Homeಕರ್ನಾಟಕಪೋಕ್ಸೋ ಪ್ರಕರಣ: ಮುರುಘಾಶ್ರೀಗೆ ಮತ್ತೆ ಬಂಧನ ಭೀತಿ

ಪೋಕ್ಸೋ ಪ್ರಕರಣ: ಮುರುಘಾಶ್ರೀಗೆ ಮತ್ತೆ ಬಂಧನ ಭೀತಿ

- Advertisement -
- Advertisement -

ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ಚಿತ್ರದುರ್ಗದ ಮುರುಘಾಶ್ರೀಗೆ ಇದೀಗ ಎರಡನೇ ಪ್ರಕರಣದಲ್ಲಿ ಬಂಧನದ ಭೀತಿ ಎದುರಾಗಿದೆ.

ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮುರುಘಾ ಶರಣರ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. 1ನೇ ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷಗಳ ಕಾಲ ಜೈಲಿನಲ್ಲಿದ್ದು, ಆಚೆ ಬಂದಿರುವ ಮುರುಘಾಶ್ರೀಗೆ ಇದೀಗ ಮತ್ತೆ ಬಂಧನದ ಭೀತಿ ಶುರುವಾಗಿದೆ.

ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪಿಐ ಮುದ್ದುರಾಜ ಅವರು ಕೋರ್ಟ್​ಗೆ ಆಗಮಿಸಿದ್ದು, ಕೋರ್ಟ್ ಆದೇಶ ಪಡೆದುಕೊಳ್ಳಲಿದ್ದಾರೆ. ಬಳಿಕ ದಾವಣಗೆರೆ ವಿರಕ್ತ ಮಠಕ್ಕೆ ತೆರಳಿ ಮುರುಘಾಶ್ರೀ ಅವರನ್ನು ಬಂಧಿಸುವ ಸಾಧ್ಯತೆಗಳಿವೆ.

ಮತ್ತೊಂದೆಡೆ ಮುರುಘಾ ಶರಣರ ಪರ ವಕೀಲರು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಅರೆಸ್ಟ್​ ವಾರೆಂಟ್​ಅನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ.

ಈ ಹಿಂದೆ ಮರುಘಾಶ್ರೀ ವಿರುದ್ಧ ಮಠದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು  ಎರಡು ಪೋಕ್ಸೋಗಳು ದಾಖಲಾಗಿದ್ದವು. ಬಳಿಕ ಒಂದನೇ ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಒಂದು ವರ್ಷ ಕಾಲ ಜೈಲಿನಲ್ಲಿದ್ದರು. ನಂತರ ಅವರಿಗೆ ಮೊದಲನೇ ಪ್ರಕರಣದಲ್ಲಿ ಜಾಮೀನು ಸಿಕ್ಕಿದ್ದು, ನವೆಂಬರ್ 16ರಂದು ಚಿತ್ರದುರ್ಗ ಕಾರಾಗೃಹದಿಂದ ಬಿಡುಗಡೆಯಾಗಿದ್ದರು.

ಇದೀಗ ಅವರಿಗೆ ಎರಡನೇ ಪೋಕ್ಸೋ ಪ್ರಕರಣ ಕಂಟಕ ಎದುರಾಗಿದ್ದು, ಮತ್ತೆ ಜೈಲು ಸೇರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಮುರುಘಾಶ್ರೀ ವಿರುದ್ಧದ 1ನೇ ಫೋಕ್ಸೋ ಪ್ರಕರಣದಲ್ಲಿ ಹೈಕೋರ್ಟ್ ಆದೇಶದನ್ವಯ ಅವರನ್ನು ಬಿಡುಗಡೆ ಮಾಡಲು ಸೂಚನೆ ನೀಡಿತ್ತು. ಆದರೆ, 2ನೇ ಫೋಕ್ಸೋ ಪ್ರಕರಣದಲ್ಲಿ ಬಾಡಿ ವಾರೆಂಟ್ ಹಿನ್ನೆಲೆ ಬಂಧನ ವಾರೆಂಟ್​ಗೆ ಸರ್ಕಾರಿ ವಕೀಲ ಜಗದೀಶ್ ಮನವಿ ಮಾಡಿದ್ದರು. ಈ ಬಗ್ಗೆ ಕೋರ್ಟ್​ನಲ್ಲಿ ಸರ್ಕಾರಿ ವಕೀಲ ಜಗದೀಶ್ ಪ್ರಶ್ನಿಸಿರುವ ಬೆನ್ನಲ್ಲೇ ಕಾರಾಗೃಹ ಇಲಾಖೆಗೆ ತನಿಖೆ ನಡೆಸಿ ವರದಿ‌ ನೀಡಲು 2ನೇ ಅಪರ ಜಿಲ್ಲಾ‌& ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಬಿ ಕೆ ಕೋಮಲಾರಿಂದ ಆದೇಶಿಸಿದ್ದರು.

ಇದನ್ನೂ ಓದಿ: ಪೋಕ್ಸೋ ಪ್ರಕರಣ: ಮುರುಘಾ ಶ್ರೀಗೆ ಜಾಮೀನು ಮಂಜೂರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗದಿದ್ದರೆ ಮತ್ತೆ ಹಾಗೆ ಮಾಡ್ತಾರೆ: ಅತ್ಯಾಚಾರ ಸಂತ್ರಸ್ತೆಯ ಸಹೋದರಿ ಹೇಳಿಕೆ

0
"ಪ್ರಜ್ವಲ್ ಮತ್ತು ರೇವಣ್ಣ ಯಾವತ್ತೂ ತಲೆ ಎತ್ತಿ ನಡೆಯಬಾರದು, ಅಂತಹ ಶಿಕ್ಷೆಯಾಗಬೇಕು" ಎಂದು ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯೊಬ್ಬರ ಸಹೋದರಿ ಮಾಲಾ (ಹೆಸರು ಬದಲಿಸಲಾಗಿದೆ) ಹೇಳಿರುವುದಾಗಿ thenewsminute.com ವರದಿ ಮಾಡಿದೆ. ಮಾಲಾಗೆ ತನ್ನ ಸಹೋದರಿ...