Homeಮುಖಪುಟಮಾತಾಡಿ ಪ್ರಧಾನಿಗಳೇ ಮಾತನಾಡಿ: ಸ್ವಾತಂತ್ರ್ಯ ದಿನದ ಪಿಎಂ ಭಾಷಣಕ್ಕೆ ಸಲಹೆಗಳ ಸುರಿಮಳೆ

ಮಾತಾಡಿ ಪ್ರಧಾನಿಗಳೇ ಮಾತನಾಡಿ: ಸ್ವಾತಂತ್ರ್ಯ ದಿನದ ಪಿಎಂ ಭಾಷಣಕ್ಕೆ ಸಲಹೆಗಳ ಸುರಿಮಳೆ

ಒಂದು ವೇಳೆ ಪ್ರಧಾನಿಗಳು ಆಗಸ್ಟ್ 15 ರಂದು ನಮ್ಮ ಬವಣೆಗಳ ಬಗ್ಗೆ ಮಾತನಾಡದಿದ್ದರೆ ಅಂದೇ ನಾವು ನಮ್ಮ ಜನಪ್ರತಿನಿಧಿಯ ಮೂಲಕ ಜನರ ಭಾಷಣವನ್ನು ಮಾಡಿಸುತ್ತೇವೆ.

- Advertisement -
- Advertisement -

ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ತಮ್ಮ ಭಾಷಣಕ್ಕೆ ಸಾರ್ವಜನಿಕರು ಸಲಹೆ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದರು. ಅದಕ್ಕೆ ನೂರಾರು ಸಲಹೆಗಳು ವ್ಯಕ್ತವಾಗುತ್ತಿದ್ದು ಕರ್ನಾಟಕದಿಂದಲೇ ಹಲವಾರು ಜನ ಪ್ರತಿಕ್ರಿಯಿಸಿದ್ದು ಜನಸಮುದಾಯಗಳ ಮೇಲಿನ ದಾಳಿಯನ್ನು ಹೇಗೆ ನಿಲ್ಲಿಸುತ್ತೀರಿ ಎಂಬುದರ ಬಗ್ಗೆ ಮಾತನಾಡಿ ಎಂದು ತಾಕೀತು ಮಾಡಿದ್ದಾರೆ.

‘ಮಾತಾಡಿ ಪ್ರಧಾನಿಗಳೇ ಮಾತನಾಡಿ’ ಎಂಬ ಘೋ‍‍‍‍‍‍‍‍‍ಷವಾಕ್ಯದಡಿಯಲ್ಲಿ ಇಂದಿನಿಂದ ಪ್ರಚಾರಾಂದೋಲನ ಆರಂಭವಾಗಿದೆ. ದಲಿತರ ಮೇಲಿನ ದೌರ್ಜನ್ಯಗಳು ಶೇ. 74 ರಷ್ಟು ಹೆಚ್ಚಾಗಿವೆ ಏಕೆ? ಎಂಬುದನ್ನು ಮಾತನಾಡಿ, ದಲಿತ ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ತಡೆಯಲು ಏನು ಕ್ರಮ ಕೈಗೊಳ್ಳುತ್ತೀರಿ? ಮಾತನಾಡಿ ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ದೆಹಲಿಯ ದಲಿತ ಕಂದಮ್ಮಳೊಬ್ಬಳನ್ನು ಕಾಮಪಿಶಾಚಿ ಪೂಜಾರಿಯೊಬ್ಬ ಬರ್ಬರವಾಗಿ ಅತ್ಯಾಚಾರಗೈದು ಕೊಂದು ಸುಟ್ಟು ಹಾಕಿದ ಸುದ್ದಿ ಕೇಳಿದಾಗಿನಿಂದ ನಾವು ಆಘಾತಕ್ಕೊಳಗಾಗಿದ್ದೇವೆ. ಇಂತಹ ಅಮಾನುಷ ಘಟನೆಗಳಿಗೆ ಕೊನೆಯೆಂದು? ದಲಿತರೊಟ್ಟಿಗೆ ಅಲ್ಪಸಂಖ್ಯಾತ- ಮಹಿಳೆ- ಕಾರ್ಮಿಕ-ರೈತ ಸೇರಿದಂತೆ ನಾಡಿನ ಜನತೆ ಎಲ್ಲಾ ರೀತಿಯಿಂದಲೂ ತೀವ್ರ ಸಂಕಷ್ಟಕ್ಕೀಡಾಗಿರುವುದು ನಮ್ಮನ್ನು ಚಿಂತಿತರನ್ನಾಗಿ ಮಾಡಿದೆ ಇದಕ್ಕೆ ಏನು ಮಾಡುತ್ತೀರಿ ಎಂದು ಮಾತನಾಡಿ ಎಂದು ಒತ್ತಾಯಿಸಿದ್ದಾರೆ.

ನಾವು ಆಗಸ್ಟ್ 10 ರಿಂದ 15ರವರೆಗೆ ಪ್ರತಿದಿನ ಒಂದೊಂದು ಜನಸಮುದಾಯಗಳ ನೋವಿನ ಕುರಿತು ಪ್ರಧಾನಿಯವರಿಗೆ ಸಲಹೆ ನೀಡಲಿದ್ದೇವೆ. ದಲಿತ, ಅಲ್ಪಸಂಖ್ಯಾತ, ಮಹಿಳೆ, ಕಾರ್ಮಿಕ ಮತ್ತು ರೈತರ ಹಕ್ಕೊತ್ತಾಯಗಳನ್ನು ಮುನ್ನಲೆಗೆ ತರುತ್ತೇವೆ. ಪ್ರತಿ ದಿನ ಒಂದೊಂದು ಜನಸಮುದಾಯದ ನೋವುಗಳನ್ನು ವಿಡಿಯೋ, ಪೋಸ್ಟರ್, ಹಾಡು, ಭಾಷಣ, ಚಿತ್ರಗಳ ಮೂಲಕ ಮುಂದಿಟ್ಟು ಈ ಕುರಿತು ಮಾತನಾಡಿ ಎಂದು ಆಗ್ರಹಿಸುತ್ತೇವೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕರಾದ ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.

ಒಂದು ವೇಳೆ ಪ್ರಧಾನಿಗಳು ಆಗಸ್ಟ್ 15 ರಂದು ನಮ್ಮ ಬವಣೆಗಳ ಬಗ್ಗೆ ಮಾತನಾಡದಿದ್ದರೆ ಅಂದೇ ನಾವು ನಮ್ಮ ಜನಪ್ರತಿನಿಧಿಯ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಜನರ ಭಾಷಣವನ್ನು ಮಾಡಿಸುತ್ತೇವೆ. ಪ್ರಧಾನಿಗಳು ಮೌನ ಮುರಿಯಲಿ – ದೇಶ ಉಳಿಯಲಿ ಎಂದು ಅವರು ಒತ್ತಾಯಿಸಿದ್ದಾರೆ.

ದಲಿತರು ಉಳುಮೆ ಮಾಡುತ್ತಿರುವ ಸರ್ಕಾರಿ ಭೂಮಿಗಳಿಗೆ ಹಕ್ಕುಪತ್ರ ಯಾವಾಗ ನೀಡುತ್ತೀರಿ? ಮಾತನಾಡಿ. ಮೀಸಲಾತಿ ನೀಡುವ ಸರ್ಕಾರಿ ಉದ್ಯೋಗಗಳನ್ನು ಹೆಚ್ಚಿಸುವ ಕುರಿತು ಮಾತನಾಡಿ. ಖಾಸಗೀ ಕ್ಷೇತ್ರಗಳಲ್ಲೂ ಮೀಸಲಾತಿ ಜಾರಿಗೆ ತರುವ ಕುರಿತು ನಿಮ್ಮ ಆಲೋಚನೆ ಏನು? ಮಾತನಾಡಿ ಎಂಬ ವಿಷಯಗಳಿಂದ ಆರಂಭವಾಗಿ ರೋಹಿತ್ ವೇಮುಲನನ್ನು ಬಲಿ ತೆಗೆದುಕೊಂಡದ್ದರಲ್ಲಿ ನಿಮ್ಮ ಪಕ್ಷದ ಸಂಸದರೂ ಸಚಿವರೂ ಶಾಮೀಲಾಗಿದ್ದರು. ಸರ್ಕಾರವೂ ಶಾಮೀಲಾಗಿತ್ತು. ಆದರೆ ನ್ಯಾಯ ಸಿಗಲಿಲ್ಲ. ಕನಿಷ್ಠ ಪಕ್ಷ ರೋಹಿತ್ ಕಾಯ್ದೆಯನ್ನಾದರೂ ಜಾರಿ ಮಾಡಿ ಎಂಬ ಆಗ್ರಹಗಳು ಕೇಳಿಬಂದಿವೆ.


ಇದನ್ನೂ ಓದಿ: ವಂದನಾ ಕಟಾರಿಯಗೆ ಜಾತಿನಿಂದನೆ: ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...