Homeಮುಖಪುಟಪೋಕ್ಸೋ ಅಪರಾಧಿಯಿಂದ ಮತ್ತೊಂದು ಕೃತ್ಯ | ಅಪ್ರಾಪ್ತೆಯ ಅತ್ಯಾಚಾರ ಮಾಡಿ, ಶವವನ್ನು ಬಾವಿಗೆ ಎಸೆದ ದುಷ್ಕರ್ಮಿ

ಪೋಕ್ಸೋ ಅಪರಾಧಿಯಿಂದ ಮತ್ತೊಂದು ಕೃತ್ಯ | ಅಪ್ರಾಪ್ತೆಯ ಅತ್ಯಾಚಾರ ಮಾಡಿ, ಶವವನ್ನು ಬಾವಿಗೆ ಎಸೆದ ದುಷ್ಕರ್ಮಿ

- Advertisement -
- Advertisement -

ತಮಿಳುನಾಡಿನ ಥೇಣಿಯಲ್ಲಿ 2014 ರ ಪೋಕ್ಸೋ ಪ್ರಕರಣದಲ್ಲಿ ಅಕಾಲಿಕವಾಗಿ ಬಿಡುಗಡೆಗೊಂಡ 32 ವರ್ಷದ ವ್ಯಕ್ತಿಯನ್ನು ಶಿವಗಂಗಾ ತಾಲೂಕು ಪೊಲೀಸರು ಶನಿವಾರ ಮಧುರೈನ 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪದಲ್ಲಿ ಬಂಧಿಸಿದ್ದಾರೆ. ಆರೋಪಿಯು ಬಾಲಕಿಯ ಶವವನ್ನು ಶಿವಗಂಗೆಯ ಒಂದು ಬಾವಿಯಲ್ಲಿ ಎಸೆದಿದ್ದಾಗಿ ಆರೋಪಿಸಲಾಗಿದೆ. ಪೋಕ್ಸೋ ಅಪರಾಧಿಯಿಂದ

ಆರೋಪಿಯನ್ನು ಶಿವಗಂಗೆಯ ಕಟ್ಟಾನಿಕುಲಂನ ಜಿ ಸತೀಶ್‌ಕುಮಾರ್ ಎಂದು ಗುರುತಿಸಲಾಗಿದೆ. ಆರೋಪಿಯು ತನ್ನ ಪತ್ನಿ ಹೆರಿಗೆಗಾಗಿ ದಾಖಲಾಗಿದ್ದ ಮಧುರೈನ ಸರ್ಕಾರಿ ರಾಜಾಜಿ ಆಸ್ಪತ್ರೆಯಲ್ಲಿ (ಜಿಆರ್‌ಎಚ್) ಹುಡುಗಿಯೊಂದಿಗೆ ಸ್ನೇಹ ಬೆಳೆಸಿದ್ದ. ಇದರ ನಂತರ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಎಂದು ಪೊಲೀಸರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆರೋಪಿಯ 2014ರ ಪೋಕ್ಸೊ ಪ್ರಕರಣದಲ್ಲಿ ಸಂತ್ರಸ್ತ ಬಾಲಕಿಯ ಹೇಳಿಕೆ ಕಾರಣಕ್ಕೆ ಶಿಕ್ಷೆಗೆ ಗುರಿಯಾಗಿದ್ದನು. ಆದ್ಧರಿಂದ ಈ ಬಾರಿ ಲೈಂಗಿಕ ದೌರ್ಜನ್ಯದ ಬಗ್ಗೆ ಪೊಲೀಸರಿಗೆ ದೂರು ನೀಡುವುದರಿಂದ ತಪ್ಪಿಸಿಕೊಳ್ಳಲು ಆರೋಪಿ ಸತೀಶ್ ಕುಮಾರ್ ಬಾಲಕಿಯನ್ನು ಕೊಲೆ ಮಾಡಿದ್ದಾಗಿ ಪೊಲೀಸರು ಹೇಳಿದ್ದಾರೆ. ಪೋಕ್ಸೋ ಅಪರಾಧಿಯಿಂದ

ಗುರುವಾರ ಬೆಳಗ್ಗೆ ಶಿವಗಂಗಾ ಸಮೀಪದ ಕಲ್ಕುಲಂ ಎಂಬಲ್ಲಿ ಬಾವಿಯೊಳಗೆ ಅಪರಿಚಿತ ಬಾಲಕಿಯ ಶವ ಪತ್ತೆಯಾಗಿದ್ದು, ಆಗ ಘಟನೆ ಬೆಳಕಿಗೆ ಬಂದಿದೆ. 2014ರ ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ ಮುಗಿಯುವ ಮುನ್ನವೇ ಪೋಕ್ಸೋ ಅಪರಾಧಿಯನ್ನು ಬಿಡುಗಡೆ ಮಾಡಲಾಗಿತ್ತು ವರದಿಯಾಗಿದೆ.

ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಸಿಬ್ಬಂದಿ ಬಾಲಕಿಯ ಮೃತದೇಹವನ್ನು ಹೊರತೆಗೆದಿದ್ದರು. ಮೃತ ಬಾಲಕಿಯ ಒಂದು ಕೈ ಮುರಿದಿದ್ದು, ಅದನ್ನು ಶಿವಗಂಗೈ GMCH ಗೆ ಕಳುಹಿಸಿದ್ದಾರೆ. ನಂತರ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದರು.

ಮಧುರೈ ನಗರ ವ್ಯಾಪ್ತಿಯಲ್ಲಿ ದಾಖಲಾಗಿರುವ ನಾಪತ್ತೆ ಪ್ರಕರಣದ ಬಗ್ಗೆ ಮಾಹಿತಿ ಪಡೆದ ಪೊಲೀಸರ ವಿಶೇಷ ತಂಡವು, ಇತ್ತೀಚೆಗೆ ಸರ್ಕಾರಿ ರಾಜಾಜಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಎರಡನೇ ಮಗಳ ಶವ ಇದು ಎಂದು ಪತ್ತೆ ಮಾಡಿದೆ. ಆರೋಪಿಯು ಬುಧವಾರ ಬಾಲಕಿಯನ್ನು ಅಪರಾಧ ಸ್ಥಳಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ್ದಾನೆ.

ಪೊಲೀಸರು ಇದೀಗ ಪ್ರಕರಣವನ್ನು ಲೈಂಗಿಕ ದೌರ್ಜನ್ಯ ಮತ್ತು ಕೊಲೆ ಎಂದು ಬದಲಾಯಿಸಿದ್ದಾರೆ.

2014ರ ಪ್ರಕರಣದಲ್ಲಿ ತೇಣಿಯ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಸತೀಶ್‌ಕುಮಾರ್‌ಗೆ 11 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿತ್ತು. ಈ ಘಟನೆಯಲ್ಲಿ ಹುಡುಗಿಯ ಹೇಳಿಕೆಯು ನಿರ್ಣಾಯಕ ಸಾಕ್ಷ್ಯವಾಗಿ ಕಾರ್ಯನಿರ್ವಹಿಸಿತ್ತು. ಆದರೆ ಎಂಟು ವರ್ಷಗಳ ನಂತರ ಸತೀಶ್‌ಕುಮಾರ್‌ಗೆ ಅವಧಿಪೂರ್ವ ಬಿಡುಗಡೆ ಸಿಕ್ಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂಓದಿ: ‘ದೊಡ್ಡವರನ್ನು ಉಳಿಸಲು’ ಮಾಧಬಿ ಬುಚ್‌ರನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದೆ: ಕಾಂಗ್ರೆಸ್ ಆರೋಪ

‘ದೊಡ್ಡವರನ್ನು ಉಳಿಸಲು’ ಮಾಧಬಿ ಬುಚ್‌ರನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದೆ: ಕಾಂಗ್ರೆಸ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....