- Advertisement -
- Advertisement -
ತಲೆಮರೆಸಿಕೊಂಡಿದ್ದ ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರ ಬ್ಯಾಂಕ್ ನ ಮಾಜಿ ಮುಖ್ಯಸ್ಥ ವರ್ಯಾಮ್ ಸಿಂಗ್ ಅವರನ್ನು ಬಂಧಿಸಿದ್ದು, ಅಕ್ಟೋಬರ್ 9ರವರೆಗೆ ಪೊಲೀಸ್ ವಶಕ್ಕೆ ನೀಡಲಾಗಿದೆ.
ಪಿಎಂಸಿ ಬ್ಯಾಂಕ್ ನಲ್ಲಿ ಅಕ್ರಮ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ವರ್ಯಾಮ್ ಸಿಂಗ್ ನಾಪತ್ತೆಯಾಗಿದ್ದರು. ಮುಂಬೈನ ಪೊಲೀಸ್ ಆರ್ಥಿಕ ಅಪರಾಧಗಳ ವಿಭಾಗ ತನಿಖೆ ನಡೆಸಿ ಮಹಿಮಾ ಎಂಬ ಸ್ಥಳದಲ್ಲಿ ಬಚ್ಚಿಟ್ಟುಕೊಂಡಿದ್ದ ಆರೋಪಿಯನ್ನು ಶನಿವಾರ ತಡರಾತ್ರಿ ಬಂಧಿಸಲಾಗಿತ್ತು.
ಮಾಜಿ ಮುಖ್ಯಸ್ಥ ವರ್ಯಾಮ್ ಸಿಂಗ್ ಅವರನ್ನು ಭಾನುವಾರ ಮುಂಬೈ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ಅಕ್ಟೋಬರ್ 9ರವರೆಗೆ ಪೊಲೀಸರ ವಶಕ್ಕೆ ನೀಡಿದ್ದಾರೆ.
ಹೌಸಿಂಗ್ ಡೆವಲಪ್ ಮೆಂಟ್ ಮತ್ತು ಇನ್ಫ್ರಾಸ್ಟ್ರಕ್ಷನ್ ನಲ್ಲಿ 4,335 ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂದು ದೂರಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿ ವರ್ಯಾಮ್ ಸಿಂಗ್ ನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.


