HomeಮುಖಪುಟPMLA ಅಡಿಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯ: ಸುಪ್ರೀಂ ಕೋರ್ಟ್

PMLA ಅಡಿಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯ: ಸುಪ್ರೀಂ ಕೋರ್ಟ್

- Advertisement -
- Advertisement -

ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 197(1) ಅಡಿಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಸರ್ಕಾರದ ಪೂರ್ವಾನುಮತಿ ಅಗತ್ಯವಾಗಿದ್ದು, ಇದೆ ನಿಯಮ ಮನಿ ಲಾಂಡರಿಂಗ್ ತಡೆ ಕಾಯ್ದೆ ( PMLA ) ಯ ಮನಿ ಲಾಂಡರಿಂಗ್ ಪ್ರಕರಣಗಳಿಗೂ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ ಎಂದು ಬುಧವಾರ ಲೈವ್ ಲಾ ವರದಿ ಮಾಡಿದೆ.

ಮಾಜಿ ಐಎಎಸ್ ಅಧಿಕಾರಿಗಳಾದ ಬಿಭು ಪ್ರಸಾದ್ ಆಚಾರ್ಯ ಮತ್ತು ಆದಿತ್ಯನಾಥ್ ದಾಸ್ ವಿರುದ್ಧ ದಾಖಲಿಸಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ರದ್ದುಗೊಳಿಸಿದ ತೆಲಂಗಾಣ ಹೈಕೋರ್ಟ್‌ನ ತೀರ್ಪನ್ನು ನ್ಯಾಯಮೂರ್ತಿ ಅಭಯ್ ಓಕಾ ಮತ್ತು ನ್ಯಾಯಮೂರ್ತಿ ಅಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠವು ಎತ್ತಿ ಹಿಡಿದಿದೆ. ಇಬ್ಬರು ಮಾಜಿ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲು ಪೂರ್ವಾನುಮತಿ ಪಡೆದಿಲ್ಲ ಎಂದು ಪೀಠ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಜೊತೆಗೆ ನಡೆಸಿದ ಪಿತೂರಿಯಲ್ಲಿ ಆಚಾರ್ಯ ಅವರು ಇಂದೂ ಟೆಕ್ಜೋನ್ ಪ್ರೈವೇಟ್ ಲಿಮಿಟೆಡ್‌ಗೆ ವಿಶೇಷ ಆರ್ಥಿಕ ವಲಯ ಯೋಜನೆಗಾಗಿ 250 ಎಕರೆ ಭೂಮಿಯನ್ನು ಕಾನೂನುಬಾಹಿರವಾಗಿ ಮಂಜೂರು ಮಾಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿತ್ತು. ಹಣ ಅಕ್ರಮ ವರ್ಗಾವಣೆಯಲ್ಲಿ ಪರೋಕ್ಷವಾಗಿ ಭಾಗಿಯಾಗಿರುವ ಆರೋಪ ಕೂಡಾ ಆಚಾರ್ಯ ಅವರ ಮೇಲಿದೆ. PMLA

ಜೊತೆಗೆ ಆಗ ತೆಲಂಗಾಣದ ನೀರಾವರಿ ಮತ್ತು ಸಿಎಡಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ದಾಸ್ ಅವರು ಕಾಗ್ನಾ ನದಿಯಿಂದ ಇಂಡಿಯಾ ಸಿಮೆಂಟ್ ಲಿಮಿಟೆಡ್‌ಗೆ ಹೆಚ್ಚುವರಿ 10 ಲಕ್ಷ ಲೀಟರ್ ನೀರನ್ನು ಅಕ್ರಮವಾಗಿ ಹಂಚಿಕೆ ಮಾಡಲು ಜಗನ್ಮೋಹನ್ ರೆಡ್ಡಿ ಅವರೊಂದಿಗೆ ಸಂಚು ರೂಪಿಸಿದ್ದರು ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.

2019ರ ಜನವರಿ 21 ರಂದು ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ ಇಲ್ಲದಿರುವುದನ್ನು ಸೂಚಿಸಿದ್ದ ತೆಲಂಗಾಣ ಹೈಕೋರ್ಟ್ ಮೊಕದ್ದಮೆಯನ್ನು ರದ್ದುಗೊಳಿಸಲು ಅನುಮತಿ ನೀಡಿತ್ತು. ಆದರೆ ಈ ತೀರ್ಪಿನ ವಿರುದ್ಧ ಜಾರಿ ನಿರ್ದೇಶನಾಲಯವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಮನಿ ಲಾಂಡರಿಂಗ್ ತಡೆ ಕಾಯಿದೆಯ 71ನೇ ಸೆಕ್ಷನ್, ಕ್ರಿಮಿನಲ್ ಪ್ರೊಸೀಜರ್ ಕೋಡ್ ಸೇರಿದಂತೆ ಇತರ ಕಾನೂನುಗಳಿಗಿಂತ ಆದ್ಯತೆ ಇವೆ ಎಂದು ಅದು ವಾದಿಸಿದೆ. ಆದರೆ ನ್ಯಾಯಾಲಯವು ಜಾರಿ ನಿರ್ದೇಶನಾಲಯದ ಈ ವಾದವನ್ನು ನಿರಾಕರಿಸಿದೆ.

ಇದನ್ನೂ ಓದಿ: ಕೋಮು ಸೌಹಾರ್ದಕ್ಕೆ ಧಕ್ಕೆ, ಮೌಢ್ಯ ಪ್ರಚಾರ : ಧೀರೇಂದ್ರ ಶಾಸ್ತ್ರಿ ಸಂದರ್ಶನ ತೆಗೆದುಹಾಕುವಂತೆ ನ್ಯೂಸ್ 18ಗೆ ಎನ್‌ಬಿಡಿಎಸ್ಎ ಸೂಚನೆ

ಕೋಮು ಸೌಹಾರ್ದಕ್ಕೆ ಧಕ್ಕೆ, ಮೌಢ್ಯ ಪ್ರಚಾರ : ಧೀರೇಂದ್ರ ಶಾಸ್ತ್ರಿ ಸಂದರ್ಶನ ತೆಗೆದುಹಾಕುವಂತೆ ನ್ಯೂಸ್ 18ಗೆ ಎನ್‌ಬಿಡಿಎಸ್ಎ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...