Homeಕರ್ನಾಟಕಪೋಕ್ಸೋ ಪ್ರಕರಣ: ಮುರುಘಾ ಶ್ರೀಗೆ ಜಾಮೀನು ಮಂಜೂರು

ಪೋಕ್ಸೋ ಪ್ರಕರಣ: ಮುರುಘಾ ಶ್ರೀಗೆ ಜಾಮೀನು ಮಂಜೂರು

- Advertisement -
- Advertisement -

ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಗೆ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಸ್ವಾಮೀಜಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ, ಅವರು ನ್ಯಾಯಾಂಗ ಬಂಧನದಲ್ಲಿದ್ದರು.

ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠವು, ಸ್ವಾಮೀಜಿಯ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿದ್ದು, ಬುಧವಾರ ಈ ಸಂಬಂಧ ಆದೇಶ ಹೊರಡಿಸಿದೆ. ಆದೇಶದ ಜೊತೆಗೆ ಏಳು ಷರತ್ತುಗಳನ್ನು ವಿಧಿಸಿದೆ.

ಷರತ್ತುಗಳು:- 

  • ಪ್ರಕರಣದ ವಿಚಾರಣೆ ಮುಗಿಯುವರೆಗೆ ಚಿತ್ರದುರ್ಗ ಜಿಲ್ಲೆಯ ಪ್ರವೇಶ ಮಾಡಬಾರದು.
  • 12 ಲಕ್ಷ ವೈಯಕ್ತಿಕ ಬಾಂಡ್ ನೀಡಬೇಕು.
  • ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ನೀಡಬೇಕು.
  • ಸಾಕಿಗಳನ್ನು ಬೆದರಿಸಬಾರದು.
  • ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು.
  • ಜಾಮೀನು ಮಂಜೂರಾಗಿ ಆದೇಶವನ್ನು ದುರ್ಬಳಕೆ ಮಾಡಿಕೊಳ್ಳಬಾರದು.
  • ನ್ಯಾಯಾಲಯ ವಿಧಿಸಿದ ಷರತ್ತು ಉಲ್ಲಂಘಿಸಿದರೆ, ಜಾಮೀನು ತನ್ನಿಂದ ತಾನೇ ರದ್ದಾಗಲಿದೆ ಎಂದು ಹೈಕೋರ್ಟ್‌ ಆದೇಶದಲ್ಲಿ ಹೇಳಿದೆ.

ಪ್ರಕರಣದ ಹಿನ್ನೆಲೆ: ಶಿವಮೂರ್ತಿ ಶರಣರ ವಿರುದ್ಧ ಪೋಕ್ರೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ 2012, ಭಾರತೀಯ ದಂಡ ಸಂಹಿತೆ 1860, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ-1988, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮೇಲಿನ ದೌರ್ಜನ್ಯ ತಡೆ ಕಾಯ್ದೆ 1989 ಮತ್ತು ಬಾಲ ನ್ಯಾಯ (ಮಕ್ಕಳ ಸಂರಕ್ಷಣೆ ಹಾಗೂ ಆರೈಕೆ) ಕಾಯ್ದೆ-2015ರ ವಿವಿಧ ಕಲಂಗಳ ಅಡಿಯಲ್ಲಿ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದ್ದು ಸೆಷನ್ಸ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

‘ಸ್ವಾಮೀಜಿ ನಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ’ ಎಂದು ಆರೋಪಿಸಿ ಇಬ್ಬರು ಬಾಲಕಿಯರು ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ 2022ರ ಆಗಸ್ಟ್ 26ರಂದು ದೂರು ದಾಖಲಿಸಿದ್ದರು. ಆ ನಂತರ ಶರಣರನ್ನು 2022ರ ಸೆಪ್ಟೆಂಬರ್ 1ರಂದು ಬಂಧಿಸಲಾಗಿದೆ. ಅಂದಿನಿಂದಲೂ ಅವರು ಚಿತ್ರದುರ್ಗದ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read