Homeಕರ್ನಾಟಕಅಗತ್ಯ ಬಿದ್ದರೆ ಬಿ.ಎಸ್.ಯಡಿಯೂರಪ್ಪ ಬಂಧನ: ಡಾ.ಜಿ.ಪರಮೇಶ್ವರ್‌

ಅಗತ್ಯ ಬಿದ್ದರೆ ಬಿ.ಎಸ್.ಯಡಿಯೂರಪ್ಪ ಬಂಧನ: ಡಾ.ಜಿ.ಪರಮೇಶ್ವರ್‌

- Advertisement -
- Advertisement -

ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅಗತ್ಯ ಬಿದ್ದರೆ ಸಿಐಡಿ ಅಧಿಕಾರಿಗಳು ಬಂಧಿಸಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ಸ್ವಾಭಾವಿಕವಾಗಿ ಯಡಿಯೂರಪ್ಪ ಅವರು ಬಂಧಿಸದಂತೆ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ಜೂನ್ 15ರ ಒಳಗೆ ಚಾರ್ಜ್ ಶೀಟ್ ಸಲ್ಲಿಸಬೇಕಿದೆ. ಅಷ್ಟರ ಒಳಗೆ ಯಡಿಯೂರಪ್ಪ ಅವರಿಂದಲೂ ಹೇಳಿಕೆ ಪಡೆಯುತ್ತಾರೆ ಎಂದು ಹೇಳಿದ್ದಾರೆ.

ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಸಿಐಡಿ ಪರ ವಾದ ಮಂಡಿಸಲು ವಕೀಲ ಅಶೋಕ್ ನಾಯಕ್ ಅವರನ್ನು ನೇಮಿಸಿ ಈ ಮೊದಲು ಸರಕಾರ ಆದೇಶಿಸಿತ್ತು.

ಫೆಬ್ರವರಿ 2ರಂದು ಬೆಂಗಳೂರಿನ ಸಂಜಯನಗರದ ತಮ್ಮ ಮನೆಯಲ್ಲಿ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಯಡಿಯೂರಪ್ಪ ಮೇಲಿದೆ. ಈ ಸಂಬಂಧ ಬಾಲಕಿಯ ತಾಯಿ ಮಾರ್ಚ್ 14ರಂದು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನ್ಯಾಯ ಕೊಡಿಸುವಂತೆ ಕೋರಿ ಬಾಲಕಿ ಮತ್ತು ಆಕೆಯ ತಾಯಿ ಯಡಿಯೂರಪ್ಪ ನಿವಾಸಕ್ಕೆ ತೆರಳಿದ್ದರು. ಈ ವೇಳೆ ಯಡಿಯೂರಪ್ಪ ಅವರೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದ ಗಂಭೀರತೆ ಪರಿಗಣಿಸಿದ ಸರಕಾರ ಸಿಐಡಿ ತನಿಖೆಗೆ ವಹಿಸಿತ್ತು.

ಇದಲ್ಲದೆ ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಬಾಲಕಿಯ ಸಹೋದರನ ಮನವಿ ಮೇರೆಗೆ ವಕೀಲ ಎಸ್‌ ಬಾಲನ್ ಅವರು ಜೂನ್ 10ರಂದು ಅರ್ಜಿ ಸಲ್ಲಿಸಿದ್ದಾರೆ.

ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 164ರ ಅಡಿಯಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ಬಾಲಕಿಯ ಹೇಳಿಕೆಯನ್ನು ಈಗಾಗಲೇ ದಾಖಲಿಸಲಾಗಿದೆ ಎಂದು ರಿಟ್ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಬಾಲಕಿಯ ತಾಯಿ ಏಪ್ರಿಲ್ 29ರಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರಿಗೆ ಪತ್ರ ಬರೆದು ಯಡಿಯೂರಪ್ಪ ಅವರನ್ನು ಬಂಧಿಸುವಂತೆ ಮನವಿ ಮಾಡಿದ್ದರು.

ಎರಡು ತಿಂಗಳ ನಂತರವೂ, ಯಡಿಯೂರಪ್ಪ ವಿರುದ್ಧದ ತನಿಖೆಯು ಸಿಆರ್‌ಪಿಸಿಯ ಸೆಕ್ಷನ್ 2 (ಹೆಚ್) ಅಡಿಯಲ್ಲಿ ವ್ಯಾಖ್ಯಾನಿಸಲ್ಪಟ್ಟಂತೆ ಪ್ರಗತಿಯಾಗಿಲ್ಲ. ಸೆಕ್ಷನ್ 41(ಎ) ಅಡಿಯಲ್ಲಿ ಅವರಿಗೆ ನೋಟಿಸ್ ಕೂಡ ನೀಡಿಲ್ಲ. ಆದ್ದರಿಂದ ನ್ಯಾಯಾಲದ ಮೊರೆ ಹೋಗುವುದರ ಹೊರತು ಬೇರೆ ಪರಿಹಾರವಿರಲಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿತ್ತು.

ಇದನ್ನು ಓದಿ: ಅಜಿತ್‌ ಬಣವನ್ನು ಟೀಕಿಸಿದ ಆರೆಸ್ಸೆಸ್‌ ಮುಖವಾಣಿ: ಮತ್ತಷ್ಟು ಹಳಸಿದ ಅಜಿತ್-ಎನ್‌ಡಿಎ ಸಂಬಂಧ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...