Homeಕರ್ನಾಟಕಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ : ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ : ಆದೇಶ ಕಾಯ್ದಿರಿಸಿದ ಹೈಕೋರ್ಟ್‌

- Advertisement -
- Advertisement -

ಪೋಕ್ಸೊ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ಸಂಜ್ಞೇ ಪರಿಗಣಿಸಿರುವುದನ್ನು (cognisance)ರದ್ದುಪಡಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಮತ್ತು ಇತರರು ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್‌ ಗುರುವಾರ (ಅ.23) ಆದೇಶ ಕಾಯ್ದಿರಿಸಿದೆ.

ಯಡಿಯೂರಪ್ಪ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ ನಾಗೇಶ್, ವಿಚಾರಣಾ ನ್ಯಾಯಾಲಯವು ಸಂತ್ರಸ್ತೆಯ ಹೇಳಿಕೆಯನ್ನು ಮಾತ್ರ ಆಧರಿಸಿ ಸಂಜ್ಞೇ ಪರಿಗಣಿಸಿದೆ. ಈ ತೀರ್ಮಾನಕ್ಕೆ ಸರಿಯಾದ ಕಾರಣವನ್ನು ದಾಖಲಿಸಿಲ್ಲ ಮತ್ತು ನ್ಯಾಯಾಂಗ ವಿವೇಚನೆಯನ್ನು ಬಳಸಿಲ್ಲ ಎಂದಿದ್ದಾರೆ.

ಪ್ರಾಸಿಕ್ಯೂಷನ್‌ ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್‌ ಜಗದೀಶ್‌ ಅವರು, “ಸಂತ್ರಸ್ತೆಯ ತಾಯಿ ಮತ್ತು ಯಡಿಯೂರಪ್ಪ ನಡುವಿನ ಆಡಿಯೋ ರೆಕಾರ್ಡಿಂಗ್‌ ಅನ್ನು ನಾಶಪಡಿಸಲಾಗಿದೆ. ಅದು ಇಲ್ಲ ಎಂದಾದರೆ ಯಡಿಯೂರಪ್ಪ ಅವರು ಎರಡು ಲಕ್ಷ ರೂಪಾಯಿಯನ್ನು ಸಂತ್ರಸ್ತೆಗೆ ಏಕೆ ನೀಡಿದ್ದರು? ಸಂತ್ರಸ್ತೆಯ ತಾಯಿಯ ಮೊಬೈಲ್‌ ಕಸಿದು ಸಹ ಆರೋಪಿ ಅರುಣ್‌ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಲಾಗಿದ್ದ ಆಡಿಯೋ ರೆಕಾರ್ಡಿಂಗ್‌ ಡಿಲೀಟ್‌ ಮಾಡಿಸಿದ್ದಾರೆ. ಆದರೆ, ಸಂತ್ರಸ್ತೆ ಮೊಬೈಲ್‌ನಲ್ಲಿ ಅಸಲಿ ಆಡಿಯೋ ಇದೆ” ಎಂದು ವಾದಿಸಿದ್ದಾರೆ.

ಆಡಿಯೊದಲ್ಲಿರುವ ಧ್ವನಿ ಯಡಿಯೂರಪ್ಪ ಅವರದ್ದೇ ಎಂದು ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ವರದಿ ದೃಢಪಡಿಸಿದೆ ಎಂದು ಪ್ರಾಸಿಕ್ಯೂಷನ್ ಹೇಳಿದೆ.

ಎರಡೂ ಕಡೆಯ ವಿವರವಾದ ವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಎಂ.ಐ ಅರುಣ್ ಅವರ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿರುವುದಾಗಿ ತಿಳಿಸಿದೆ. ವಾಸ್ತವಿಕ ಅಂಶಗಳಿಗೆ ಸಂಬಂಧಿಸಿದ ವಿವರಣೆಯನ್ನು (ಶನಿವಾರ) ನೀಡಲಾಗುವುದು ಎಂದು ಮೌಖಿಕವಾಗಿ ಹೇಳಿದೆ.

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಸಂಬಂಧ ಸಂತ್ರಸ್ತೆಯ ತಾಯಿ 2024ರ ಮಾರ್ಚ್‌ 14ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದರು. ಆ ದೂರು ಆಧರಿಸಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು. ನಂತರ ಪ್ರಕರಣ ಸಿಐಡಿಗೆ ತನಿಖೆ ವರ್ಗಾವಣೆಯಾಗಿತ್ತು. ಸಿಐಡಿ ಪೊಲೀಸರು ಯಡಿಯೂರಪ್ಪ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು.

ಪೋಕ್ಸೊ ಪ್ರಕರಣದಲ್ಲಿ ಮೊದಲ ಬಾರಿಗೆ ಸಂಜ್ಞೇ ಪರಿಗಣಿಸಿದ್ದನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಭಾಗಶಃ ಪುರಸ್ಕರಿಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಹೊಸದಾಗಿ ಸಂಜ್ಞೇ ಪರಿಗಣಿಸುವಂತೆ ವಿಚಾರಣಾಧೀನ ನ್ಯಾಯಾಲಯಕ್ಕೆ ನಿರ್ದೇಶಿಸಿತ್ತು. ಈಗ ಎರಡನೇ ಬಾರಿಗೆ ಯಡಿಯೂರಪ್ಪ ಮತ್ತಿತರರು ಮತ್ತೇ ಸಂಜ್ಞೇ ಪರಿಗಣಿಸಿರುವ ವಿಚಾರಣಾಧೀನ ನ್ಯಾಯಾಲಯದ ಆದೇಶ ಪ್ರಶ್ನಿಸಿದ್ದಾರೆ. ಎರಡನೇ ಸುತ್ತಿನ ಆದೇಶವನ್ನು ನ್ಯಾಯಾಲಯವು ಈಗ ಕಾಯ್ದಿರಿಸಿದೆ.

ಮೈಸೂರು| ಬನ್ನೂರು ಫಾರಂ ಹೌಸ್ ನಲ್ಲಿ ಲಿಂಗ ಭ್ರೂಣ ಪತ್ತೆ ಕಾರ್ಯ ಪತ್ತೆಹಚ್ಚಿದ ಆರೋಗ್ಯ ಇಲಾಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಬ್ರಾಹ್ಮಣರಂತೆ ಸಂಸ್ಕೃತ ಅಧ್ಯಯನ ಮಾಡಲು ಸಾಧ್ಯವಿಲ್ಲ..’ ಎಂದು ದಲಿತ ವಿದ್ಯಾರ್ಥಿಗೆ ಪಿಎಚ್‌ಡಿ ತಡೆಹಿಡಿದ ಡೀನ್

ಕೇರಳ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ (ಪಿಎಚ್‌ಡಿ) ವಿಪಿನ್ ವಿಜಯನ್ ಅವರು ಸಂಸ್ಕೃತ ವಿಭಾಗದ ಡೀನ್ ಡಾ. ಸಿ. ಎನ್. ವಿಜಯಕುಮಾರಿ ಅವರ ವಿರುದ್ಧ ಗಂಭೀರ ಆರೋಪ ಹೊರಿಸಿದ್ದಾರೆ. "ಡೀನ್ ಆರ್‌ಎಸ್‌ಎಸ್-ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದಾರೆ....

ಎಎಂಯು ಕ್ಯಾಂಪಸ್‌ನಲ್ಲಿ ಗುಂಡಿನದಾಳಿ; ಅಪಹರಣ ಪ್ರಯತ್ನದ ಆರೋಪ

ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (ಎಎಂಯು) ವಿದ್ಯಾರ್ಥಿ ಕಾರ್ಯಕರ್ತನೊಬ್ಬನ ಮೇಲೆ ನವೆಂಬರ್ 5, 2025 ರ ಸಂಜೆ ಗ್ರಂಥಾಲಯದ ಪಾರ್ಕಿಂಗ್ ಪ್ರದೇಶದಲ್ಲಿ ನಾಲ್ವರು ಅಪರಿಚಿತ ವ್ಯಕ್ತಿಗಳು ಸೇರಿದಂತೆ ಏಳು ಜನರ ಗುಂಪು ದಾಳಿ ನಡೆಸಿದೆ...

ಹೆದ್ದಾರಿ, ಶಾಲೆ, ಆಸ್ಪತ್ರೆ, ರೈಲು ನಿಲ್ದಾಣಗಳಿಂದ ಬೀದಿ ನಾಯಿಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶ

ನಾಯಿ ಕಡಿತದ ಘಟನೆಗಳಲ್ಲಿ ಆತಂಕಕಾರಿ ಏರಿಕೆಯನ್ನು ಉಲ್ಲೇಖಿಸಿ ಪ್ರಮುಖ ನಿರ್ದೇಶನ ನೀಡಿರುವ ಸುಪ್ರೀಂ ಕೋರ್ಟ್, ಎಲ್ಲ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಸಾರ್ವಜನಿಕ ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ಡಿಪೋಗಳು ಮತ್ತು ರೈಲು ನಿಲ್ದಾಣಗಳಿಗೆ...

ಉತ್ತರ ಪ್ರದೇಶ| ಆರ್‌ಪಿಎಫ್ ಕಸ್ಟಡಿಯಲ್ಲಿ ದಲಿತ ವ್ಯಕ್ತಿ ಸಾವು; ಚಿತ್ರಹಿಂಸೆ ಆರೋಪ ಮಾಡಿದ ಮೃತನ ಕುಟುಂಬ

ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ರೈಲ್ವೆ ರಕ್ಷಣಾ ಪಡೆ ಕಸ್ಟಡಿಯಲ್ಲಿ ದಲಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಅವರ ಮೇಲೆ ಕಬ್ಬಿಣದ ರಾಡ್ ಮತ್ತು ಚಾಕುಗಳಿಂದ ಹಲ್ಲೆ ನಡೆಸಿರುವ ಆಳವಾದ ಗಾಯದ ಗುರುತುಗಳು ಇವೆ ಎಂದು...

ಜೆಎನ್‌ಯು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಎಡಪಂಥೀಯ ಒಕ್ಕೂಟ

ನವದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿಗಳ ಒಕ್ಕೂಟದ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ನಾಲ್ಕೂ ಸ್ಥಾನಗಳಲ್ಲಿ ಎಡ ಪಕ್ಷಗಳ ವಿದ್ಯಾರ್ಥಿ ಸಂಘಟನೆಗಳು ಜಯ ಸಾಧಿಸಿವೆ. ಈ ಮೂಲಕ ಆರ್‌ಎಸ್‌ಎಸ್‌ ಬೆಂಬಲಿತ ಅಖಿಲ...

‘ಚುನಾವಣೆ ಕಳ್ಳತನ’ದ ಮೂಲಕ ನರೇಂದ್ರ ಮೋದಿ ಪ್ರಧಾನಿಯಾಗಿರುವುದನ್ನು ತೋರಿಸುತ್ತೇನೆ’: ರಾಹುಲ್ ಗಾಂಧಿ

ದೆಹಲಿ: ಚುನಾವಣಾ ಅಕ್ರಮಗಳನ್ನು ಬಹಿರಂಗಪಡಿಸುವ ಪ್ರಕ್ರಿಯೆಯನ್ನು ಮುಂದುವರಿಸುವುದಾಗಿ ಮತ್ತು ನರೇಂದ್ರ ಮೋದಿ "ಚುನಾವ್ ಚೋರಿ" (ಚುನಾವಣಾ ಕಳ್ಳತನ) ಮೂಲಕ ಹೇಗೆ ಪ್ರಧಾನಿಯಾದರು ಎಂಬುದನ್ನು ದೇಶದ ಯುವಜನರಿಗೆ ತೋರಿಸುವುದಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಹುಜನರನ್ನು ಬಾಲಿವುಡ್ ನಿರ್ಲಕ್ಷಿಸಿದೆ, ಶೇ.10-15 ರಷ್ಟಿರುವ ಪ್ರಬಲ ಜಾತಿಗಳ ಕಥೆ ಮಾತ್ರ ಹೇಳಿದೆ: ನೀರಜ್ ಘಯ್ವಾನ್

ನೀರಜ್ ಘಯ್ವಾನ್ ಅವರ ಇತ್ತೀಚಿನ ಬಾಲಿವುಡ್ ಚಿತ್ರ 'ಹೋಮ್‌ಬೌಂಡ್' ಆಧುನಿಕ ಭಾರತೀಯ ಸಮಾಜದಲ್ಲಿ ಇರುವ ಜಾತಿ ಅಸಮಾನತೆಗಳ ಮೇಲೆ ಬೆಳಕು ಚೆಲ್ಲುತ್ತದೆ. ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮುಂದಿನ ವರ್ಷ ಆಸ್ಕರ್‌ಗೆ...

ಬಿಹಾರದಲ್ಲೂ ಮತಗಳ್ಳತನ ಮಾಡಲು ಎನ್‌ಡಿಎ ಪ್ರಯತ್ನಿಸುತ್ತಿದೆ: ಪ್ರಿಯಾಂಕಾ ಗಾಂಧಿ

ಹರಿಯಾಣದಲ್ಲಿ ಮತಗಳ್ಳತನ ಮಾಡಿದಂತೆ ಬಿಹಾರದಲ್ಲೂ ಮಾಡಲು ಎನ್‌ಡಿಎ ತಯಾರಿ ನಡೆಸುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.  ಸೀತಮ್‌ ಹಾರಿ ಹಾಗೂ ಚಂಪಾರಣ್ಯ ಜಿಲ್ಲೆಯಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ...

ಕಬ್ಬಿಗೆ ‘ಎಫ್‌ಆರ್‌ಪಿ’ ನಿರ್ಧಾರ ಮಾಡಿರುವುದು ಕೇಂದ್ರ ಸರ್ಕಾರ: ಸಿಎಂ ಸಿದ್ದರಾಮಯ್ಯ

ಕಬ್ಬಿಗೆ ಎಫ್‌ಆರ್‌ಪಿ (ನ್ಯಾಯಯುತ ಮತ್ತು ಲಾಭದಾಯಕ ಬೆಲೆ) ನಿರ್ಧರಿಸಿರುವುದು ಕೇಂದ್ರದ ಬಿಜೆಪಿ ಸರ್ಕಾರ. ಆದ್ದರಿಂದ, ರೈತರು ಯಾವುದೇ ಕಾರಣಕ್ಕೂ ರೈತ ದ್ರೋಹಿಯಾದ ರಾಜ್ಯದ ಬಿಜೆಪಿಯವರ ಮರಳು ಮಾತುಗಳಿಗೆ ಬಲಿಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಬಿಹಾರ ವಿಧಾನಸಭಾ ಚುನಾವಣೆ 2025: ಮಧ್ಯಾಹ್ನ 3 ಗಂಟೆಯವರೆಗೂ ಶೇ. 53 ರಷ್ಟು ಮತದಾನ

ಪಾಟ್ನಾ: ತೀವ್ರ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆ ಪ್ರಗತಿಯಲ್ಲಿದ್ದು, ಕೇಂದ್ರ ಚುನಾವಣಾ ಆಯೋಗ ಹಂಚಿಕೊಂಡ ಮಾಹಿತಿಯ ಪ್ರಕಾರ ಮಧ್ಯಾಹ್ನ 3 ಗಂಟೆಯವರೆಗೂ ಶೇ.53.77 ರಷ್ಟು ಮತದಾನವಾಗಿದೆ. 18 ಜಿಲ್ಲೆಗಳ ಪೈಕಿ...