Homeಮುಖಪುಟನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

- Advertisement -
- Advertisement -

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಲು ಲೋಕಸಭೆಗೆ ಬಂದಿಲ್ಲ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಸೋಮವಾರ (ಫೆ.9) ಸಂಸತ್ತಿನ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿಗೆ ಸಂಸದರಿಂದ ಭದ್ರತಾ ಬೆದರಿಕೆ ಇದೆ ಎಂಬ ಸ್ಪೀಕರ್ ಹೇಳಿಕೆಯನ್ನು ತಿರಸ್ಕರಿಸಿದ್ದು, “ಆರೋಪ ಮಾಡುವವರು ಕ್ರಮ ಕೈಗೊಳ್ಳಲಿ” ಎಂದು ಸವಾಲು ಹಾಕಿದ್ದಾರೆ. “ಯಾರಾದರು ಪ್ರಧಾನಿ ಮೇಲೆ ದಾಳಿ ಮಾಡುವುದಾಗಿ ಹೇಳಿದ್ದರೆ ದಯವಿಟ್ಟು ಎಫ್‌ಐಆರ್ ದಾಖಲಿಸಿ, ಆ ವ್ಯಕ್ತಿಯನ್ನು ಬಂಧಿಸಿ. ನೀವು ಯಾಕೆ ಹಾಗೆ ಮಾಡುತ್ತಿಲ್ಲ?” ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

“ಪ್ರಧಾನಿ ಸಂಸತ್ತಿಗೆ ಬರಲು ಹೆದರುತ್ತಿರುವುದು ಸಂಸದರ ಬೆದರಿಕೆಯಿಂದ ಅಲ್ಲ, ನಾನು ಆಡುತ್ತಿರುವ ಸತ್ಯದ ಮಾತುಗಳನ್ನು ಕೇಳಿ. ಅವರು ಸತ್ಯವನ್ನು ಎದುರಿಸಲಾಗದೆ ಭಯಭೀತರಾಗಿದ್ದಾರೆ. ಇದರಲ್ಲಿ ಯಾವುದೇ ಸಂದೇಹವಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ಕಾಂಗ್ರೆಸ್ ಸದಸ್ಯರು ಪ್ರಧಾನಿಯ ಮೇಲೆ ದಾಳಿ ಮಾಡುವ ಪ್ರಶ್ನೆಯೇ ಇಲ್ಲ ಎಂದಿರುವ ಅವರು, ಪ್ರಧಾನಿ ಮೋದಿಯವರು ಸದನವನ್ನು ಎದುರಿಸುವ ಧೈರ್ಯ ತೋರಿಸಬೇಕಿತ್ತು” ಎಂದಿದ್ದಾರೆ.

“ನಾವು ಏನು ಹೇಳುತ್ತೇವೆಯೋ ಅದಕ್ಕೆ ಅವರು ಹೆದರುತ್ತಿದ್ದಾರೆ, ಮೊದಲ ಹೆಜ್ಜೆಯಾಗಿ ನರವಾಣೆಯವರ ಪುಸ್ತಕವನ್ನು ಅವರಿಗೆ ನೀಡುತ್ತೇವೆ ಎಂಬ ಭಯವಿದೆ” ಎಂದು ಹೇಳಿದ್ದಾರೆ.

“ಸರ್ಕಾರ ಬಜೆಟ್ ಕುರಿತು ಹೆಚ್ಚಿನ ಚರ್ಚೆ ಮಾಡಲು ಹಿಂಜರಿಯುತ್ತಿದೆ. ನನ್ನ ಪ್ರಕಾರ, ಅವರು ಭಾರತ-ಅಮೆರಿಕ ವ್ಯಾಪಾರ ಒಪ್ಪಂದ, ಅದು ನಮ್ಮ ರೈತರ ಮೇಲೆ ಬೀರುವ ಪರಿಣಾಮದ ಕುರಿತು ಚರ್ಚಿಸುವ ಬಗ್ಗೆ ಚಿಂತಿತರಾಗಿದ್ದಾರೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

“ನಾನು ನರವಾಣೆಯವರ ಪುಸ್ತಕದ ಕುರಿತು ಮಾತನಾಡಬಾರದು ಎಂದು ಸದನವನ್ನು ಪದೇ ಪದೇ ಮುಂದೂಡಲಾಗುತ್ತಿದೆ. ಆರಂಭದಲ್ಲಿ ನರವಾಣೆಯವರ ಅಪ್ರಕಟಿತ ಪುಸ್ತಕದ ಕುರಿತು ಸದನದಲ್ಲಿ ಉಲ್ಲೇಖಿಸಬಾರದು ಎಂದರು. ನಾನು ಪುಸ್ತಕದ ಬಗ್ಗೆ ಉಲ್ಲೇಖಿಸುತ್ತಿಲ್ಲ, ಅದಕ್ಕೆ ಸಂಬಂಧಿಸಿದ ಪತ್ರಿಕಾ ವರದಿಯ ಬಗ್ಗೆ ಉಲ್ಲೇಖಿಸುತ್ತಿದ್ದೇನೆ ಎಂದೆ. ನಂತರ ಅವರು, ಲೇಖನದ ಕುರಿತೂ ಪ್ರಸ್ತಾಪಿಸಬಾರದು ಎಂದರು. ನಾನು ಮಾತನಾಡಲೇಬೇಕು ಎಂದೆ, ಅದಕ್ಕೆ ಅವರು ನಾನು ಮಾತನಾಡದಂತೆ ತಡೆಯುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪುಸ್ತಕ ಪ್ರಕಟವಾಗಿಲ್ಲ ಎಂದು ಸುಳ್ಳು ಹೇಳಿಕೆ ನೀಡಿದ್ದಾರೆ. ಪುಸ್ತಕ ಪ್ರಕಟವಾಗಿದೆ ಮತ್ತು ನಮಗೆ ಅದರ ಪ್ರತಿ ಸಿಕ್ಕಿದೆ. ರಾಷ್ಟ್ರಪತಿಯ ಭಾಷಣಕ್ಕೆ ವಂದನಾ ನಿರ್ಣಯದಲ್ಲಿ ವಿರೋಧಪಕ್ಷದ ನಾಯಕ ಸೇರಿದಂತೆ ಇಡೀ ವಿರೋಧ ಪಕ್ಷಕ್ಕೆ ಅವಕಾಶ ನೀಡದಿರುವುದು ಅನ್ಯಾಯ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಯುದ್ಧಾಧಿಕಾರಕ್ಕೆ ಬ್ರೇಕ್ ಹಾಕುವ ಪ್ರಯತ್ನಕ್ಕೆ ಹಿನ್ನಡೆ; ಸೆನೆಟ್‌ನಲ್ಲಿ ನಿರ್ಣಯಕ್ಕೆ ಸೋಲು 

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯುದ್ಧಾಧಿಕಾರಕ್ಕೆ ಲಗಾಮು ಹಾಕುವ ನಿರ್ಣಯಕ್ಕೆ ಅಮೆರಿಕ ಸೆನೆಟ್‌ನಲ್ಲಿ (ಸಂಸತ್ತಿನ ಮೇಲ್ಮನೆ) ಸೋಲಾಗಿದೆ. ಇದರಿಂದ ಪ್ರಸ್ತುತ ನಡೆಸುತ್ತಿರುವ ಇರಾನ್ ಮೇಲಿನ ದಾಳಿಯನ್ನು ಇನ್ನಷ್ಟು ಹೆಚ್ಚಿಸಲು ಟ್ರಂಪ್‌ಗೆ ಅನುಮತಿ ಸಿಕ್ಕಂತಾಗಿದೆ....

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...