Homeಮುಖಪುಟನಾಳೆ ಪ್ರಧಾನಿ ತಮಿಳುನಾಡಿಗೆ - ಇಂದೇ ಪ್ರಾರಂಭವಾದ #GoBackModi ಟ್ರೆಂಡಿಂಗ್

ನಾಳೆ ಪ್ರಧಾನಿ ತಮಿಳುನಾಡಿಗೆ – ಇಂದೇ ಪ್ರಾರಂಭವಾದ #GoBackModi ಟ್ರೆಂಡಿಂಗ್

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ದ ದೇಶದಾದ್ಯಂತ ಪ್ರತಿಭಟನೆಗಳು ತೀವ್ರಗೊಳ್ಳುತ್ತಿದೆ. ಈ ಮಧ್ಯೆ ತಮಿಳುನಾಡು, ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಮುಂದಿನ ಕೆಲವೆ ತಿಂಗಳುಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಇದಕ್ಕಾಗಿ ಕೇಂದ್ರದ ಆಡಳಿತ ಪಕ್ಷವಾದ ಬಿಜೆಪಿಯು ತಯಾರಿಯನ್ನು ಮಾಡುತ್ತಿದೆ. ಅದರಂತೆ ಪ್ರಧಾನಿ ನಾಳೆ(ಭಾನುವಾರ) ತಮಿಳುನಾಡಿಗೆ ತೆರಳುತ್ತಿದ್ದಾರೆ. ಆದರೆ ಎಂದಿನಂತೆ ಟ್ವಿಟ್ಟರ್‌‌ನಲ್ಲಿ ತಮಿಳುನಾಡಿನ ಜನರು ಪ್ರಧಾನಿ ಮೋದಿಗೆ “ಮೋದಿ ವಾಪಾಸು ಹೋಗು” ಎಂದು ಎಂದು ಹೇಳಿದ್ದಾರೆ. ಟ್ವಿಟ್ಟರ್‌‌ನಲ್ಲಿ ಈಗಾಗಲೆ #GoBackModi ಟ್ರೆಂಡ್ ಆಗಿದ್ದು, ದೇಶದಾದ್ಯಂತ ಎರಡನೆ ಸ್ಥಾನದಲ್ಲಿದೆ.

ತಮಿಳು ನಟಿ ಓವಿಯಾ ಮೋದಿ ವಾಪಾಸು ಹೋಗು ಎಂದು ಟ್ವೀಟ್ ಮಾಡಿದ್ದಾರೆ. ಓವಿಯಾ ಅವರು ಕನ್ನಡದ ಪ್ರಮುಖ ನಟ ಯಶ್‌ ನಾಯಕನಟನಾಗಿ ನಟಿರುವ ಕಿರಾತಕ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೆ ಅವರು ತಮಿಳು, ತೆಲುಗು, ಮಳಯಾಲಂ ಚಿತ್ರಗಳಲ್ಲೂ ನಟಿಸಿದ್ದರು.

ಇದನ್ನೂ ಓದಿ: ಕಳಚಿಕೊಳ್ಳುತ್ತಿದೆ NDA ನ ಒಂದೊಂದೇ ಕೊಂಡಿ – BJP ಗೆ ಆಘಾತ ನೀಡಿದ ತಮಿಳುನಾಡು!

ಹೋರಾಟಗಾರ್ತಿ ಮೀನಾ ಕಂದಸ್ವಾಮಿ ಅವರು, “ಮೋದಿ ವಾಪಾಸು ಹೋಗು ಎನ್ನುವುದರಲ್ಲಿ ನಾವು ಒಂದು ದಿನ ಮುಂದಿದ್ದೇವೆ” ಎಂದು ಟ್ವೀಟ್ ಮಾಡಿದ್ದಾರೆ.

 

ಅಕ್ಷಯ ಮಣಿ ಅವರು ಫೆಬ್ರವರಿ 14 ಪ್ರೇಮಿಗಳ ದಿನವು ತಮಿಳುನಾಡಿನ ಜನರಿಗೆ ಕರಾಳ ದಿನವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

 

ಅಮಾನುಲ್ಲಾ ಅವರು, 56 ಇಂಚು ಸುಮ್ಮನೆ ಹಾಳು ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ತಮಿಳುನಾಡು: ಕೃಷಿ ಕಾನೂನು ವಿರುದ್ಧ ವಿಶೇಷ ಅಧಿವೇಶನ ಕರೆಯುವಂತೆ ’ಸ್ಟಾಲಿನ್’ ಪತ್ರ

ಟ್ರೋಲ್‌‌ ಮಾಫಿಯಾ ಎಂಬ ಟ್ವಿಟ್ಟರ್ ಹ್ಯಾಂಡಲ್‌ ತಮಿಳು ಸಿನಿಮಾ ಹಾಸ್ಯ ದೃಶ್ಯಕ್ಕೆ ಮೋದಿಯ ಮುಖವನ್ನು ಎಡಿಟ್ ಮಾಡಿ, ಪ್ರಧಾನಿ ಮೋದಿ ತಮಿಳು ನಾಡಿಗೆ ಬರುವಾಗೆಲ್ಲಾ ಅಲ್ಲಿನ ಜನರು ಹೇಗೆ ಸ್ವಾಗತಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ತಮಿಳುನಾಡು: ಜಲ್ಲಿಕಟ್ಟು ವೇಳೆ ಕೃಷಿ ಕಾಯ್ದೆಗಳ ವಿರುದ್ಧ ಘೋಷಣೆ – ಬಂಧನ, ಬಿಡುಗಡೆ

ಇದನ್ನೂ ಓದಿ: ತಮಿಳುನಾಡು ಚುನಾವಣೆ: ಡಿಎಂಕೆ ಒಕ್ಕೂಟಕ್ಕೆ ಸ್ಪಷ್ಟ ಬಹುಮತವೆಂದ ABP-ಸಿ ವೋಟರ್ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...