Homeಮುಖಪುಟ‘ಪಿಎಂ ಪೋಶನ್’: ಬಿಸಿಯೂಟ ಯೋಜನೆಯ ಹೆಸರು ಬದಲಿಸಿದ ಒಕ್ಕೂಟ ಸರ್ಕಾರ!

‘ಪಿಎಂ ಪೋಶನ್’: ಬಿಸಿಯೂಟ ಯೋಜನೆಯ ಹೆಸರು ಬದಲಿಸಿದ ಒಕ್ಕೂಟ ಸರ್ಕಾರ!

- Advertisement -
- Advertisement -

ಮೋದಿ ನೇತೃತ್ವದ ಬಿಜೆಪಿ ಪಕ್ಷವು ಒಕ್ಕೂಟ ಸರ್ಕಾರದಲ್ಲಿ ಅಧಿಕಾರ ಹಿಡಿದ ನಂತರ, ಈ ಹಿಂದಿನ ಸರ್ಕಾರಗಳು ರೂಪಿಸಿದ್ದ ಹಲವಾರು ಯೋಜನೆಗಳ ಹೆಸರುಗಳನ್ನು ಬದಲಿಸಿದೆ. ಇದೀಗ, ಶಾಲೆಗಳಲ್ಲಿ ನೀಡುತ್ತಿದ್ದ ಮಧ್ಯಾಹ್ನದ ಬಿಸಿಯೂಟ ಯೋಜನೆ ಈ ಪಟ್ಟಿಗೆ ಹೊಸದಾಗಿ ಸೇರಿಕೊಂಡಿದೆ. “ಪ್ರಧಾನಮಂತ್ರಿ ಪೋಶನ್ ಯೋಜನೆ ಅಥವಾ ಪಿಎಂ-ಪೋಶನ್ ಯೋಜನೆ” ಎಂದು ಬಿಸಿಯೂಟ ಯೋಜನೆಯ ಹೆಸರನ್ನು ಬುಧವಾರ ಬದಲಾಯಿಸಿದೆ.

ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಮುಂದಿನ ಐದು ವರ್ಷಗಳಲ್ಲಿ ಈ ಯೋಜನೆಗೆ 1.30 ಸಾವಿರ ಕೋಟಿ ವೆಚ್ಚ ಮಾಡುವುದಾಗಿ ಒಕ್ಕೂಟ ಸರ್ಕಾರ ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (ಸಿಸಿಇಎ) ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: 5 ತಿಂಗಳಿಂದ ಬಾರದ ಗೌರವಧನ: ವೇತನ ಕೇಳಿದ ಬಿಸಿಯೂಟ ನೌಕರರ ಬಂಧನ

ಯೋಜನೆಯು ದೇಶಾದ್ಯಂತ 11.2 ಲಕ್ಷ ಶಾಲೆಗಳಲ್ಲಿ 1 ರಿಂದ 8 ನೇ ತರಗತಿಗೆ ದಾಖಲಾದ 11.8 ಕೋಟಿ ವಿದ್ಯಾರ್ಥಿಗಳನ್ನು ಒಳಗೊಂಡಿದೆ. ಈ ಯೋಜನೆಯು 2021-22 ರಿಂದ 2025-26 ರವರೆಗಿನ ಐದು ವರ್ಷಗಳ ಅವಧಿಗೆ ಒಕ್ಕೂಟ ಸರ್ಕಾರದಿಂದ 54,061.73 ಕೋಟಿ ಮತ್ತು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತದಿಂದ 31,733.17 ಕೋಟಿಗಳ ಆರ್ಥಿಕ ವೆಚ್ಚವನ್ನು ಹೊಂದಿದೆ.

ಆಹಾರ ಧಾನ್ಯಗಳ ಮೇಲೆ 45,000 ಕೋಟಿ ರೂ.ಗಳ ಹೆಚ್ಚುವರಿ ವೆಚ್ಚವನ್ನು ಒಕ್ಕೂಟ ಸರ್ಕಾರ ಭರಿಸುತ್ತದೆ. ಆದ್ದರಿಂದ, ಯೋಜನೆಯ ಒಟ್ಟು ಬಜೆಟ್ 1,30,794.9 ಕೋಟಿ ಆಗಿರುತ್ತದೆ ಎಂದು ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿ ನಡೆಯುತ್ತಿರುವ ಎಲ್‌ಕೆಜಿ ಮತ್ತು ಯುಕೆಜಿ ಅಥವಾ ಬಾಲವಾಡಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಈ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ಸರ್ಕಾರ ಹೇಳಿದೆ. ಪ್ರಸ್ತುತವಾಗಿ ಈ ವಿದ್ಯಾರ್ಥಿಗಳನ್ನು ಯೋಜನೆಯಲ್ಲಿ ಸೇರಿಸಲಾಗಿಲ್ಲ.

ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಮಕ್ಕಳಿಗೆ ಸಿಗುತ್ತಿಲ್ಲ ಪೌಷ್ಠಿಕ ಆಹಾರ: ಅಂಗನವಾಡಿ, ಬಿಸಿಯೂಟ ನೌಕರರ ಗೋಳು ಕೇಳುವವರಿಲ್ಲ

“ಯೋಜನೆಯ ಅಡಿಯಲ್ಲಿ ನೀಡುವ ಆಹಾರವನ್ನು ಸರ್ಕಾರ ನಿರ್ಧರಿಸುವುದಿಲ್ಲ. ಇದನ್ನು ರಾಜ್ಯಗಳು ನಿರ್ಧರಿಸಬಹುದು. ರಾಜ್ಯಗಳು ತಮ್ಮ ಸ್ಥಳೀಯ ಪೌಷ್ಟಿಕಾಂಶದ ವಸ್ತುಗಳನ್ನು ಸೇರಿಸಲು ಅನುಮತಿಸಲಾಗುವುದು” ಎಂದು ಅಧಿಕಾರಿಗಳು ಹೇಳಿದ್ದಾರೆ.

“ಈ ಮೊದಲು ಈ ಅವಕಾಶ ಇರಲಿಲ್ಲ …ಬದಲಾಗಿ, ಅಧಿಕ ರಕ್ತಹೀನತೆ ಇರುವ ಜಿಲ್ಲೆಗಳಲ್ಲಿ ಮಕ್ಕಳಿಗೆ ಪೂರಕ ಪೌಷ್ಟಿಕಾಂಶದ ವಸ್ತುಗಳನ್ನು ಒದಗಿಸುವುದಕ್ಕಾಗಿ ವಿಶೇಷ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿತ್ತು” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಯೋಜನೆಯ ಸಾಮಾಜಿಕ ಲೆಕ್ಕಪರಿಶೋಧನೆಯನ್ನು ಯೋಜನೆಯ ಅಡಿಯಲ್ಲೆ ಎಲ್ಲಾ ಜಿಲ್ಲೆಗಳಲ್ಲಿ ಕಡ್ಡಾಯಗೊಳಿಸಲಾಗಿದೆ. ಈ ಯೋಜನೆಯನ್ನು ಐದು ವರ್ಷಗಳ ನಂತರ ನವೀಕರಿಸಲಾಗುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಇದನ್ನೂ ಓದಿ: ಅಕ್ಷಯಪಾತ್ರ (ಇಸ್ಕಾನ್‌)ಗೆ ಹೊರಗುತ್ತಿಗೆಗೆ ವಿರೋಧ: ಶಾಲೆಗಳಲ್ಲಿಯೇ ಬಿಸಿಯೂಟ ತಯಾರಿಸಲು ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ರೀತಿ ಹೆಸರಿಡಲು PM ಏನಾದರೂ ಅವರ ಮನೆಯಿಂದ ಹಣ ತಂದು ಶಾಲಾ ಮಕ್ಕಳಿಗೆ ಅನ್ನದಾನ ಮಾಡುತ್ತಿದ್ದಾರೆಯೇ? ಜನರು ಕಟ್ಟಿದ ತೆರಿಗೆಯಿಂದಲೇ ತಾನೇ ಸರ್ಕಾರಗಳು ಇಂಥ ಯೋಜನೆಗಳನ್ನು ರೂಪಿಸುವುದು?

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...