Homeಕರ್ನಾಟಕಪೋಕ್ಸೋ ಪ್ರಕರಣ : ಚಿತ್ರದುರ್ಗ ಜಿಲ್ಲಾ ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

ಪೋಕ್ಸೋ ಪ್ರಕರಣ : ಚಿತ್ರದುರ್ಗ ಜಿಲ್ಲಾ ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

- Advertisement -
- Advertisement -

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಶರಣರು ಸೋಮವಾರ ಜಿಲ್ಲಾ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

ಫೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗೆ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ಕಳೆದ ಮಂಗಳವಾರ (ಏ.23) ರದ್ದು ಮಾಡಿತ್ತು ಮತ್ತು ಒಂದು ವಾರದೊಳಗೆ ನ್ಯಾಯಾಲಯಕ್ಕೆ ಹಿಂದಿರುಗುವಂತೆ ಸೂಚಿಸಿತ್ತು.

ಪೋಕ್ಸೊ ಪ್ರಕರಣದಡಿ ಕಳೆದ ವರ್ಷ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಮುರುಘಾ ಶ್ರೀ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಪಡೆದು ಬಿಡುಗಡೆಯಾಗಿದ್ದರು. ಬಳಿಕ ದಾವಣಗೆರೆಯಲ್ಲಿದ್ದರು.

ಸದರಿ ಜಾಮೀನು ಪ್ರಶ್ನಿಸಿ ಸಂತ್ರಸ್ತ ಬಾಲಕಿಯ ಪರ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಏಪ್ರಿಲ್ 22 ರಂದು ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ದ್ವಿಸದಸ್ಯ ಪೀಠ, ಜಾಮೀನು ರದ್ದುಗೊಳಿಸಿ ಜೈಲಿಗೆ ಹಿಂದಿರುಗುವಂತೆ ಆದೇಶಿಸಿತ್ತು.

ನವೆಂಬರ್ 8, 2023 ರಂದು ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಏ.29 ಸೋಮವಾರ ಮಧ್ಯಾಹ್ನ ಚಿತ್ರದುರ್ಗದ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಎದುರು ಮುರುಘಾ ಶ್ರೀ ಹಾಜರಾಗಿದ್ದಾರೆ.

ಹೈಕೋರ್ಟ್ ಜಾಮೀನು ಪ್ರಶ್ನಿಸಿ ಸಂತ್ರಸ್ತೆಯ ತಂದೆ ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಪೀಠ ಪ್ರಕರಣದ ವಿಚಾರಣೆಯನ್ನು ವರ್ಷದೊಳಗೆ ಮುಗಿಸಲು ಗಡುವು ನೀಡಿದೆ.

ಇದನ್ನೂ ಓದಿ : ಜೆಡಿಎಸ್‌ನಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆಗೆ ತೀರ್ಮಾನ : ಹೆಚ್‌ಡಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಜನರಿಗೆ ಕೊಡುತ್ತಿದ್ದೇನೆ; ಅವನು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ: ಸೋನಿಯಾ ಗಾಂಧಿ

0
'ನನ್ನ ಮಗನನ್ನು ರಾಯ್ ಬರೇಲಿಯ ಜನರಿಗೆ ನೀಡುತ್ತಿದ್ದೇನೆ; ರಾಹುಲ್ ಗಾಂಧಿ ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ' ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ. 20 ವರ್ಷಗಳ ಕಾಲ ಸಂಸದರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ...