Homeಮುಖಪುಟಪ್ರಧಾನಿ ಮೋದಿಯವರ ವೆಬ್ ಸೈಟ್ ನ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್!; ತನಿಖೆ ನಡೆಸುತ್ತಿದ್ದೇವೆ ಎಂದ...

ಪ್ರಧಾನಿ ಮೋದಿಯವರ ವೆಬ್ ಸೈಟ್ ನ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್!; ತನಿಖೆ ನಡೆಸುತ್ತಿದ್ದೇವೆ ಎಂದ ಟ್ವಿಟರ್ ವಕ್ತಾರ

@Narendramodi_in ಖಾತೆಯಲ್ಲಿ ಪೋಸ್ಟ್ ಮಾಡಿದ ಟ್ವೀಟ್‌ಗಳ ಕುರಿತು ಮೋದಿಯವರ ಕಚೇರಿ ತಕ್ಷಣ ಸ್ಪಂದಿಸಲಿಲ್ಲ.

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೊದಿಯವರ ವೆಬ್ ಸೈಟ್ ನ ಅಧಿಕೃತ ಟ್ವಿಟರ್ ಖಾತೆಯನ್ನು ಇಂದು ಬೆಳಗಿನ ಜಾವ ಹ್ಯಾಕ್ ಮಾಡಲಾಗಿದೆ. ಈ ಖಾತೆಯ ಭದ್ರತೆಗಾಗಿ ಕ್ರಮತೆಗೆದುಕೊಂಡು, ತನಿಖೆಯನ್ನು ಚುರುಕುಗೊಳಿಸಲಾಗಿದೆ ಎಂದು ಟ್ವಿಟರ್ ವಕ್ತಾರರು ಖಚಿತಪಡಿಸಿದ್ದಾರೆ.

“ಈ ಘಟನೆಯ ಬಗ್ಗೆ ನಮಗೆ ಅರಿವಿದೆ. ಹ್ಯಾಕ್ ಮಾಡಲಾದ ಖಾತೆಯನ್ನು ಭದ್ರಪಡಿಸಿಕೊಳ್ಳಲು ಕ್ರಮಗಳನ್ನು ಕೈಗೊಂಡಿದ್ದೇವೆ. ಪ್ರಸ್ತುತ ಪರಿಸ್ಥಿತಿಯನ್ನು ಸಕ್ರಿಯವಾಗಿ ಪರಿಶೀಲಿಸುತ್ತಿದ್ದೇವೆ. ಆದರೆ ಇದು ಹೆಚ್ಚುವರಿ ಖಾತೆಗಳ ಮೇಲೆ ಪರಿಣಾಮ ಬೀರಿದೆಯೇ ಎಂಬುದು ನಮಗೆ ತಿಳಿದುಬಂದಿಲ್ಲ” ಎಂದು ಟ್ವಿಟರ್ ನ ವಕ್ತಾರರೊಬ್ಬರು ಹೇಳಿದ್ದಾರೆಂದು ಎನ್ ಡಿ ಟಿ ವಿ ವರದಿ ಮಾಡಿದೆ.

ಜುಲೈ ತಿಂಗಳಿನಲ್ಲಿ, ಹಲವಾರು ಪ್ರಮುಖ ವ್ಯಕ್ತಿಗಳ  ಟ್ವಿಟರ್ ಖಾತೆಗಳನ್ನು ಹ್ಯಾಕ್ ಮಾಡಲಾಗಿತ್ತು. ಇದಾದ ಒಂದು ತಿಂಗಳ ನಂತರ ಈ ಘಟನೆ ಸಂಭವಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರ ವೈಯಕ್ತಿಕ ವೆಬ್‌ಸೈಟ್‌ನ ಖಾತೆಯನ್ನು, ಕ್ರಿಪ್ಟೋಕರೆನ್ಸಿಯ ಮೂಲಕ ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ಮೋದಿ ತನ್ನ ಅನುಯಾಯಿಗಳನ್ನು ಕೇಳುವ ಸರಣಿ ಟ್ವೀಟ್‌ಗಳೊಂದಿಗೆ ಹ್ಯಾಕ್ ಮಾಡಲಾಗಿದೆ ಎಂದು ಟ್ವಿಟರ್ ಗುರುವಾರ ದೃಢಪಡಿಸಿದೆ.

ಇದನ್ನೂ ಓದಿ: ವಿಶ್ವ ಹಿಂದೂ ಪರಿಷತ್‌ ವೆಬ್ ಸೈಟ್ ಹ್ಯಾಕ್ ಮಾಡಿ ಮೋದಿ ವಿರುದ್ದ ಹೋರಾಡಲು ಕರೆಕೊಟ್ಟ ಹ್ಯಾಕರ್

@Narendramodi_in ಖಾತೆಯಲ್ಲಿ ಪೋಸ್ಟ್ ಮಾಡಿದ ಟ್ವೀಟ್‌ಗಳ ಕುರಿತು ಮೋದಿಯವರ ಕಚೇರಿ ತಕ್ಷಣ ಸ್ಪಂದಿಸಲಿಲ್ಲ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಈ ಖಾತೆಯು, ಮೋದಿಯವರ ವೈಯಕ್ತಿಕ ವೆಬ್‌ಸೈಟ್ (https://www.narendramodi.in/) ಮತ್ತು ನರೇಂದ್ರ ಮೋದಿ ಮೊಬೈಲ್ ಅಪ್ಲಿಕೇಶನ್‌, 2.5 ದಶಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಅಧಿಕೃತ ಟ್ವಿಟರ್ ಹ್ಯಾಂಡಲ್ ಆಗಿದೆ.

ಈ ಘಟನೆಯಿಂದ, ಪ್ರಧಾನಿ ಮೋದಿಯವರ ವೈಯಕ್ತಿಕ ಟ್ವಿಟ್ಟರ್ ಖಾತೆಯಲ್ಲಿ ಯಾವುದೇ ಕೆಟ್ಟ ಪರಿಣಾಮ ಬೀರಿಲ್ಲ. ಈ ಖಾತೆಗೆ ಸುಮಾರು  61 ದಶಲಕ್ಷಕ್ಕೂ ಹೆಚ್ಚು ಅನುಯಾಯಿಗಳಿದ್ದಾರೆ.

ಅಮೇರಿಕಾ ಅಧ್ಯಕ್ಷೀಯ ಅಭ್ಯರ್ಥಿ ಜೋ ಬಿಡನ್, ಮಾಜಿ ಅಮೇರಿಕಾ ಅಧ್ಯಕ್ಷ ಬರಾಕ್ ಒಬಾಮ ಮತ್ತು ಬಿಲಿಯನೇರ್ ಎಲೋನ್ ಮಸ್ಕ್ ಸೇರಿದಂತೆ ಟ್ವಿಟರ್ ನ ಕೆಲವು ಉನ್ನತ ಧ್ವನಿಗಳನ್ನು ಅಪಹರಿಸಲು, ಹ್ಯಾಕರ್ಸ್ ಜುಲೈನಲ್ಲಿ ಟ್ವಿಟ್ಟರ್ ನ ಆಂತರಿಕ ವ್ಯವಸ್ಥೆಗಳನ್ನು ಹ್ಯಾಕ್ ಮಾಡಿ, ಡಿಜಿಟಲ್ ಕರೆನ್ಸಿಯನ್ನು ಕೋರಲು ಅವುಗಳನ್ನು ಬಳಸಿದ್ದರು.


ಇದನ್ನೂ ಓದಿ: ಹ್ಯಾಕರ್ಸ್‍ಗಳ ಕಾಟ : ನಟಿಯರ ಗೋಳಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...