Homeಮುಖಪುಟಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

- Advertisement -
- Advertisement -

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು ನೀಡಿದೆ. ಆರೋಪಿಯು ಈಗ ಪ್ರೌಢಾವಸ್ಥೆಗೆ ತಲುಪಿರುವ ಅಪ್ರಾಪ್ತ ವಯಸ್ಕಳನ್ನು ಮದುವೆಯಾಗುವ ಪ್ರಸ್ತಾಪಕ್ಕೆ ಆಕೆಯ ಕುಟುಂಬ ಒಪ್ಪಿಗೆ ನೀಡಿದೆ. 

ಬುಧವಾರ ನ್ಯಾಯಾಲಯದ ಆವರಣದಲ್ಲಿ ಖಾಜಿಯೊಬ್ಬರು ಎರಡೂ ಕಡೆಯ ಕುಟುಂಬ ಸದಸ್ಯರ ಸಮ್ಮುಖದಲ್ಲಿ ವಿವಾಹವನ್ನು ನೆರವೇರಿಸಿರುವುದಾಗಿ ವರದಿಯಾಗಿದೆ.

18 ವರ್ಷ ತುಂಬಿರುವ ಸಂತ್ರಸ್ತೆಯ ಕುಟುಂಬ ಸದಸ್ಯರು ಮತ್ತು ಆರೋಪಿಯು ಮದುವೆಗೆ ಒಪ್ಪಿಗೆ ನೀಡಿರುವುದನ್ನು ಗಮನಿಸಿದ ನ್ಯಾಯಾಧೀಶ ಕಲ್ಲೋಳ್ ಕುಮಾರ್ ದಾಸ್, 10,000 ರೂ.ಗಳ ಬಾಂಡ್ ಮೇಲೆ ಅಪರಾಧಿಗೆ ಜಾಮೀನು ನೀಡಿದ್ದಾರೆ. 

ಉತ್ತರ ಪರಗಣ 24 ಜಿಲ್ಲೆಯ ಗೈಘಾಟಾ ಪೊಲೀಸ್ ಠಾಣೆ ಪ್ರದೇಶದ ನಿವಾಸಿಯಾಗಿರುವ ಆ ವ್ಯಕ್ತಿ ಸುಮಾರು ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿಕೊಂಡು ಲೈಂಗಿಕ ಸಂಬಂಧ ಬೆಳೆಸಿಕೊಂಡಿದ್ದ ಎಂದು ಬಾಲಕಿಯ ಕುಟುಂಬ ಸಲ್ಲಿಸಿದ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. 

ಸಂಬಂಧದ ಬಗ್ಗೆ ತಿಳಿದ ನಂತರ, ಕುಟುಂಬ ಸದಸ್ಯರು ಅಕ್ಟೋಬರ್ 2025 ರಲ್ಲಿ ಪೊಲೀಸ್ ದೂರು ದಾಖಲಿಸಿದರು. ಆಗ ಆ ವ್ಯಕ್ತಿ ಆಕೆಯನ್ನು ಮದುವೆಯಾಗಲು ನಿರಾಕರಿಸಿದ್ದ. ಈ ದೂರು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಆತನನ್ನು ಬಂಧಿಸಲಾಗಿತ್ತು. 

ಕಳೆದ ನಾಲ್ಕು ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ, ಈ ವಾರದ ಆರಂಭದಲ್ಲಿ ತಾನು ಹುಡುಗಿಯನ್ನು ಮದುವೆಯಾಗುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದು, ಆಕೆಯ ಕುಟುಂಬ ಸದಸ್ಯರು ಈ ಪ್ರಸ್ತಾಪವನ್ನು ಅನುಮೋದಿಸಿದ್ದಾರೆ. ಜಾಮೀನು ದೊರೆತ ನಂತರ, ಆರೋಪಿಯು ನ್ಯಾಯಾಲಯದ ಆವರಣದಲ್ಲಿ 18 ವರ್ಷದ ಯುವತಿಯನ್ನು ವಿವಾಹವಾಗಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....

ಕಾಂಗ್ರೆಸ್ ಮುಸ್ಲಿಮರನ್ನು ದುರ್ಬಳಕೆ ಮಾಡಿಕೊಂಡಿದೆ: ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪ

ದಾವಣಗೆರೆ: ಕಾಂಗ್ರೆಸ್ ಪಕ್ಷವು ಇಷ್ಟು ವರ್ಷಗಳಿಂದ ಮುಸ್ಲಿಮರನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಮುಸ್ಲಿಮರು ತಮ್ಮೊಳಗೆ ಚರ್ಚಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ. ಆದ್ದರಿಂದ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ...

CNN ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರಿಂದ ದಾಳಿ : ಮಾಧ್ಯಮ ಒಕ್ಕೂಟದಿಂದ ತೀವ್ರ ಖಂಡನೆ

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ವರದಿ ಮಾಡುತ್ತಿದ್ದ ಸಿಎನ್‌ಎನ್‌ ಮಾಧ್ಯಮ ಸಂಸ್ಥೆಯ ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರು ನಡೆಸಿದ ದೌರ್ಜನ್ಯವನ್ನು ಮಾಧ್ಯಮ ಒಕ್ಕೂಟ ಫಾರಿನ್ ಪ್ರೆಸ್ ಅಸೋಸಿಯೇಷನ್ (ಎಫ್‌ಪಿಎ) ತೀವ್ರವಾಗಿ ಖಂಡಿಸಿದೆ. ಪ್ಯಾಲೆಸ್ತೀನ್‌ನ ತಯಾಸಿರ್...

ಪಶ್ಚಿಮ ಏಷ್ಯಾ ಸಂಘರ್ಷ: ಮಧ್ಯಪ್ರಾಚ್ಯಕ್ಕೆ 3,500 ಅಮೆರಿಕ ಸೈನಿಕರ ನಿಯೋಜನೆ; ಇರಾನ್ ಮೇಲೆ ಭೂದಾಳಿ ನಡೆಸಲು ಪೆಂಟಗನ್ ಸಿದ್ಧತೆ

ಇರಾನ್ ಜೊತೆಗಿನ ಉದ್ವಿಗ್ನತೆ ಹೆಚ್ಚುತ್ತಿರುವಂತೆ, ಪೆಂಟಗನ್ ಸಂಭಾವ್ಯ ನೆಲದ ಕಾರ್ಯಾಚರಣೆಗಳಿಗೆ ಸಿದ್ಧತೆ ನಡೆಸುತ್ತಿದೆ ಎಂದು ವರದಿಗಳು ಸೂಚಿಸುತ್ತಿರುವಾಗಲೂ, ಅಮೆರಿಕವು ಮಧ್ಯಪ್ರಾಚ್ಯದಲ್ಲಿ ತನ್ನ ಮಿಲಿಟರಿ ಉಪಸ್ಥಿತಿಯನ್ನು ಗಮನಾರ್ಹವಾಗಿ ಹೆಚ್ಚಿಸಿದೆ, 3,500 ಕ್ಕೂ ಹೆಚ್ಚು ಸೈನಿಕರನ್ನು...

ಮುಂಬೈನಲ್ಲಿ ವಿತರಣಾ ಟೆಂಪೋದಿಂದ 27 ಎಲ್‌ಪಿಜಿ ಸಿಲಿಂಡರ್‌ಗಳು ಕಳವು; ತನಿಖೆ 

ಮುಂಬೈನಲ್ಲಿ ವಿತರಣಾ ವಾಹನದಿಂದ ಐದು ತುಂಬಿದ ಎಲ್‌ಪಿಜಿ ಸಿಲಿಂಡರ್‌ಗಳು ಸೇರಿದಂತೆ ಇಪ್ಪತ್ತೇಳು ಎಲ್‌ಪಿಜಿ ಸಿಲಿಂಡರ್‌ಗಳು ಕಳವಾಗಿದ್ದು, ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಅನಿಲ ಪೂರೈಕೆಯ...