Homeಕರ್ನಾಟಕಮುರುಘಾ ಶರಣರ ಮೇಲಿನ ಪೋಕ್ಸೋ ಪ್ರಕರಣ ಚಿತ್ರದುರ್ಗಕ್ಕೆ ವರ್ಗಾವಣೆ

ಮುರುಘಾ ಶರಣರ ಮೇಲಿನ ಪೋಕ್ಸೋ ಪ್ರಕರಣ ಚಿತ್ರದುರ್ಗಕ್ಕೆ ವರ್ಗಾವಣೆ

- Advertisement -
- Advertisement -

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪದಡಿಯಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರ ವಿರುದ್ಧ ಮೈಸೂರಿನಲ್ಲಿ ದಾಖಲಾಗಿರುವ ಪ್ರಕರಣವನ್ನು ಚಿತ್ರದುರ್ಗಕ್ಕೆ ವರ್ಗಾವಣೆ ಮಾಡಲಾಗಿದೆ.

ಮಠದ ವಿದ್ಯಾರ್ಥಿನಿಯರು ನೀಡಿದ ದೂರಿನ ಆಧಾರದಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಮೈಸೂರಿನ ನಜರಬಾದ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ, ವಾರ್ಡನ್ ರಶ್ಮಿ ವಿರುದ್ಧ ಅಪ್ರಾಪ್ತೆಯರನ್ನು ಸ್ವಾಮೀಜಿ ಬಳಿ ಕಳುಹಿಸುತ್ತಿದ್ದ ಆರೋಪ ಹಾಗೂ ಬಸವಾದಿತ್ಯ, ಪರಮಶಿವಯ್ಯ, ಗಂಗಾಧರಯ್ಯ ವಿರುದ್ಧ ಲೈಂಗಿಕ ದೌರ್ಜನ್ಯಕ್ಕೆ ಸಹಾಯ ಮಾಡಿದ ಆರೋಪ ಬಂದಿದೆ. ಈ ಐವರ ವಿರುದ್ಧ  ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಕರಣವನ್ನು ಚಿತ್ರದುರ್ಗದ ಕೋಟೆ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಚಿತ್ರದುರ್ಗ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ ಎಂದು ‘ಆಂದೋಲನ’ ವರದಿ ಮಾಡಿದೆ.

ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ವಿದ್ಯಾರ್ಥಿನಿಲಯದ ಹಲವು ವಿದ್ಯಾರ್ಥಿನಿಯರಿಗೆ ಸ್ವಾಮೀಜಿ ಅವರು ಹಲವು ದಿನಗಳಿಂದಲೂ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದಾರೆ. ಅಲ್ಲಿ ನ್ಯಾಯ ದೊರಕುವುದಿಲ್ಲ ಎಂಬ ಆತಂಕದಲ್ಲಿ ತೊಂದರೆಗೊಳಗಾದ ವಿದ್ಯಾರ್ಥಿನಿಯರು ಮೈಸೂರಿನಲ್ಲಿರುವ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿದ್ದರು.

ದೌರ್ಜನ್ಯಕ್ಕೊಳಗಾದ ಹೆಣ್ಣುಮಕ್ಕಳ ಪೋಷಣೆಯಲ್ಲಿ ಪ್ರಮುಖಪಾತ್ರ ವಹಿಸುತ್ತಿರುವ ಒಡನಾಡಿ ಸಂಸ್ಥೆಯು ನೀಡಿದ ದೂರು ಆಧರಿಸಿ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಶುಕ್ರವಾರ ವಿಚಾರಣೆ ನಡೆಸಿತ್ತು.

ತೊಂದರೆಗೊಳಗಾದ ವಿದ್ಯಾರ್ಥಿನಿಯರ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂಬುದನ್ನು ಖಚಿತಪಡಿಸಿಕೊಂಡ ನಂತರ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯಿದೆ ಅಡಿ ಮೊಕದ್ದಮೆ ದಾಖಲಿಸಬೇಕು ಎಂದು ಸಮಿತಿಯು ಆದೇಶ ಹೊರಡಿಸಿತ್ತು.

ಆರಂಭದಲ್ಲಿ ಪ್ರಕಣವನ್ನು ದಾಖಲಿಸಲು ನಜರಾಬಾದ್ ಠಾಣೆ ಪೊಲೀಸರು ಹಿಂದೇಟು ಹಾಕಿದ್ದರು. ಆನಂತರ ಜಿಲ್ಲಾಧಿಕಾರಿಯವರ ಗಮನಕ್ಕೆ ತಂದ ಬಳಿಕ ಪ್ರಕರಣ ದಾಖಲಿಸಲಾಗಿತ್ತು. ಸಮಿತಿ ಆದೇಶದ ಅನ್ವಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅರುಂಧತಿ ಅವರು ನೀಡಿದ ದೂರು ಆಧರಿಸಿ ನಜರ್‌ಬಾದ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.

ಇದನ್ನೂ ಓದಿರಿ: ಮಕ್ಕಳ ಮೇಲೆ ಮುರುಘಾ ಶರಣರಿಂದ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಒಡನಾಡಿ ಸಂಸ್ಥೆ ಹೇಳಿದ್ದೇನು?

“ಚಿತ್ರದುರ್ಗದ ಮುರುಘಾಮಠದ ವಿದ್ಯಾರ್ಥಿನಿಲಯದಲ್ಲಿರುವ ನಮ್ಮನ್ನು ಸ್ವಾಮೀಜಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸ್ವಾಮೀಜಿ ಅವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್ ಅವರೇ ನಮ್ಮನ್ನು ಕಳುಹಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅಲ್ಲಿ ನಮಗೆ ಮತ್ತು ಬರುವಂತೆ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು” ಎಂದು ಎಸ್‌ಎಸ್‌ಎಲ್‌ಸಿ ಓದುತ್ತಿರುವ ವಿದ್ಯಾರ್ಥಿನಿಯರು ದೂರು ನೀಡಿದ್ದರು.

“ಇದೇ ರೀತಿಯ ಅನುಭವ ಹಲವು ವಿದ್ಯಾರ್ಥಿನಿಯರಿಗೆ ಆಗಿದ್ದರೂ ದೂರು ನೀಡಲು ಹೆದರುತ್ತಿದ್ದರು. ನಮಗೆ ಚಿತ್ರದುರ್ಗದಲ್ಲಿ ನ್ಯಾಯ ಸಿಗಲಿಲ್ಲ ಎನ್ನುವ ಕಾರಣಕ್ಕೆ ಮೈಸೂರಿನ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿದೆವು” ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

  1. ದೂರು ದಾಕಲಾಗಿ ಒಂದು ದಿನ ಕಳೆದಿದ್ದರೂ ಯಾರನ್ನೂ ಬಂದಿಸಿಲ್ಲ. ಇದು ತನಿಖೆಯ ದಿಕ್ಕನ್ನು ಸೂಚಿಸುತ್ತದೆ. ನ್ಯಾಯಾಂಗ ತನಿಕೆ ನಡೆದರೆ ಮಾತ್ರ ನ್ಯಾಯ ದೊರಕಬಹುದು.

  2. ಪೋಕ್ಸೋ ಕಾಯ್ದೆಯಡಿ ಶಿಕ್ಷೆ ಆಯಿತ್ತೆ
    ಇಲ್ಲಾ
    ಎಮ್ಮೆ ಮೇಲೆ ಮಳೆ ಬಿದ್ದಾಂಗೆ ಹೋಗುತ್ತಾ ಇದ್ದೆ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...