Homeಕರ್ನಾಟಕಪೋಕ್ಸೊ ಮತ್ತು ಐಪಿಸಿ ‘ವೈಯಕ್ತಿಕ’ ಕಾನೂನನ್ನು ಮೀರಿ ಅನ್ವಯವಾಗುತ್ತದೆ: ಕರ್ನಾಟಕ ಹೈಕೋರ್ಟ್

ಪೋಕ್ಸೊ ಮತ್ತು ಐಪಿಸಿ ‘ವೈಯಕ್ತಿಕ’ ಕಾನೂನನ್ನು ಮೀರಿ ಅನ್ವಯವಾಗುತ್ತದೆ: ಕರ್ನಾಟಕ ಹೈಕೋರ್ಟ್

ಪ್ರೌಢಾವಸ್ಥೆಗೆ ಬಂದ ಅಪ್ರಾಪ್ತ ಮುಸ್ಲಿಂ ಬಾಲಕಿಯ ವಿವಾಹವಾಗುವುದು ಬಾಲ್ಯವಿವಾಹವಲ್ಲ ಎಂಬ ವಾದವನ್ನು ಕೋರ್ಟ್ ತಿರಸ್ಕರಿದೆ

- Advertisement -
- Advertisement -

ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯಿದೆಯು ವೈಯಕ್ತಿಕ ಕಾನೂನನ್ನು ಮೀರಿ ಅನ್ವಯವಾಗುವ ವಿಶೇಷ ಕಾಯಿದೆಯಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ವ್ಯಾಖ್ಯಾನಿಸಿದೆ. ಅಪ್ರಾಪ್ತ ವಯಸ್ಕರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ಜಾಮೀನು ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಅವರು ಎರಡು ವಿಭಿನ್ನ ಸಂದರ್ಭಗಳಲ್ಲಿ ಈ ಬಗ್ಗೆ ಉಲ್ಲೇಖಿಸಿದೆ.

ಪ್ರೌಢಾವಸ್ಥೆಗೆ ಬಂದ ಅಪ್ರಾಪ್ತ ಮುಸ್ಲಿಂ ಬಾಲಕಿಯ ವಿವಾಹವಾಗುವುದು ಬಾಲ್ಯವಿವಾಹ ನಿಷೇಧ ಕಾಯಿದೆಯ ಉಲ್ಲಂಘನೆಯಲ್ಲ ಎಂಬ ವಾದವನ್ನೂ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್‌‌ ಅವರು ತಿರಸ್ಕರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೊದಲ ಪ್ರಕರಣದಲ್ಲಿ, 17 ವರ್ಷದ ಬಾಲಕಿ 2022 ರ ಜೂನ್ 16 ರಂದು ವೈದ್ಯಕೀಯ ತಪಾಸಣೆಗಾಗಿ ರಾಮಮೂರ್ತಿ ನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋದ ವೇಳೆ ಅವರು ಗರ್ಭಿಣಿ ಎಂದು ಕಂಡು ಬಂದಿತ್ತು. ಈ ವೇಳೆ ಬಾಲಕಿಯ ಪತಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಮುಂಬೈ ಹೈಕೋರ್ಟ್‌: ಅತ್ಯಾಚಾರ ಸಂತ್ರಸ್ತೆ ವರ್ಷದೊಳಗೆ ಪತ್ತೆಯಾದರೆ ಮದುವೆಯಾಗುವಂತೆ ಆರೋಪಿಗೆ ಆದೇಶ!

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಕೀಯ ಅಧಿಕಾರಿ ನೀಡಿದ ಮಾಹಿತಿಯ ಆಧಾರದ ಮೇಲೆ ಆರ್‌ಕೆ ಪುರಂ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ (ಎಸ್‌ಐ) ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರೆ.

ಬಾಲ್ಯವಿವಾಹ ತಡೆ ಕಾಯಿದೆಯ ಸೆಕ್ಷನ್ 9 ಮತ್ತು 10 ಮತ್ತು ಪೋಕ್ಸೊ ಸೆಕ್ಷನ್ 4 ಮತ್ತು 6 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವನ್ನು ಅವರು ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಇದರ ನಂತರ ಬಾಲಕಿಯ ಪತಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

“ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ, ಪ್ರೌಢಾವಸ್ಥೆಯನ್ನು (ಸಾಮಾನ್ಯವಾಗಿ 15 ವರ್ಷಗಳು) ಮಹಿಳೆಯ ಮದುವೆಗೆ ಸಾಮಾನ್ಯ ವಯಸ್ಸು ಎಂದು ಪರಿಗಣಿಸಲಾಗುತ್ತದೆ. ಪ್ರಕರಣದಲ್ಲಿ ಮದುವೆಗೂ ಮುನ್ನವೇ ಬಾಲಕಿ ಪ್ರೌಢಾವಸ್ಥೆಗೆ ಬಂದಿದ್ದರಿಂದ ಬಾಲ್ಯವಿವಾಹ ತಡೆ ಕಾಯ್ದೆ ಪ್ರಕಾರ ಅವರ ಮದುವೆ ಅಪರಾಧವಲ್ಲ” ಎಂದು ಅರ್ಜಿದಾರರ ಪರವಾಗಿ ವಕೀಲರು ವಾದಿಸಿದ್ದರು.

ಇದನ್ನೂ ಓದಿ: ಚಿಕ್ಕಮಗಳೂರು: BJP ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆಯ ನಡುವೆ ದಲಿತ-ಮುಸ್ಲಿಂ ಜೋಡಿ ಮದುವೆ

ಈ ವಾದವನ್ನು ಉಲ್ಲೇಖಿಸಿದ ನ್ಯಾಯಮೂರ್ತಿ, “POCSO ವೈಯಕ್ತಿಕ ಕಾನೂನನ್ನು ಅತಿಕ್ರಮಿಸುತ್ತದೆ ಮತ್ತು ಲೈಂಗಿಕ ಚಟುವಟಿಕೆಗಳಿಗೆ ಒಪ್ಪಿಗೆ ನೀಡುವ ವಯಸ್ಸು 18 ಆಗಿರುವುದರಿಂದ ಅಂತಹ ವಾದಗಳನ್ನು ಅನುಮತಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

ಆದಾಗ್ಯೂ, ತೀರ್ಪಿನಲ್ಲಿ,“ಸಂತ್ರಸ್ತೆಗೆ ಸುಮಾರು 17 ವರ್ಷ ವಯಸ್ಸಾಗಿದ್ದು, ವಿಷಯಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯವಿದೆ” ಎಂದು ಹೇಳಲಾಗಿದೆ. ತನ್ನ ಒಪ್ಪಿಗೆಯಿಲ್ಲದೆ ವಿವಾಹವನ್ನು ಶಾಸ್ತ್ರೋಕ್ತವಾಗಿ ನಡೆಸಲಾಗಿದೆ ಎಂದು ಆಕೆ ಆರೋಪಿಸಿದ್ದರೂ, ಅದಕ್ಕೆ ಆಕೆಯ ಆಕ್ಷೇಪಣೆಗೆ ಯಾವುದೇ ಪುರಾವೆಗಳಿಲ್ಲ ಎಂದು ಅದು ಹೇಳಿದೆ. ಆಕೆ ತನ್ನ ಪೋಷಕರ ಪ್ರಭಾವದಲ್ಲಿದ್ದರೂ ಒಪ್ಪಿಗೆ ನೀಡುವ ಪಕ್ಷವಾಗಿದ್ದಳು ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

ಅರ್ಜಿದಾರರಿಗೆ ಜಾಮೀನು ನೀಡಲು ಯಾವುದೇ ಅಡ್ಡಿಯಿಲ್ಲ ಎಂದು ಉಲ್ಲೇಖಿಸಿದ ನ್ಯಾಯಾಧೀಶರು, “ಅರ್ಜಿದಾರರು ಸೂಕ್ತ ದಾಖಲೆಗಳನ್ನು ಹಾಜರುಪಡಿಸಿರುವುದರಿಂದ ಮದುವೆಗೆ ಸಂಬಂಧಿಸಿದಂತೆ ಯಾವುದೇ ಗಂಭೀರ ವಿವಾದವಿಲ್ಲ” ಎಂದು ಹೇಳಿದ್ದಾರೆ. ಪ್ರಕರಣದಲ್ಲಿ ಬಾಲಕಿಯ ಪತಿಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಧೀಶರು, ಬಾಲಕಿ ಗರ್ಭಿಣಿಯಾಗಿರುವುದರಿಂದ ಆಕೆಗೆ ಪತಿಯ ಬೆಂಬಲದ ಅಗತ್ಯವಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಕ್ತ ಸಂಬಂಧಗಳಲ್ಲಿಯೇ ಮದುವೆ: ಕರ್ನಾಟಕಕ್ಕೆ ಎರಡನೇ ಸ್ಥಾನ

ಅಮಾನ್ಯವಾದ ಅಪ್ರಾಪ್ತರ ಸಮ್ಮತಿ

ಅಕ್ಟೋಬರ್ 27 ರ ಮತ್ತೊಂದು ಪ್ರಕರಣದಲ್ಲಿ,“ಪೋಕ್ಸೊ ಮತ್ತು ಐಪಿಸಿ [ಭಾರತೀಯ ದಂಡ ಸಂಹಿತೆ] ಗಳು ದೃಢವಾದ ಕಾಯಿದೆಗಳು. ಅವು ವೈಯಕ್ತಿಕ ಕಾನೂನಿನ ಮೇಲೆ ಮೇಲುಗೈ ಸಾಧಿಸುತ್ತವೆ. ವೈಯಕ್ತಿಕ ಕಾನೂನಿನ ನೆಪದಲ್ಲಿ ಅರ್ಜಿದಾರರು ಸಾಮಾನ್ಯ ಜಾಮೀನು ಪಡೆಯಲು ಸಾಧ್ಯವಿಲ್ಲ” ಎಂದು ಹೈಕೋರ್ಟ್ ಹೇಳಿತ್ತು.

16ರ ಹರೆಯದ ಬಾಲಕಿಯಿಂದ ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ 19 ವರ್ಷದ ಮುಸ್ಲಿಂ ಯುವಕನ ಜಾಮೀನು ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಾಲಕಿಯನ್ನು ವ್ಯಕ್ತಿಯು ಶ್ರೀರಂಗಪಟ್ಟಣದ ಲಾಡ್ಜ್‌ಗೆ ಕರೆದೊಯ್ದು ಅಲ್ಲಿ ರಾತ್ರಿ ತಂಗಿದ್ದರು. ಈ ನಡುವೆ ಬಾಲಕಿಯ ತಾಯಿ ನಾಪತ್ತೆ ದೂರು ದಾಖಲಿಸಿದ್ದರು. ವ್ಯಕ್ತಿಯು ಬಾಲಕಿಯನ್ನು ಮನಗೆ ಬಿಟ್ಟುಹೋದ ನಂತರ, ಹುಡುಗಿ ತನ್ನ ತಾಯಿಗೆ ಘಟನೆಯನ್ನು ವಿವರಿಸಿದ್ದರು.

ಇದನ್ನೂ ಓದಿ: ಲವ್‌ ಜಿಹಾದ್ ಆರೋಪಕ್ಕೆ ಟ್ವಿಸ್ಟ್‌: ಒಪ್ಪಿತ ಮದುವೆಯಲ್ಲಿ ಮಧ್ಯಪ್ರವೇಶ ಅಸಾಧ್ಯ ಎಂದ ಕೇರಳ ಹೈಕೋರ್ಟ್

ಇದರ ನಂತರ ತನಿಖಾಧಿಕಾರಿಯು ಹುಡುಗಿಯ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದು, ಹೇಳಿಕೆಯಲ್ಲಿ, ಹುಡುಗಿಯು ತಾನು ಸ್ವಯಂ ಪ್ರೇರಣೆಯಿಂದ ವ್ಯಕ್ತಿಯೊಂದಿಗೆ ತೆರಳಿ ಲೈಂಗಿಕ ಸಂಬಂಧ ಹೊಂದಿದ್ದಾರೆ ಎಂದು ಹೇಳಿದ್ದರು.

ಈ ಪ್ರಕರಣದಲ್ಲಿ ಪೋಕ್ಸೊ ಕಾಯ್ದೆಯ ಸೆಕ್ಷನ್ 6 ಮತ್ತು 12 ರ ಅಡಿಯಲ್ಲಿ ವ್ಯಕ್ತಿಯ ವಿರುದ್ಧ ದೂರು ದಾಖಲಿಸಲಾಗಿತ್ತು. ಇದರ ನಂತರ ಬಾಲಕಿಯು ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಹೇಳಿಕೆ ಬದಲಿಸಿ ಆಪಾದಿತ ವ್ಯಕ್ತಿಯು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಿದ್ದಾರೆ. ಆತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ವಿಚಾರಣೆ ವೇಳೆ ಆರೋಪಿ ಪರ ವಕೀಲರು ಬಾಲಕಿಯ ಹೇಳಿಕೆಯಲ್ಲಿ ವ್ಯತ್ಯಾಸವಿದೆ ಎಂದು ತಿಳಿಸಿದರು. ಯುವಕ ಮತ್ತು ಹುಡುಗಿ ಇಬ್ಬರೂ ಮುಸ್ಲಿಮರಾಗಿರುವುದರಿಂದ ಬಾಲಕಿಯು ಪ್ರೌಢಾವಸ್ಥೆಯನ್ನು ಮೀರಿದ್ದಾರೆ ಎಂಬವುದನ್ನು ಗಮನಿಸುವಂತೆಯೂ ವಕೀಲರು ಪೀಠವನ್ನು ಕೇಳಿದ್ದರು.

ಇದನ್ನೂ ಓದಿ: ಮುಸ್ಲಿಂ ಜೊತೆ ಮದುವೆಯಾದರೆ ಬಹಿಷ್ಕರಿಸಿ ಎನ್ನುವ ಬಿಜೆಪಿ ಮುಖಂಡ, ‘ಅಂತರ್ಜಾತಿ ವಿವಾಹ’ ಎಂದರೆ ಉತ್ತರಿಸುವುದಿಲ್ಲ!

ಆದಾಗ್ಯೂ, ನ್ಯಾಯಾಲಯವು ತೀರ್ಪಿನಲ್ಲಿ,“ಒಂದು ವೇಳೆ ಒಪ್ಪಿಗೆ ಇದೆ ಎಂದು ಹೇಳಿದರೂ, ಸಂತ್ರಸ್ತೆ ಬಾಲಕಿ ಅಪ್ರಾಪ್ತ ವಯಸ್ಸಿನವಳಾಗಿರುವುದರಿಂದ ಅವರ ಒಪ್ಪಿಗೆಯು ಅಪ್ರಸ್ತುತವಾಗುತ್ತದೆ” ಎಂದು ಎಂದು ಹೇಳಿತ್ತು. ಪ್ರಕರಣದಲ್ಲಿ ನ್ಯಾಯಾಲಯವು ಆರೋಪಿಗೆ ಜಾಮೀನು ಅರ್ಜಿಯನ್ನು ತಿರಸ್ಕರಿಸಿ, ಆರೋಪಪಟ್ಟಿ ಸಲ್ಲಿಸಿದ ಮಾತ್ರಕ್ಕೆ ಅರ್ಜಿದಾರರಿಗೆ ಜಾಮೀನು ಪಡೆಯುವ ಯಾವುದೇ ಹಕ್ಕು ಇಲ್ಲ” ಎಂದು ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...