್ 3D ಸೆಲ್ಫಿ ಬೂತ್‌ಗಳ ತಾತ್ಕಾಲಿಕ ಸ್ಥಾಪನೆಗೆ 1.25 ಲಕ್ಷ ಮತ್ತು  ಶಾಶ್ವತ ಸ್ಥಾಪನೆಗೆ 6.25 ಲಕ್ಷ ದರಗಳನ್ನು ಅನುಮೋದಿಸಿದೆ ಎಂದು RTI ಮಾಹಿತಿಯು ಹೇಳುತ್ತದೆ.

ಕೇಂದ್ರ ರೈಲ್ವೇಯಲ್ಲಿನ ತಾತ್ಕಾಲಿಕ ಮತ್ತು ಶಾಶ್ವತ ಮೋದಿ ಪೋಟೋ ಇರುವ ಬೂತ್‌ಗಳ ನಿರ್ಮಾಣಕ್ಕೆ ಒಟ್ಟು ವೆಚ್ಚ 1.62 ಕೋಟಿ ಆಗಲಿದೆ. ಇದರಲ್ಲಿ ಶಾಶ್ವತ ಪೋಟೋ ಬೂತ್‌ಗಳಿಗೆ 1.25 ಕೋಟಿ ಮತ್ತು ತಾತ್ಕಾಲಿಕವಾಗಿ ಸ್ಥಾಪಿಸಲು 37.5 ಲಕ್ಷ ರೂ.ಆಗಲಿದೆ ಎಂದು ಆರ್‌ಟಿಐ ಮಾಹಿತಿ ಬಹಿರಂಗಪಡಿಸಿದೆ.

ಈ ಕುರಿತ ಆರ್‌ಟಿಐ ಅರ್ಜಿಗೆ ಉತ್ತರಿಸಿದ ಉತ್ತರ ರೈಲ್ವೇ ಇಲಾಖೆ, ಪ್ರಧಾನಿಯವರ ಸೆಲ್ಫಿ ಫೋಟೋ ಬೂತ್‌ಗಳನ್ನು ರೈಲ್ವೆ ನಿಲ್ದಾಣಗಳಾದ್ಯಂತ 100 ವಿವಿಧ ಪಾಯಿಂಟ್‌ಗಳಲ್ಲಿ ಸ್ಥಾಪಿಸಲಾಗುವುದು. ಕೆಲವು ನಿಲ್ದಾಣಗಳಲ್ಲಿ ಒಂದಕ್ಕಿಂತ ಹೆಚ್ಚು ಬೂತ್‌ಗಳನ್ನು ಸ್ಥಾಪಿಸಲಾಗುವುದು. ಉದಾಹರಣೆಗೆ ಡೆಹ್ರಾಡೂನ್, ಅಂಬಾಲಾ, ನವದೆಹಲಿ, ಅಮೃತಸರ, ಅಯೋಧ್ಯೆ, ಚಂಡೀಗಢಗಳು ಪ್ರತಿ ನಿಲ್ದಾಣದಲ್ಲಿ 3 ಬೂತ್ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದೆ.

ಉತ್ತರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿಯು ಈ ಬಗ್ಗೆ 8 ಏಜೆನ್ಸಿಗಳಿಗೆ ಸಮಾನವಾಗಿ ಗುತ್ತಿಗೆ ಕೆಲಸವನ್ನು ಹಂಚಲಾಗಿದೆ ಎಂದು ಹೇಳಿದರೆ, ಅಧಿಕಾರಿಗಳು ಕಾಮಗಾರಿಯನ್ನು ಗುತ್ತಿಗೆ ಪಡೆದಿರುವ ಏಜೆನ್ಸಿಗಳ ಹೆಸರು ಅಥವಾ ಒಟ್ಟು ವೆಚ್ಚವನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ.

ತಿರುಚ್ಚಿರಾಪಳ್ಳಿ ಜಂಕ್ಷನ್, ತಂಜಾವೂರು ಮತ್ತು ವೆಲ್ಲೂರ್ ಕಂಟೋನ್ಮೆಂಟ್ ಸೇರಿ  11 ನಿಲ್ದಾಣಗಳಲ್ಲಿ ಪ್ರಧಾನ ಮಂತ್ರಿಯವರ 3D ಸೆಲ್ಫಿ ಫೋಟೋ ಬೂತ್‌ಗಳನ್ನು ಸ್ಥಾಪಿಸಲಾಗುವುದು ಎಂದು ದಕ್ಷಿಣ ರೈಲ್ವೆಯ ತಿರುಚ್ಚಿರಾಪಳ್ಳಿ ವಿಭಾಗವು RTI ಪ್ರಶ್ನೆಗೆ ಉತ್ತರಿಸಿ ಹೇಳಿದೆ.

ಸೆಲ್ಫಿ ಬೂತ್‌ಗಳ ಸ್ಥಾಪನೆಗೆ ಖರ್ಗೆ ಆಕ್ರೋಶ:

ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವಿರುವ ಸೆಲ್ಫಿ ಬೂತ್‌ಗಳನ್ನು ರೈಲು ನಿಲ್ದಾಣಗಳಲ್ಲಿ ಸ್ಥಾಪಿಸಿವ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಸೆಲ್ಫಿ ಬೂತ್‌ಗಳನ್ನು ಸ್ಥಾಪಿಸುವುದು ತೆರಿಗೆದಾರರ ಹಣದ ದುರ್ಬಳಕೆ ಎಂದು ಹೇಳಿದ್ದಾರೆ.

ಎಕ್ಸ್‌ನಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ ಖರ್ಗೆ, ಮೋದಿ ಸರ್ಕಾರದ ಸ್ವಯಂ ಗೀಳಿನ ಪ್ರಚಾರಕ್ಕೆ ಯಾವುದೇ ಮಿತಿಯಿಲ್ಲ. ರೈಲ್ವೆ ನಿಲ್ದಾಣಗಳಲ್ಲಿ ಮೋದಿಜಿಯವರ 3D ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸುವ ಮೂಲಕ ತೆರಿಗೆದಾರರ ಹಣವನ್ನು ಸಂಪೂರ್ಣವಾಗಿ ದುರ್ಬಳಕೆ ಮಾಡಲಾಗುತ್ತಿದೆ. ಈ ಹಿಂದೆ ಪ್ರಧಾನಿಯವರ ಪ್ರಮುಖ ಕಟೌಟ್‌ಗಳಿರುವ 822 ಸೆಲ್ಫಿ ಪಾಯಿಂಟ್‌ಗಳನ್ನು ಅಳವಡಿಸುವಂತೆ ಸಶಸ್ತ್ರ ಪಡೆಗಳಿಗೆ ಆದೇಶ ನೀಡುವ ಮೂಲಕ ದೇಶದ ವೀರ ಸೈನಿಕರ ರಕ್ತ ಮತ್ತು ತ್ಯಾಗವನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗಿದೆ. ಮೋದಿ ಸರ್ಕಾರವು ರಾಜ್ಯಗಳಿಗೆ ಬರ ಮತ್ತು ಪ್ರವಾಹ ಪರಿಹಾರವನ್ನು ಒದಗಿಸಿಲ್ಲ. ವಿರೋಧ ಪಕ್ಷದ ಆಡಳಿತದ ರಾಜ್ಯಗಳಿಗೆ MGNREGA ಯೋಜನೆಯ ಹಣದ ಪಾವತಿ ಬಾಕಿ ಉಳಿದಿವೆ. ಆದರೆ ಈ ಕೀಳು ಮಟ್ಟದ ಚುನಾವಣಾ ಪ್ರಚಾರಕ್ಕೆ ಸಾರ್ವಜನಿಕ ಹಣವನ್ನು ವ್ಯರ್ಥ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಪೋಸ್ಟ್‌ನಲ್ಲಿ ಆರ್‌ಟಿಐ ಅಡಿಯಲ್ಲಿ ಪಡೆದ ಉತ್ತರದ ಪ್ರತಿಯನ್ನು ಕೂಡ ಹಂಚಿಕೊಂಡಿದ್ದಾರೆ. ಅದರಲ್ಲಿ ಕೇಂದ್ರ ರೈಲ್ವೆ ಇಲಾಖೆಯ ಅಡಿಯಲ್ಲಿ ತಾತ್ಕಾಲಿಕ ಮತ್ತು ಶಾಶ್ವತ ಸೆಲ್ಫಿ ಬೂತ್‌ಗಳನ್ನು ಸ್ಥಾಪಿಸಿರುವ ನಿಲ್ದಾಣಗಳನ್ನು ಪಟ್ಟಿ ಮಾಡಲಾಗಿತ್ತು.

ಇದನ್ನು ಓದಿ: ಮೌಸಾವಿ ಹತ್ಯೆ: ಗಾಝಾದಂತೆ ಸಿರಿಯಾ ಮೇಲೂ ದಾಳಿಗೆ ಇಸ್ರೇಲ್‌ ಸಜ್ಜು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...