Homeಕರ್ನಾಟಕನಿಲ್ಲದ ಪ್ರವಾಹ, ಬಾರದ ಪರಿಹಾರ: ಇಂದಿನ ಪ್ರಧಾನಿ ಸಭೆಯಲ್ಲಿ ದನಿಯೆತ್ತಲು ವಿಪಕ್ಷಗಳ ಆಗ್ರಹ

ನಿಲ್ಲದ ಪ್ರವಾಹ, ಬಾರದ ಪರಿಹಾರ: ಇಂದಿನ ಪ್ರಧಾನಿ ಸಭೆಯಲ್ಲಿ ದನಿಯೆತ್ತಲು ವಿಪಕ್ಷಗಳ ಆಗ್ರಹ

ಕಳೆದ ವರ್ಷ ಅಕ್ಟೋಬರ್ ನಲ್ಲಿ ಕೇಂದ್ರವು ತಾತ್ಕಾಲಿಕವಾಗಿ 1200 ಕೋಟಿ ನೆರೆ ಪರಿಹಾರ ಧನ ರಾಜ್ಯಕ್ಕೆ ಬಿಡುಗಡೆ ಮಾಡಿತ್ತು. 2ನೇ ಕಂತಿನಲ್ಲಿ 1869 ಕೋಟಿ ಬಿಡುಗಡೆ ಮಾಡುವುದಾಗಿ ಹೇಳಿತ್ತು. ಆದರೆ ವಾಸ್ತವಾಗಿ ಜನವರಿಯಲ್ಲಿ 669 ಕೋಟಿ ರೂ ಮಾತ್ರ ಬಿಡುಗಡೆ ಮಾಡಿದೆ.

- Advertisement -
- Advertisement -

ದೇಶದಲ್ಲಿ ಈಗಾಗಲೇ ಪ್ರವಾಹದಿಂದಾಗಿ ಜನ ತತ್ತರಿಸುವಂತಾಗಿದೆ. ಈಗಿರುವ ಕೊರೊನಾ ಸಾಂಕ್ರಾಮಿಕದ ನಡುವೆ ಪ್ರವಾಹದ ಹೊಡೆತ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದರ ನಡುವೆ ನೆರೆ ಪರಿಹಾರಕ್ಕಾಗಿ ಪ್ರವಾಹಕ್ಕೆ ತುತ್ತಾದ ರಾಜ್ಯಗಳು ಕೇಂದ್ರ ಸರ್ಕಾರಕ್ಕೆ ಪದೇ ಪದೇ ಮನವಿ ಮಾಡಿದರೂ ಇದುವರೆಗೂ ಕೇಂದ್ರ ಸೂಕ್ತ ಪರಿಹಾರ ನೀಡಿಲ್ಲ. ಈ ನಡುವೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾಜ್ಯ ಸಚಿವರ ಸಭೆ ಕರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಾರಿಯಾದರೂ ನ್ಯಾಯಯುತ ಪರಿಹಾರಕ್ಕಾಗಿ ಸಮರ್ಥವಾಗಿ ದನಿಯೆತ್ತಬೇಕೆಂದು ರಾಜ್ಯದ ವಿರೋಧ ಪಕ್ಷಗಳು ಆಗ್ರಹಿಸಿವೆ.

2019ರ ಆಗಸ್ಟ್‌ನಲ್ಲಿ ಅಪ್ಪಳಿಸಿದ ನೆರೆಯಿಂದಾಗಿ ರಾಜ್ಯದ ನೂರಾರು ಜನರು ಸಾವನ್ನಪ್ಪಿದ್ದು, ಲಕ್ಷಾಂತರ ಜನ ವಸತಿ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಲಕ್ಷಾಂತರ ಹೆಕ್ಟೇರ್ ಬೆಳೆ ನಾಶವಾಗಿ ರೈತರು ಬೀದಿಗೆ ಬಿದ್ದರು. ಅದರಲ್ಲಿ ಬಹಳಷ್ಟು ಜನರಿಗೆ ವರ್ಷ ಕಳೆದರೂ ಪರಿಹಾರ ಸಿಕ್ಕಿಲ್ಲ ಎಂಬ ದೂರುಗಳು ಸಾಮಾನ್ಯವಾಗಿವೆ. ಮುಖ್ಯಮಂತ್ರಿ ಯಡಿಯೂರಪ್ಪನವರು ಕೇಂದ್ರಕ್ಕೆ ನಿಯೋಗ ಕರೆದುಕೊಂಡು ಹೋದರೂ ಪರಿಹಾರ ಸಿಕ್ಕಿರಲಿಲ್ಲ. ಕಳೆದ ವರ್ಷ ತುಮಕೂರಿಗೆ ಪ್ರಧಾನಿ ಆಗಮಿಸಿದ್ದಾಗ, ಯಡಿಯೂರಪ್ಪನವರು ವೇದಿಕೆಯ ಮೇಲೆಯೇ ಬೇಡಿಕೊಂಡರೂ ಮೋದಿಯವರು ನೆರೆಯ ಕುರಿತು ಮಾತನಾಡಿರಲಿಲ್ಲ ಮತ್ತು ಪರಿಹಾರ ಬಿಡುಗಡೆ ಮಾಡಲಿಲ್ಲ ಎಂಬುದು ಗಮನಾರ್ಹ ಸಂಗತಿಯಾಗಿದೆ.

ಜಿಎಸ್‌ಟಿಯಿಂದ ರಾಜ್ಯಕ್ಕೆ ಬರಬೇಕಾಗಿದ್ದ ಪಾಲು ಬಂದಿಲ್ಲದ್ದರಿಂದ, ಪ್ರವಾಹದೊಟ್ಟಿಗೆ ರಾಜ್ಯದ ಹಲವು ಕಡೆ ಬರವೂ ಆವರಿಸಿದ್ದರಿಂದ ರಾಜ್ಯ ಸಂಕಷ್ಟದಲ್ಲಿ ನರಳಬೇಕಾಯಿತು. ಕಳೆದ 3 ವರ್ಷಗಳಿಂದ ರಾಜ್ಯವು ಬರ-ಪ್ರವಾಹಗಳಿಂದ ನಲುಗುತ್ತಿದೆ.

ಕರ್ನಾಟಕ್ಕೆ ಬಂದ ನೆರೆ ಪರಿಹಾರವೆಷ್ಟು?

ಕಳೆದ ವರ್ಷ ಅಕ್ಟೋಬರ್ ನಲ್ಲಿ ಕೇಂದ್ರವು ತಾತ್ಕಾಲಿಕವಾಗಿ 1200 ಕೋಟಿ ನೆರೆ ಪರಿಹಾರ ಧನ ರಾಜ್ಯಕ್ಕೆ ಬಿಡುಗಡೆ ಮಾಡಿತ್ತು. 2ನೇ ಕಂತಿನಲ್ಲಿ 1869 ಕೋಟಿ ಬಿಡುಗಡೆ ಮಾಡುವುದಾಗಿ ಹೇಳಿತ್ತು. ಆದರೆ ವಾಸ್ತವಾಗಿ ಜನವರಿಯಲ್ಲಿ 669 ಕೋಟಿ ರೂ ಮಾತ್ರ ಬಿಡುಗಡೆ ಮಾಡಿದೆ, ಇನ್ನು 1200 ಕೋಟಿ ರಾಜ್ಯಕ್ಕೆ ಬಂದಿಲ್ಲ ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿತ್ತು. ಇದರ ಕುರಿತು ವಿರೋಧ ಪಕ್ಷಗಳು ಆಕ್ಷೇಪ ಎತ್ತಿವೆ.

“ಕಳೆದ ವರ್ಷದ ಅತಿವೃಷ್ಟಿಯ ಅಂದಾಜು ನಷ್ಟ ರೂ.1,00,000 ಕೋಟಿ. ರಾಜ್ಯಸರ್ಕಾರದ ವರದಿ ಪ್ರಕಾರ ನಷ್ಟ- ರೂ 50,000 ಕೋಟಿ. ಪರಿಹಾರ ಕೇಳಿದ್ದು
ರೂ.35,000 ಕೋಟಿ. ಕೇಂದ್ರ ಸರ್ಕಾರ ಕೊಟ್ಟಿದ್ದು ಕೇವಲ ರೂ.1860 ಕೋಟಿ ಮಾತ್ರ. ರಾಜ್ಯದ ಸಚಿವರು ಹಳೆಯ ಬಾಕಿಯನ್ನೂ ಕೇಳುವ ಧೈರ್ಯ ಮಾಡಲಿ” ಎಂದು ಸಿದ್ದರಾಮಯ್ಯನವರು ಒತ್ತಾಯಿಸಿದ್ದಾರೆ.

ಜುಲೈ ತಿಂಗಳಿನಲ್ಲಿಯೇ ರಾಜ್ಯದ ನಾಲ್ಕು ಸಚಿವರಿಗೆ ಪತ್ರಬರೆದು, ಕಳೆದ ವರ್ಷ ಬಿಡುಗಡೆಯಾದ ಪರಿಹಾರ ಹಣದ ಮೊತ್ತ, ಖರ್ಚು ಮಾಡಿದ ಲೆಕ್ಕ, ನಷ್ಟದ ಲೆಕ್ಕ, ಪ್ರವಾಹದಿಂದ ಹಾನಿಗೊಳಗಾದ ರಸ್ತೆ, ಕಟ್ಟಡ, ಸೇತುವೆಗಳೆಷ್ಟು, ಅವುಗಳಲ್ಲಿ ಎಷ್ಟು ದುರಸ್ತಿಗೊಂಡಿವೆ ಎಂಬ ವಿವರವನ್ನು ಕೇಳಿ ವಿರೋಧ ಪಕ್ಷದ ಮುಖಂಡರಾದ ಸಿದ್ದರಾಮಯ್ಯನವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಈ ಕುರಿತು ಮಾತನಾಡಿರುವ ಸಿದ್ಧರಾಮಯ್ಯ, “ಈ ಬಾರಿಯಾದರೂ ರಾಜ್ಯದಿಂದ ಸಶಕ್ತ ತಂಡವೊಂದನ್ನು ನಿಯೊಗ ಕರೆದುಕೊಂಡು ಹೋಗಬೇಕು. ಪ್ರಧಾನ ಮಂತ್ರಿಯವರ ಮುಂದೆ ವ್ಯರ್ಥ ಕಸರತ್ತು ಆಗಬಾರದು. ತಕ್ಷಣ ಅಧಿಕಾರಿಗಳಿಂದ ಸ್ಥಳಕ್ಕೆ ಭೇಟಿ ಕೊಟ್ಟ ವರದಿಯನ್ನು ಪ್ರಧಾನಮಂತ್ರಿಯವರಿಗೆ ಕಳುಹಿಸಿಕೊಡಬೇಕು. ಹಾಗೆಯೇ, ಪ್ರಧಾನಮಂತ್ರಿಯವರು ಈ ಬಾರಿಯಾದರೂ ರಾಜ್ಯಕ್ಕೆ ಭೆಟಿ ಕೊಟ್ಟು ನೆರೆ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಬೇಕು ಹಾಗೂ ರಾಜ್ಯದ ಸಚಿವರು ಈ ಕುರಿತು ಇಂದಿನ ಸಭೆಯಲ್ಲಿ ಪ್ರಧಾನ ಮಂತ್ರಿಯವರಲ್ಲಿ ಮನವಿ ಮಾಡಬೇಕು” ಎಂದು ಹೇಳಿದ್ದಾರೆ.

ಯಡಿಯೂರಪ್ಪನವರು ಕಳೆದ ವರ್ಷದ ಆಗಸ್ಟ್ ನಲ್ಲಿನ ನೆರೆಯ ಕುರಿತು ಮಾತ್ರ ವರದಿ ಸಲ್ಲಿಸಿದ್ದಾರೆ. ಸೆಪ್ಟಂಬರ್ ಮತ್ತು ಅಕ್ಟೋಬರ್ ನಲ್ಲಿ ಆದ ನಷ್ಟದ ಬಗ್ಗೆಯೂ ವರದಿ ಸಲ್ಲಿಸಬೇಕು ಎಂದು ಒತ್ತಾಯಿಸಿರುವ ಸಿದ್ದರಾಮಯ್ಯನವರು, ಈ ವರೆಗಿನ ಅನುಭವದ ಪ್ರಕಾರ ರಾಜ್ಯದ ಹಿತಾಸಕ್ತಿ ರಕ್ಷಣೆಯ ಪರ ಗಟ್ಟಿಯಾಗಿ ನಿಂತು ಪ್ರಧಾನಿ ಅವರ ಜೊತೆ ಮಾತನಾಡಿ ಹೆಚ್ಚು ಪರಿಹಾರ ಪಡೆಯುವ ಶಕ್ತಿ ಮುಖ್ಯಮಂತ್ರಿಗಳು ಇಲ್ಲವೇ ಸಚಿವರಿಗಿಲ್ಲ. ಇದಕ್ಕಾಗಿ, ಹೆಚ್ಚಿನ ಪರಿಹಾರ‌ ಕೋರಲು ಸರ್ವಪಕ್ಷಗಳ ನಿಯೋಗವನ್ನು ದೆಹಲಿಗೆ‌ ಕೊಂಡೊಯ್ಯಬೇಕು ಎಂದು ಒತ್ತಾಯಿಸಿದ್ದಾರೆ.

ನೆರೆಹಾವಳಿಯಿಂದ ಕಳೆದ ವರ್ಷ ನಿರ್ವಸತಿಕರಾದವರಿಗೆ 5,00,000 ರೂಪಾಯಿ ಪರಿಹಾರ ಒದಗಿಸುವ ಹಾಗೂ ಮನೆ ಕಟ್ಟಿಸಿಕೊಡುವ ಸರ್ಕಾರದ ಭರವಸೆ ಬಹುಸಂಖ್ಯಾತರಿಗೆ ಅನುಕೂಲವಾಗಲಿಲ್ಲ. ಈ ವರ್ಷವೂ ಮಳೆಯಿಂದ ನಿರಾಶ್ರಿತರಾದವರಿಗೆ ತಕ್ಷಣವೇ ಸೂರು ಒದಗಿಸುವ (ಕಳೆದ ಬಾರಿಯ ನಿರಾಶ್ರಿತರು ಸೇರಿದಂತೆ) ಶಾಶ್ವತ ಯೋಜನೆಯನ್ನು ಸರ್ಕಾರ ಆದ್ಯತೆಯ ಮೇಲೆ ಅನುಷ್ಠಾನ ಮಾಡಬೇಕು. ಸತ್ಯವನ್ನು ಬಹಳ ಕಾಲ ಮರೆಮಾಚಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

ಮುಂಗಾರು ಮಳೆಯಿಂದ ತತ್ತರಿಸಿರುವ ರೈತರಿಗೆ ಬೆಳೆ ಹಾನಿ ಪರಿಹಾರ ನೀಡುವಾಗ ರಾಷ್ಟ್ರೀಯ ಮತ್ತು ರಾಜ್ಯ ಪ್ರಕೃತಿ ವಿಕೋಪ ನಿಧಿಯ ಮಾರ್ಗಸೂಚಿಗಳಿಗೆ ಜೋತುಬೀಳದೆ ಸರ್ಕಾರ ರೈತರಿಗೆ ಹೆಚ್ಚಿನ ಪರಿಹಾರ ತಕ್ಷಣವೇ ನೀಡಬೇಕು. ಸತತ ಮೂರನೇ ವರ್ಷ ಅತಿವೃಷ್ಟಿಗೆ ಸಿಲುಕಿರುವ ರಾಜ್ಯದ ರೈತರು ಈ ಬಾರಿಯೂ ಮಳೆಯ ಅನಾಹುತ ತಡೆದುಕೊಳ್ಳುವ ಶಕ್ತಿ ಇಲ್ಲದೆ ಬಸವಳಿದಿದ್ದಾರೆ. ರಸ್ತೆ, ವಿದ್ಯುತ್ ಸಂಪರ್ಕ ಕಡಿತ ಹಾಗೂ ಮೂಲಭೂತ ಸೌಕರ್ಯಗಳ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಸಮರೋಪಾದಿಯಲ್ಲಿ ಇದನ್ನು ಸರಿಪಡಿಸಲು ತುರ್ತು ಗಮನ ಹರಿಸಬೇಕು ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಯಡಿಯೂರಪ್ಪನವರಿಗೆ ಮೋದಿ ಕಂಡ್ರೆ ಭಯ. ಹಾಗಾಗಿ ಪ್ರವಾಹ ಪರಿಹಾರಕ್ಕೆ ಕೇಂದ್ರದ ಮೇಲೆ ಒತ್ತಡ ಹೇರುತ್ತಿಲ್ಲ? : ಸಿದ್ದು

ಕರ್ನಾಟಕದಲ್ಲಿ ನೆರೆಯಿಂದಾದ ಕೃಷಿ ನಷ್ಟ ಎಷ್ಟು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...