Homeಮುಖಪುಟ’ಪ್ರಧಾನಿ ಹುದ್ದೆಗೆ ವಿಶೇಷ ಸ್ಥಾನಮಾನವಿದೆ’: ಮೋದಿ ವಿರುದ್ಧ ಮಾಜಿ ಪಿಎಂ ಮನಮೋಹನ್ ಸಿಂಗ್ ಕಿಡಿ

’ಪ್ರಧಾನಿ ಹುದ್ದೆಗೆ ವಿಶೇಷ ಸ್ಥಾನಮಾನವಿದೆ’: ಮೋದಿ ವಿರುದ್ಧ ಮಾಜಿ ಪಿಎಂ ಮನಮೋಹನ್ ಸಿಂಗ್ ಕಿಡಿ

"ಮೋದಿ ಸರ್ಕಾರವು ತಮ್ಮ ತಪ್ಪುಗಳನ್ನು ಒಪ್ಪಿಕೊಂಡು ಸರಿಪಡಿಸುವ ಬದಲು ಇನ್ನೂ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ದೂಷಿಸುತ್ತಿದೆ"

- Advertisement -
- Advertisement -

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರತಿಯೊಂದು ಸಮಸ್ಯೆಗೂ ಜವಾಹರಲಾಲ್ ನೆಹರು ಅವರನ್ನು ದೂಷಿಸುತ್ತಿದ್ದಾರೆ ಎಂದು ಆರೋಪಿಸಿರುವ ಅವರು, “ಪ್ರಧಾನಿ ಹುದ್ದೆಗೆ ವಿಶೇಷ ಸ್ಥಾನಮಾನವಿದೆ” ಎಂದಿದ್ದಾರೆ.

ಕಾಂಗ್ರೆಸ್ ಎಂದಿಗೂ ರಾಜಕೀಯ ಲಾಭಕ್ಕಾಗಿ ದೇಶವನ್ನು ವಿಭಜಿಸಲಿಲ್ಲ ಅಥವಾ ಸತ್ಯವನ್ನು ಮರೆಮಾಚಲಿಲ್ಲ ಎಂದು 89 ವರ್ಷದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಹೇಳಿದ್ದಾರೆ.

“ಒಂದೆಡೆ ಜನರು ಹಣದುಬ್ಬರ ಮತ್ತು ನಿರುದ್ಯೋಗದ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ, ಮತ್ತೊಂದೆಡೆ, ಕಳೆದ ಏಳೂವರೆ ವರ್ಷಗಳಿಂದ ಅಧಿಕಾರದಲ್ಲಿರುವ ಈಗಿನ ಸರ್ಕಾರವು ತಮ್ಮ ತಪ್ಪುಗಳನ್ನು ಒಪ್ಪಿಕೊಂಡು ಸರಿಪಡಿಸುವ ಬದಲು ಜನರ ಸಮಸ್ಯೆಗಳಿಗೆ ಇನ್ನೂ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ದೂಷಿಸುತ್ತಿದೆ” ಎಂದು ವೀಡಿಯೊ ಸಂದೇಶದಲ್ಲಿ ಡಾ. ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್, ನೆಹರು ಮತ್ತು ಪಾಕಿಸ್ತಾನದ ಬಗ್ಗೆಯಷ್ಟೇ ಮೋದಿ ಮಾತನಾಡುತ್ತಾರೆ : ರಾಹುಲ್ ಗಾಂಧಿ

 

“ಪ್ರಧಾನಿ ಸ್ಥಾನಕ್ಕೆ ವಿಶೇಷ ಮಹತ್ವವಿದೆ ಎಂದು ನಾನು ಭಾವಿಸುತ್ತೇನೆ. ಪ್ರಧಾನಿಯವರು ಇತಿಹಾಸವನ್ನು ದೂಷಿಸುವ ಬದಲು ತಮ್ಮ ಘನತೆಯನ್ನು ಕಾಯ್ದುಕೊಳ್ಳಬೇಕು. ನಾನು 10 ವರ್ಷಗಳ ಕಾಲ ಪ್ರಧಾನಿಯಾಗಿದ್ದಾಗ ನನ್ನ ಕೆಲಸದ ಮೂಲಕ ಮಾತನಾಡಿದ್ದೇನೆ. ಪ್ರಪಂಚದ ಮುಂದೆ ದೇಶವು ಪ್ರತಿಷ್ಠೆಯನ್ನು ಕಳೆದುಕೊಳ್ಳಲು ನಾನು ಎಂದಿಗೂ ಬಿಡಲಿಲ್ಲ. ನಾನು ಎಂದಿಗೂ ಭಾರತದ ಹೆಮ್ಮೆಯನ್ನು ಕುಗ್ಗಿಸಿಲ್ಲ. ನನ್ನ ವಿರುದ್ಧ ದುರ್ಬಲ, ಶಾಂತ ಮತ್ತು ಭ್ರಷ್ಟ ಎಂಬ ಸುಳ್ಳು ಆರೋಪದ ನಂತರ, ಬಿಜೆಪಿ ಮತ್ತು ಅದರ ಬಿ ಮತ್ತು ಸಿ-ಟೀಮ್ ದೇಶದ ಮುಂದೆ ಬಹಿರಂಗಗೊಳ್ಳುತ್ತಿದೆ ಎಂಬ ತೃಪ್ತಿ ನನಗಿದೆ” ಎಂದಿದ್ದಾರೆ.

“ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಆರ್ಥಿಕ ನೀತಿಯ ಬಗ್ಗೆ ತಿಳುವಳಿಕೆ ಇಲ್ಲ. ಈ ವಿಷಯ ರಾಷ್ಟ್ರಕ್ಕೆ ಸೀಮಿತವಾಗಿಲ್ಲ, ವಿದೇಶಾಂಗ ನೀತಿಯಲ್ಲೂ ಈ ಸರ್ಕಾರ ವಿಫಲವಾಗಿದೆ, ಚೀನಾ ನಮ್ಮ ಗಡಿಯಲ್ಲಿ ಕುಳಿತು ಅದನ್ನು ಹತ್ತಿಕ್ಕುವ ಪ್ರಯತ್ನಗಳನ್ನು ಮಾಡುತ್ತಿದೆ. ನಾಯಕರನ್ನು ಬಲವಂತವಾಗಿ ತಬ್ಬಿಕೊಳ್ಳುವುದು ಅಥವಾ ಅವರಿಗೆ ಬಿರಿಯಾನಿ ತಿನ್ನಿಸುವ ಮೂಲಕ ವಿದೇಶಾಂಗ ನೀತಿಯನ್ನು ನಡೆಸಲಾಗುವುದಿಲ್ಲ ಎಂದು ಪ್ರಧಾನಿ ಅರ್ಥಮಾಡಿಕೊಂಡಿದ್ದಾರೆ ಎಂದು ನಾನು ಭಾವಿಸುತ್ತೇನೆ” ಎಂದು ತೀಕ್ಷ್ಣವಾಗಿ ತಿವಿದಿದ್ದಾರೆ.

“ನಾವು ಎಂದಿಗೂ ಪಟ್ಟಭದ್ರ ರಾಜಕೀಯ ಲಾಭಕ್ಕಾಗಿ ದೇಶವನ್ನು ವಿಭಜಿಸಲಿಲ್ಲ. ನಾವು ಎಂದಿಗೂ ಸತ್ಯವನ್ನು ಮರೆಮಾಚಲು ಪ್ರಯತ್ನಿಸಲಿಲ್ಲ. ನಾವು ಎಂದಿಗೂ ದೇಶದ ಗೌರವ ಅಥವಾ ಪ್ರಧಾನಿ ಸ್ಥಾನಕ್ಕೆ ಧಕ್ಕೆ ತಂದಿಲ್ಲ. ಜನರು ಇಂದು ವಿಭಜನೆಯಾಗುತ್ತಿದ್ದಾರೆ. ಈ ಸರ್ಕಾರದ ನಕಲಿ ರಾಷ್ಟ್ರೀಯತೆ ಟೊಳ್ಳು ಮತ್ತು ಅಪಾಯಕಾರಿ. ಒಡೆದು ಆಳುವ ಬ್ರಿಟಿಷರ ನೀತಿಯ ಮೇಲೆ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸಲಾಗುತ್ತಿದೆ. ಸರ್ಕಾರದ ಆರ್ಥಿಕ ನೀತಿಯಲ್ಲಿ ಸ್ವಾರ್ಥ ಮತ್ತು ದುರಾಸೆ ಇದೆ. ತಮ್ಮ ಸ್ವಾರ್ಥಕ್ಕಾಗಿ ಜನರನ್ನು ಒಡೆದು ಹೊಡೆದಾಡುವಂತೆ ಮಾಡುತ್ತಿದ್ದಾರೆ” ಎಂದಿದ್ದಾರೆ.

ಮುಂದುವರೆದು, ”ಕೆಲವು ದಿನಗಳ ಹಿಂದೆ ಪ್ರಧಾನಿ ಭದ್ರತೆ ಹೆಸರಿನಲ್ಲಿ ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ ಹಾಗೂ ರಾಜ್ಯದ ಜನತೆಯನ್ನು ಅವಮಾನಿಸುವ ಪ್ರಯತ್ನ ನಡೆದಿತ್ತು. ರೈತರ ಆಂದೋಲನದ ಸಂದರ್ಭದಲ್ಲೂ ಪಂಜಾಬ್‌ ಮತ್ತು ಪಂಜಾಬಿಗರ ಮಾನಹಾನಿ ಮಾಡುವ ಯತ್ನ ನಡೆದಿತ್ತು. ಪಂಜಾಬಿಗಳ ಶೌರ್ಯ, ದೇಶಪ್ರೇಮ ಮತ್ತು ತ್ಯಾಗವನ್ನು ಇಡೀ ಜಗತ್ತು ಗೌರವಿಸುತ್ತದೆ. ಆದರೆ ಎನ್‌ಡಿಎ ಸರ್ಕಾರ ಈ ಬಗ್ಗೆ ಯಾವುದೇ ಮಾತನಾಡಲಿಲ್ಲ. ಪಂಜಾಬ್‌ನ ನಿಜವಾದ ಭಾರತೀಯನಾಗಿ ಈ ಎಲ್ಲಾ ವಿಷಯಗಳು ನನ್ನನ್ನು ತೀವ್ರವಾಗಿ ನೋಯಿಸುತ್ತವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಎದುರಿಸಲು ನೆಹರು-ಇಂದಿರಾ-ಮನಮೋಹನ್‌ ಸಿಂಗ್‌ ಕಟ್ಟಿದ ವ್ಯವಸ್ಥೆಯೆ ದೇಶಕ್ಕೆ ಸಹಾಯ ಮಾಡಿದೆ: ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...