Homeಮುಖಪುಟಪೋಕ್ಸೋ ಕಾಯ್ದೆ ದುರುಪಯೋಗ ಆಗುತ್ತಿದೆ: ಆರೋಪಿ ಬ್ರಿಜ್‌ ಭೂಷಣ್‌ ಹೇಳಿಕೆ

ಪೋಕ್ಸೋ ಕಾಯ್ದೆ ದುರುಪಯೋಗ ಆಗುತ್ತಿದೆ: ಆರೋಪಿ ಬ್ರಿಜ್‌ ಭೂಷಣ್‌ ಹೇಳಿಕೆ

- Advertisement -
- Advertisement -

ಹಲವಾರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್, “ಲೈಂಗಿಕ ಅಪರಾಧ ತಡೆದು ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೋ) ದುರುಪಯೋಗ ಆಗುತ್ತಿದೆ” ಎಂದು ಗುರುವಾರ ಹೇಳಿದ್ದಾರೆ.

ಭಾರತೀಯ ಜನತಾ ಪಕ್ಷದ ಸಂಸದರೂ ಆಗಿರುವ ಬ್ರಿಜ್‌ ಭೂಷಣ್‌ ಸಿಂಗ್ ವಿರುದ್ಧ ದೆಹಲಿ ಪೊಲೀಸರು ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ. ‌ಇದರಲ್ಲಿ ಒಂದು ಪ್ರಕರಣವು ಅಪ್ರಾಪ್ತ ಬಾಲಕಿಯೊಬ್ಬರು ಮಾಡಿದ ಆರೋಪಗಳಿಗೆ ಸಂಬಂಧಿಸಿದೆ. ಹೀಗಾಗಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ವಯಸ್ಕ ದೂರುದಾರರು ಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣವನ್ನು ದಾಖಲಿಸಲಾಗಿದೆ.

ಬ್ರಿಜ್‌ ಭೂಷಣ್‌ ಸಿಂಗ್ ಬಂಧನಕ್ಕೆ ಒತ್ತಾಯಿಸಿ ದೇಶದ ಅಗ್ರ ಕುಸ್ತಿಪಟುಗಳು ಏಪ್ರಿಲ್ 23 ರಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥರು ಉತ್ತರ ಪ್ರದೇಶದ ಬಹ್ರೈಚ್ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಪೋಕ್ಸೋ ಕಾನೂನನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಅಧಿಕಾರಿಗಳು ಸಹ ಅದರ ದುರುಪಯೋಗದಿಂದ ಹೊರತಾಗಿಲ್ಲ” ಎಂದಿದ್ದಾರೆ. “ಪೋಕ್ಸೊ ಕಾನೂನನ್ನು ಬದಲಾಯಿಸಲು ಸ್ವಾಮೀಜಿಗಳ ಮುಂದಾಳತ್ವದಲ್ಲಿ ಸರ್ಕಾರವನ್ನು ನಾವು ಒತ್ತಾಯಿಸುತ್ತೇವೆ” ಎಂದು ತಿಳಿಸಿದ್ದಾರೆ.

ಜೂನ್ 5ರಂದು ಅಯೋಧ್ಯೆಯಲ್ಲಿ ಸ್ವಾಮೀಜಿಗಳ ರ್‍ಯಾಲಿಯನ್ನು ಬ್ರಿಜ್‌ ಭೂಷಣ್‌ ಆಯೋಜಿಸಿದ್ದಾರೆ. ಸ್ವಾಮೀಜಿಗಳ ರ್‍ಯಾಲಿಯ ಸಿದ್ಧತೆಗಳನ್ನು ಮೇಲ್ವಿಚಾರಣೆ ಮಾಡಲು ಬ್ರಿಜ್‌ ಭೂಷಣ್‌ ಸಿಂಗ್ ಬಹ್ರೈಚ್‌ನಲ್ಲಿದ್ದರು. ಈ ಕಾರ್ಯಕ್ರಮದಲ್ಲಿ 11 ಲಕ್ಷ ಮಂದಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಸಂಸದರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರಲ್ಲಿ ಒಲಿಂಪಿಕ್ ಕಂಚಿನ ಪದಕ ವಿಜೇತರಾದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ಸೇರಿದ್ದಾರೆ.

ಕುಸ್ತಿಪಟುಗಳು ಮೊದಲು ಜನವರಿಯಲ್ಲಿ ಬೀದಿಗಿಳಿದಿದ್ದರು. ಆದರೆ ಸರ್ಕಾರವು ಆರೋಪಗಳನ್ನು ಪರಿಶೀಲಿಸಲು ಉಸ್ತುವಾರಿ ಸಮಿತಿಯನ್ನು ರಚಿಸಿದ ನಂತರ ಪ್ರತಿಭಟನೆಯನ್ನು ಹಿಂಪಡೆದಿದ್ದರು.

ಇದನ್ನೂ ಓದಿರಿ: ನ್ಯಾಯಾಂಗ ನಿಂದನೆ; ದೆಹಲಿ ಹೈಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ

“ಹೋರಾಟದ ಸಮಯದಲ್ಲಿ ನನಗೆ ಮತ್ತು ಇತರ ಪ್ರತಿಭಟನಾಕಾರರಿಗೆ ಸತ್ಯ ದರ್ಶನವಾಯಿತು” ಎಂದು ಪುನಿಯಾ ಗುರುವಾರ ಹಿಂದೂಸ್ತಾನ್ ಟೈಮ್ಸ್‌ಗೆ ತಿಳಿಸಿದ್ದಾರೆ. “ನಮ್ಮ ಎಲ್ಲಾ ಪದಕಗಳೊಂದಿಗೆ ನಾವು ಕೇಳುತ್ತಿದ್ದೇವೆ ಎಂದು ನಾವು ಭಾವಿಸಿದ್ದೇವೆ. ಆದರೆ ವಾಸ್ತವವು ವಿಭಿನ್ನವಾಗಿದೆ” ಎಂದಿದ್ದಾರೆ ಪೂನಿಯಾ.

“ಪ್ರತಿಭಟನೆ ಇಷ್ಟು ದಿನ ಮುಂದುವರಿಯುತ್ತದೆ ಎಂದು ಊಹಿಸಿರಲಿಲ್ಲ. ನಾವು ಅಂತರರಾಷ್ಟ್ರೀಯ ಕ್ರೀಡಾಪಟುಗಳಾಗಿರುವುದರಿಂದ ಸರ್ಕಾರವು ನಮ್ಮ ಮಾತನ್ನು ಕೇಳುತ್ತದೆ ಎಂದು ನಾವು ಭಾವಿಸಿದ್ದೇವೆ” ಎಂದಿದ್ದಾರೆ. “ಇದು ನಮ್ಮ ವೃತ್ತಿಜೀವನವನ್ನು ಅಪಾಯಕ್ಕೆ ತಳ್ಳುವ ಅಂಶವಾಗಿದೆ” ಎಂದು ವಿಷಾದಿಸಿದ್ದಾರೆ.

“ಈ ದೇಶದಲ್ಲಿ ಎರಡು ರೀತಿಯ ಕಾನೂನುಗಳಿವೆ – ಒಂದು ಸಾಮಾನ್ಯ ಜನರಿಗೆ ಇದ್ದರೆ, ಇನ್ನೊಂದು ಬ್ರಿಜ್‌ ಭೂಷಣ್‌ ಸಿಂಗ್‌ನಂತಹ ಪ್ರಬಲ ವ್ಯಕ್ತಿಗಳಿಗಾಗಿ ಇದೆ” ಎಂದು ಟೀಕಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಿಯಾಂಕ ಗಾಂಧಿ

ಗಾಜಾದಲ್ಲಿ ಇಸ್ರೇಲ್‌ನ ‘ಜನಾಂಗೀಯ ಕೃತ್ಯಗಳು’ ನಿಲ್ಲಬೇಕು: ಪ್ರಿಯಾಂಕಾ ಗಾಂಧಿ

0
ಗಾಜಾದಲ್ಲಿ ಇಸ್ರೇಲ್ ನಡೆಸುತ್ತಿರುವ ಮಿಲಿಟರಿ ದಾಳಿಯನ್ನು ಸ್ವೀಕಾರಾರ್ಹವಲ್ಲ ಮತ್ತು ಹತ್ಯಾಕಾಂಡ ಎಂದು ಹೇಳಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಇದನ್ನು ಜಗತ್ತಿನ ಪ್ರತಿಯೊಂದು ಸರ್ಕಾರ ಖಂಡಿಸಬೇಕು ಎಂದು ಶುಕ್ರವಾರ ಕರೆ...