Homeಮುಖಪುಟಮಣಿಪುರ ಹೊತ್ತಿಯುರಿಯುತ್ತಿದ್ದರೂ ಪ್ರಧಾನಿ 'ಮೌನ', ಗೃಹ ಸಚಿವ ಶಾ 'ನಿಷ್ಟ್ರಯೋಜಕ': ಜೈರಾಮ್ ರಮೇಶ್ ವಾಗ್ದಾಳಿ

ಮಣಿಪುರ ಹೊತ್ತಿಯುರಿಯುತ್ತಿದ್ದರೂ ಪ್ರಧಾನಿ ‘ಮೌನ’, ಗೃಹ ಸಚಿವ ಶಾ ‘ನಿಷ್ಟ್ರಯೋಜಕ’: ಜೈರಾಮ್ ರಮೇಶ್ ವಾಗ್ದಾಳಿ

- Advertisement -
- Advertisement -

ಮಣಿಪುರ ಹೊತ್ತಿ ಉರಿಯುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ‘ಮೌನ’ವಾಗಿದ್ದಾರೆ, ಗೃಹ ಸಚಿವ ಅಮಿತ್ ಶಾ ‘ನಿಷ್ಟ್ರಯೋಜಕ’ರಾಗಿದ್ದಾರೆ ಮತ್ತು ಮುಖ್ಯಮಂತ್ರಿ ಎನ್‌. ಬಿರೆನ್ ಸಿಂಗ್ ‘ಕಾರ್ಯಹೀನರಾಗಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ವಾಗ್ದಾಳಿ ನಡೆಸಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದ್ದರೂ ಈ ವರೆಗೂ ಪರಿಸ್ಥಿತಿ ಹತೋಟೆಗೆ ಬಂದಿಲ್ಲ. ಮಣಿಪುರ ಶಾಂತಿಗೆ ಸಂಬಂಧಿಸಿದಂತೆ ಇಲ್ಲಿನ ಹರ್‌ಕಿಶನ್ ಸಿಂಗ್ ಸರ್ಜೀತ್‌ ಭವನದಲ್ಲಿ ಭಾನುವಾರ ರಾಷ್ಟ್ರೀಯ ಸಮಾವೇಶ ನಡೆಸಲಾಯಿತು.

ಸಮಾವೇಶದಲ್ಲಿ ಭಾಗವಹಿಸಿರುವ ಜೈರಾಮ್ ರಮೇಶ್ ಅವರು, ಸಂಘರ್ಷಪೀಡಿತ ಮಣಿಪುರದ ಪರಿಸ್ಥಿತಿ ಉಲ್ಲೇಖಿಸಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ”ಯಾವುದೇ ವಿಚಾರವಾಗಿ ಸರ್ವಸಮ್ಮತಿ ಸೂಚಿಸಲು ಸಾಧ್ಯವಾಗದೇ ಇರಬಹುದು ಆದರೆ ಒಮ್ಮತಕ್ಕೆ ಬರಲು ಸಾಧ್ಯವಿದೆ. ಭಾರತ ಸಂವಿಧಾನ ರಚನೆಯಾಗಿದ್ದೇ ಹೀಗೆ… ಎಲ್ಲರಿಗೂ ಕಿವಿಯಾಗಿ, ಸಂವೇದನಾಶೀಲವಾಗಿದ್ದರೆ ಮಣಿಪುರದಲ್ಲಿ ಶಾಂತಿ ಪುನಃಸ್ಥಾಪನೆ ಸಾಧ್ಯವಿದೆ. ಇದು ಸುದೀರ್ಘ ಪ್ರಕ್ರಿಯೆ; ಒಂದು ವಾರದಲ್ಲಿ ಸಾಧ್ಯವಿಲ್ಲ. ಅದಕ್ಕೆ ಒಂದು ತಿಂಗಳು ಅಥವಾ ವರ್ಷಾನುಗಟ್ಟಲೆ ಸಮಯ ಬೇಕು” ಎಂದು ಹೇಳಿದರು.

”ಮಣಿಪುರದಲ್ಲಿ ಕೂಡಲೇ ಮುಖ್ಯಮಂತ್ರಿ ಬದಲಾವಣೆಯಾಗಬೇಕು” ಎಂದು ಜೈರಾಮ್‌ ರಮೇಶ್ ಅವರು ಆಗ್ರಹಿಸಿದರು.

ಈಶಾನ್ಯ ರಾಜ್ಯದಲ್ಲಿ ಎರಡು ಮೂಲಭೂತ ಕ್ರಮಗಳನ್ನು ಅನುಷ್ಠಾನಗೊಳಿಸಬೇಕು

1- ಯಾವುದೇ ತಾರತಮ್ಯ ಇಲ್ಲದೆ ನಿರ್ದಾಕ್ಷಿಣ್ಯವಾಗಿ ಎಲ್ಲಾ ಸಶಸ್ತ್ರ ಗುಂಪನ್ನು ನಿಶ್ಯಸ್ತ್ರೀಕರಣಗೊಳಿಸಬೇಕು.

2- ನಂಬಿಕೆ, ಸಾಮರಸ್ಯದ ವಾತಾವರಣವನ್ನು ನಿರ್ಮಿಸಬೇಕು ಎಂದು ಹೇಳಿದರು.

ಈ ಬಗ್ಗೆ ಅವರು ಟ್ವಿಟ್ ಕೂಡ ಮಾಡಿದ್ದು, ”ಹತ್ತು ಸಮಾನ ಮನಸ್ಕ ರಾಜಕೀಯ ಪಕ್ಷಗಳು ಆಯೋಜಿಸಿದ್ದ ಸಮಾವೇಶದಲ್ಲಿ ಪಾಲ್ಗೊಂಡು ಮಣಿಪುರದಲ್ಲಿ ಉದ್ಭವಿಸಿರುವ ರಾಜಕೀಯ, ಆಡಳಿತಾತ್ಮಕ ಅರಾಜಕತೆ ಕುರಿತು ಅಭಿಪ್ರಾಯ ಹಂಚಿಕೊಂಡೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ಸಿಎಂ ಸಿಂಗ್‌ರನ್ನು ಪದಚ್ಯುತಗೊಳಿಸಲು ಸರ್ವಪಕ್ಷ ಸಭೆಯಲ್ಲಿ ಒತ್ತಾಯ

ಮಣಿಪುರದ ಬಗ್ಗೆ ಪ್ರಧಾನಿಗೆ ಕಾಳಜಿಯಿದ್ದರೆ ಸಿಎಂ ಸಿಎಂ ಸ್ಥಾನದಿಂದ ಸಿಂಗ್‌ರನ್ನು ವಜಾಗೊಳಿಸಲಿ: ಖರ್ಗೆ

ಮಣಿಪುರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಿಜವಾಗಿಯೂ ಕಾಳಜಿಯಿದ್ದರೆ, ರಾಜ್ಯದ ಮುಖ್ಯಮಂತ್ರಿ ಸ್ಥಾನದಿಂದ ಎನ್. ಬಿರೇನ್ ಸಿಂಗ್ ಅವರನ್ನು ವಜಾಗೊಳಿಸಬೇಕು. ಇದು ಅವರು ಮಾಡಬೇಕಾದ ಮೊದಲ ಕೆಲಸವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ”ಮಣಿಪುರ ಹಿಂಸಾಚಾರದ ವಿಚಾರವಾಗಿ ಬಿಜೆಪಿ ತನ್ನ ವೈಫಲ್ಯವನ್ನು ಮುಚ್ಚಿಡಲು ಸಾಧ್ಯವಿಲ್ಲ” ಎಂದಿದ್ದಾರೆ.

”ಮಣಿಪುರ ಹಿಂಸಾಚಾರ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಧಾನಿಯೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಆದರೆ, ಕಳೆದ 55 ದಿನಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರದ ಹಿಂಸಾಚಾರದ ಬಗ್ಗೆ ಒಂದೇ ಒಂದು ಮಾತು ಆಡಲಿಲ್ಲ. ಪ್ರಧಾನಿ ಅವರ ಪ್ರತಿಕ್ರಿಯೆಗಾಗಿ ಇಡೀ ದೇಶವೇ ಎದುರು ನೋಡುತ್ತಿದೆ. ಮಣಿಪುರದ ಬಗ್ಗೆ ಪ್ರಧಾನಿಗೆ ನಿಜವಾಗಿಯೂ ಕಾಳಜಿ ಇದ್ದರೆ ಮುಖ್ಯಮಂತ್ರಿ ಸ್ಥಾನದಿಂದ ಬಿರೇನ್ ಸಿಂಗ್ ಅವರನ್ನು ವಜಾಗೊಳಿಸಲಿ” ಎಂದು ಹೇಳಿದರು.

”ಮೊದಲಿಗೆ ಸರ್ಕಾರವು ಎಲ್ಲ ಪಕ್ಷಗಳ ಜೊತೆ ಮಾತುಕತೆ ನಡೆಸಬೇಕು. ಉಗ್ರಗಾಮಿ ಸಂಘಟನೆ ಮತ್ತು ಸಮಾಜ ಘಾತುಕ ಶಕ್ತಿಗಳಿಂದ ಕದ್ದ ಶಸ್ತ್ರಾಸ್ತ್ರಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಭದ್ರತಾ ಪಡೆಯ ಸಹಾಯ ಪಡೆದುಕೊಳ್ಳಬೇಕು. ರಾಷ್ಟ್ರೀಯ ಹೆದ್ದಾರಿಗಳನ್ನು ಮುಕ್ತಗೊಳಿಸುವ ಮೂಲಕ ಅಗತ್ಯ ವಸ್ತುಗಳು ಜನರಿಗೆ ತಲುಪುವ ಹಾಗೆ ನೋಡಿಕೊಳ್ಳಬೇಕಿದೆ. ಹೆದ್ದಾರಿಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಬೇಕಿದೆ” ಎಂದು ಖರ್ಗೆ ಆಗ್ರಹಿಸಿದ್ದಾರೆ.

”ಸಂತ್ರಸ್ತ ಕುಟುಂಬಗಳಿಗೆ ಪರಿಹಾರ-ಪುನರ್ವಸತಿ ಕಲ್ಪಿಸಬೇಕು. ಈ ವಿಷಯದಲ್ಲಿ ವಿಳಂಬವಾಗದಂತೆ ನೋಡಿಕೊಳ್ಳಬೇಕು. ಈಗಾಗಲೇ ಘೋಷಿಸಿರುವ ಪರಿಹಾರ ಕ್ರಮಗಳು ಅಸಮರ್ಪಕವಾಗಿವೆ” ಎಂದು ಮಲ್ಲಿಕಾರ್ಜುನ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಪ್ರಕರಣ: ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸಿಎಂಗೆ ರಾಹುಲ್ ಗಾಂಧಿ ಪತ್ರ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯರ ನೆರವಿಗೆ ನಿಲ್ಲುವಂತೆ ಮತ್ತು ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...