Homeಮುಖಪುಟವಿವಾದಿತ ಕೃಷಿ ಕಾಯ್ದೆಗಳು ರದ್ದು: ಕ್ಷಮೆಯಾಚಿಸಿದ ಮೋದಿ, ರೈತರ ಹೋರಾಟಕ್ಕೆ ಗೆಲುವು

ವಿವಾದಿತ ಕೃಷಿ ಕಾಯ್ದೆಗಳು ರದ್ದು: ಕ್ಷಮೆಯಾಚಿಸಿದ ಮೋದಿ, ರೈತರ ಹೋರಾಟಕ್ಕೆ ಗೆಲುವು

- Advertisement -
- Advertisement -

ಒಂದು ವರ್ಷಗಳ ಕಾಲ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡಿದ ರೈತರಿಗೆ ಕೊನೆಗೂ ಜಯ ಸಿಕ್ಕಿದೆ. ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ, ರೈತರ ಹೋರಾಟಕ್ಕೆ ಮಣಿದಿದೆ. ಮುಂದಾಗುವ ಅನಾಹುತಗಳಿಗೆ ಬೆಚ್ಚಿ, ಒಂದು ವರ್ಷದ ಬಳಿಕ ಕೃಷಿ ಕಾಯ್ದೆಗಳನ್ನು ರದ್ದುಪಡಿಸಿದೆ.

ದೇಶವನ್ನು ಉದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, “ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದು ಮಾಡಲಾಗುವುದು. ದೆಹಲಿ ಗಡಿಯಲ್ಲಿ ಹೋರಾಟ ಮಾಡುತ್ತಿರುವ ರೈತರು ಮನೆಗೆ ಹಿಂತಿರುಗಬೇಕು” ಎಂದು ಮನವಿ ಮಾಡಿದ್ದಾರೆ.

ಒಂದು ವರ್ಗದ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ನಮಗೆ ಸಾಧ್ಯವಾಗಲಿಲ್ಲ ಎಂದು ನಾನು ದೇಶವಾಸಿಗಳಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ಪ್ರಧಾನಿ ತಿಳಿಸಿದ್ದಾರೆ. ಹೊಸ ಕ್ರಮಗಳನ್ನು ಅನುಸರಿಸಲು ಪ್ರಧಾನಿ ಮುಂದಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. 

ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಸಾಂವಿಧಾನಿಕ ಪ್ರಕ್ರಿಯೆಯು ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಪ್ರಧಾನಿ ಹೇಳಿದ್ದಾರೆ. 

ಹೋರಾಟಕ್ಕೆ ಜಯ

“ಒಂದು ವರ್ಷದ ಬಳಿಕ ಗೆದ್ದಿದ್ದೇವೆ. ಮೂರು ವಿವಾದಿತ ಕಾಯ್ದೆಗಳನ್ನು ವಾಪಸ್‌ ಪಡೆಯಲು ಮೋದಿ ಸರ್ಕಾರ ನಿರ್ಧರಿಸಿದೆ. ಇದು ರೈತರಿಗೆ ಸಂದ ಗೆಲುವು” ಎಂದು ಕಿಸಾನ್‌ ಏಕ್ತಾ ಮೋರ್ಚಾ ಟ್ವೀಟ್‌ ಮಾಡಿದೆ.

“ಸತ್ಯಾಗ್ರಹದ ಮೂಲಕ ದೇಶದ ಅನ್ನದಾತರು ದುರಹಂಕಾರಿಗಳ ತಲೆ ತಗ್ಗಿಸಿದ್ದಾರೆ. ಅನ್ಯಾಯದ ವಿರುದ್ಧದ ಈ ವಿಜಯಕ್ಕೆ ಅಭಿನಂದನೆಗಳು! ಜೈ ಹಿಂದ್, ಜೈ ಹಿಂದ್ ರೈತ!” ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಟ್ವೀಟ್ ಮಾಡಿದ್ದಾರೆ.

“ರೈತರ ಪ್ರತಿಭಟನೆ, ನಿಜವಾದ ಜನಾಂದೋಲನಕ್ಕೆ ಜಯ ಸಿಕ್ಕಿದೆ. 750ಕ್ಕೂ ಹೆಚ್ಚು ಜೀವಗಳನ್ನು ಕಳೆದುಕೊಂಡು ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ನಮ್ಮ ರೈತರಿಗೆ ಹರ್ಷೋದ್ಗಾರ. ನಿಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ! ಮುಂಬರುವ ಯುಪಿ, ಪಂಜಾಬ್ ಚುನಾವಣೆಗಳು ಕಾರ್ಪೊರೇಟ್ ಗೂಂಡಾ ಬಿಜೆಪಿ ಸರ್ಕಾರವನ್ನು ಹಿಮ್ಮೆಟ್ಟಿಸಿದೆ” ಎಂದು ಚಿಂತಕಿ ಮೀನಾ ಕಂದಸ್ವಾಮಿ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿರಿ: ಅಖಿಲೇಶ್ ಯಾದವ್ ’ಚಿಲ್ಲಂಜೀವಿ’ ಹೇಳಿಕೆ: ಕ್ಷಮೆಗೆ ಒತ್ತಾಯಿಸಿದ ಅಖಿಲ ಭಾರತೀಯ ಸಂತ ಸಮಿತಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಷ್ಟ್ರದ ಭದ್ರತೆಗೆ ಬೆದರಿಕೆಯಾಗಿರುವ ನೂಪುರ್ ಶರ್ಮಾ ಇಡೀ ದೇಶದ ಎದುರು ಕ್ಷಮೆ ಕೇಳಬೇಕು: ಸುಪ್ರೀಂ

0
ಪ್ರವಾದಿ ಮೊಹಮ್ಮದ್‌ರವರನ್ನು ನಿಂದಿಸಿದ್ದ ಬಿಜೆಪಿಯ ಉಚ್ಛಾಟಿತ ನಾಯಕಿ ನೂಪುರ್ ಶರ್ಮಾ ಇಡೀ ರಾಷ್ಟ್ರದ ಎದುರು ಕ್ಷಮೆ ಕೇಳಬೇಕೆಂದು ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ. ತನ್ನ ಮೇಲೆ ದೇಶಾದ್ಯಂತ ದಾಖಲಾಗಿರುವ ಪ್ರಕರಣಗಳನ್ನು ಒಂದೇ ಎಫ್‌ಐಆರ್‌ಗೆ ವರ್ಗಾಹಿಸುವಂತೆ...