Homeಕರ್ನಾಟಕಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ: ಮೌನಮುರಿದ ಸಿದ್ದರಾಮಯ್ಯ

ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ: ಮೌನಮುರಿದ ಸಿದ್ದರಾಮಯ್ಯ

- Advertisement -
- Advertisement -

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಹಾಗೂ ಅಟ್ರಾಸಿಟಿ ಪ್ರಕರಣ ದಾಖಲಾದರೂ ಪ್ರತಿಪಕ್ಷಗಳು ಹಾಗೂ ಅವುಗಳ ನಾಯಕರು ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂಬ ಆರೋಪಗಳು ಬಂದಿದ್ದವು. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

“ಚಿತ್ರದುರ್ಗದ ಮುರುಘಾ ಮಠದ ಸ್ವಾಮಿಗಳ ವಿರುದ್ಧದ ಆರೋಪ ಗಂಭೀರ ಸ್ವರೂಪದ್ದಾಗಿದೆ. ಪೊಲೀಸರು ಯಾವುದೇ ಒತ್ತಡಕ್ಕೊಳಗಾಗದೆ ಸಂತ್ರಸ್ತ ವಿದ್ಯಾರ್ಥಿನಿಯರ ದೂರಿನ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯಸಂಗತಿಯನ್ನು ಬಹಿರಂಗಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನು ಮೊದಲು ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಾ.ಎಚ್‌.ಸಿ.ಮಹಾದೇವಪ್ಪ ಅವರು ಪ್ರಕರಣವನ್ನು ಖಂಡಿಸಿದ್ದರು.

“ಮುರುಘಾ ಮಠದ ಸುತ್ತ ನಡೆಯುತ್ತಿರುವ ಬೆಳವಣಿಗೆಗಳು ನನ್ನಲ್ಲಿ ಏಕ ಕಾಲಕ್ಕೆ ನೋವು ಮತ್ತು ದಿಗ್ಭ್ರಮೆಯನ್ನು ಉಂಟು ಮಾಡಿದೆ. ಈ ಪ್ರಕರಣದಲ್ಲಿ ಮಠದ ಶ್ರೀಗಳು ತಮ್ಮ ಮೇಲಿನ ಪಿತೂರಿಯ ಬಗ್ಗೆ ಪ್ರಸ್ತಾಪಿಸಿದ್ದು ಈ ನೆಲದ ಕಾನೂನನ್ನು ಗೌರವಿಸುತ್ತೇನೆ ಎಂದಿದ್ದಾರೆ. ಈ ಹಿನ್ನಲೆಯಲ್ಲಿ ಸಮಾಜದಲ್ಲಿ ಹೆಚ್ಚಿನ ಗೌರವ ಹೊಂದಿರುವ ಮಠ ಮಾನ್ಯಗಳ ಮೇಲಿನ ನಂಬಿಕೆ ಮತ್ತು ಅವುಗಳ ಮೇಲಿನ ಜನರ ವಿಶ್ವಾಸದ ಉಳಿವು ಹಾಗೂ ಆ ಹೆಣ್ಣು ಮಕ್ಕಳ ದೌರ್ಜನ್ಯದ ವಿಷಯದಲ್ಲಿ ಕಾನೂನು ನಿಷ್ಪಕ್ಷಪಾತ ತನಿಖೆ ನಡೆಸಿ ನ್ಯಾಯ ಪ್ರಜ್ಞೆಯನ್ನು ಎತ್ತಿ ಹಿಡಿಯಲಿ ಎಂದು ಈ ವೇಳೆ ಮನದುಂಬಿ ವಿನಂತಿಸುತ್ತೇನೆ” ಎಂದು ಮಹದೇವಪ್ಪ ಟ್ವೀಟ್ ಮಾಡಿದ್ದರು.

ಪ್ರಕರಣದ ಪ್ರಮುಖ ಆರೋಪಿ ಮಠದ ಮುಖ್ಯಸ್ಥ ಶಿವಮೂರ್ತಿ ಮುರುಘಾ ಅವರನ್ನು ಗುರುವಾರ ರಾತ್ರಿ ಬಂಧಿಸಲಾಗಿತ್ತು. ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಪೋಕ್ಸೊ ಪ್ರಕರಣದಡಿಯಲ್ಲಿ ಅವರನ್ನು ಬಂಧಿಸಲಾಗಿತ್ತು. ಎಲ್ಲಾ ವೈದ್ಯಕೀಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದರು.

ತದನಂತರ ಎರಡನೇ ಆರೋಪಿ, ಹಾಸ್ಟೆಲ್‌ ವಾರ್ಡನ್‌‌ ರಶ್ಮಿ ಅವರನ್ನು ಚಿತ್ರದುರ್ಗದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಅವರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದು, ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇಟ್ಟಿದ್ದರು. ಇದೀಗ ಅಲ್ಲಿಂದಲೇ ಅವರನ್ನು ಬಂಧಿಸಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...