Homeಕರ್ನಾಟಕದಲಿತ-ಬಂಡಾಯ ಕವಿ, ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತ ಲಕ್ಕೂರು ಆನಂದ ನಿಧನ

ದಲಿತ-ಬಂಡಾಯ ಕವಿ, ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತ ಲಕ್ಕೂರು ಆನಂದ ನಿಧನ

- Advertisement -
- Advertisement -

ದಲಿತ-ಬಂಡಾಯ ಕವಿ, ಸಂಶೋಧಕ, ವಿಮರ್ಶಕ, ಸಂಘಟನಾಕಾರ, ಅನುವಾದಕಾರ ಲಕ್ಕೂರು ಆನಂದ ಅವರು ಮೇ 20ರಂದು ನಿಧನ ಹೊಂದಿದ್ದಾರೆ.

44ರ ಹರೆಯದ ಲಕ್ಕೂರು ಸಿ. ಆನಂದ ಅವರು ಮೂಲತಃ ಕೋಲಾರ ಜಿಲ್ಲೆಯ ಲಕ್ಕೂರಿನವರು. ದಲಿತ- ಬಂಡಾಯ ಕಾವ್ಯ ಮಾರ್ಗದ ಮೂರನೇ ತಲೆಮಾರಿನವರಾಗಿದ್ದಾರೆ. ಕವಿ, ವಿಮರ್ಶಕ, ಅನುವಾದಕರಾಗಿಯೂ ಗುರುತಿಸಿಕೊಂಡಿರುವ ಆನಂದ ಅವರ ಮಾತೃಭಾಷೆ ತೆಲುಗು. ಇವರು ಕೆಂಗೇರಿ ಶೇಷಾದ್ರಿಪುರಂ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ವಿಸಾಜಿ ಗುಲ್ಬರ್ಗ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿದ್ದರು.
ಲಕ್ಕೂರು ಆನಂದ ಅವರು ಇದುವರೆಗೆ ಐದು ಕವನ ಸಂಕಲನ, ಐದು ಅನುವಾದಿತ ಕೃತಿಗಳು ಹಾಗೂ ಒಂದು ಸಂಶೋಧನಾ ಗ್ರಂಥವನ್ನು ಹೊರತಂದಿದ್ದಾರೆ. ಮಾತಂಗ ಮಾದಿಗರ ಸಂಸ್ಕೃತಿಯ ಬಗ್ಗೆ ಆನಂದ ಅವರು ಆಳವಾದ ಅಧ್ಯಯನ ನಡೆಸಿದ್ದಾರೆ. ಇತ್ತೀಚೆಗೆ ತೆಲುಗು ಭಾಷೆಯಿಂದ ಕನ್ನಡಕ್ಕೆ ಅನುವಾದವಾದ ರಾಣಿ ಶಿವ ಶಂಕರ ಶರ್ಮರ ‘ಕೊನೆಯ ಬ್ರಾಹ್ಮಣ’ ಕೃತಿ ಇದೀಗ ಅಭಿನವ ಪ್ರಕಾಶನದಿಂದ ಕನ್ನಡದಲ್ಲಿ ಪ್ರಕಟವಾಗಿದೆ. ಲಕ್ಕೂರು ಆನಂದ ಅವರೇ ತೆಲುಗು ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡಿದ್ದಾರೆ.

ಲಕ್ಕೂರು ಆನಂದ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ, ಆಂಧ್ರದ ಶ್ರೀ ಶ್ರೀ ಕಾವ್ಯ, ದೆಹಲಿಯ ದಲಿತ ಸಾಹಿತ್ಯ ಪರಿಷತ್ತು ಪ್ರಶಸ್ತಿ, ದು ನಿಂ ಬೆಳಗಲಿ ಪ್ರಶಸ್ತಿ, ವಿಭಾ ಸಾಹಿತ್ಯ ಪ್ರಶಸ್ತಿ, ಕಡೆಂಗೋಡ್ಲು ಶಂಕರಭಟ್ಟ ಪ್ರಶಸ್ತಿ, ಡಾ ತಿಪ್ಪೇರುದ್ರ ಸ್ವಾಮಿ ಪ್ರಶಸ್ತಿ ಲಭಿಸಿದೆ. ತಮಗೆ ಬಂದ ಪ್ರಶಸ್ತಿಗಳನ್ನು ಅವರು, ‘ರಾಜ್ಯದ ಎಲ್ಲಾ ದಮನಿತ ಸಮುದಾಯಗಳಿಗೆ’ ಅರ್ಪಿಸಿದ್ದಾರೆ.

ಊರಿಂದ ಊರಿಗೆ, ಇಪ್ಪತ್ತರ ಕಲ್ಲಿನ ಮೇಲೆ, ಬಟವಾಡೆಯಾಗದ ರಸೀತಿ, ಇತಿ ನಿನ್ನ ವಿಧೇಯನು, ಉರಿವ ಏಕಾಂತ ದೀಪ ಇವರ ಕವನ ಸಂಕಲನಗಳು. ಸ್ಮೃತಿ ಕಿಣಾನ್ತಂ, ಕೊನೆ ಬ್ರಾಹ್ಮಣ, ಆಕಾಶ ದೇವರ, ನಗ್ನ ಮುನಿಯ ಸಮಗ್ರ ಕಥೆಗಳು, ಅರುದ್ರ ಇವರ ಅನುವಾದಿತ ಕೃತಿಗಳು.

ಗುಲ್ಬರ್ಗ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕ ವಿಕ್ರಮ್‌ ವಿಸಾಜಿ ಘಟನೆ ಬಗ್ಗೆ ದುಃಖವನ್ನು ವ್ಯಕ್ತಪಡಿಸಿ ನಾನುಗೌರಿ.ಕಾಂ ಜೊತೆ ಮಾತನಾಡಿದ್ದು, ಲಕ್ಕೂರು ಆನಂದ ಅವರು ಗುಲ್ಬರ್ಗ ವಿವಿಯಲ್ಲಿ ಡಾ. ವಿಜಯ್‌ ಕುಮಾರ್‌ ಅವರ ಅಧೀನದಲ್ಲಿ ಪಿಹೆಚ್‌ಡಿ ಮಾಡುತ್ತಿದ್ದರು. ನಾವು ಘಟನಾ ಸ್ಥಳಕ್ಕೆ ತೆರಳಿದ್ದೆವು, ಮೃತದೇಹವನ್ನು ಇದೀಗ ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗಲಾಗಿದೆ. ಅವರು ಉತ್ತಮ ಕವಿ, ಉತ್ತಮ ಅನುವಾದಕ ಮತ್ತು ಅಮೋಘ ಪ್ರತಿಭೆಯನ್ನು ಹೊಂದಿದ್ದರು. ತೆಲಗು ಕವಿ ಚಲಂ ಅವರ ಪತ್ರಗಳನ್ನು ಉತ್ತಮವಾಗಿ ಅನುವಾದ ಮಾಡಿದ್ದರು, ಬಹಳ ಆತ್ಮೀಯರಾಗಿದ್ದರು, ಅವರ ಅಗಲಿಕೆಯಿಂದ ಅಪಾರ ನೋವು ಉಂಟಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಇತರರು ಇನ್ನೂ ಅನಿಶ್ಚಿತತೆಯ ಜೀವನದಲ್ಲಿ ಬಳಲುತ್ತಿದ್ದಾರೆ’: ಬಿಡುಗಡೆ ಬಳಿಕ ದುಃಖ ವ್ಯಕ್ತಪಡಿಸಿದ ಗೌತಮ್ ನವಲಾಖಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ತಮ್ಮನ್ನೇ ನ್ಯಾಯಾಲಯ ಎಂದು ಭಾವಿಸಿರುವಂತಿದೆ: ಸುಪ್ರೀಂ ಕೋರ್ಟ್ ಕಿಡಿ

0
ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘಿಸಿ ಉತ್ತರ ಅರಾವಳಿ ಚಿರತೆ ವನ್ಯಜೀವಿ ಕಾರಿಡಾರ್‌ ಆಗಿರುವ ದೆಹಲಿ ರಿಜ್‌ ಅರಣ್ಯ ಪ್ರದೇಶದಲ್ಲಿ ಸುಮಾರು 1,100 ಮರಗಳನ್ನು ಕಡಿಯಲು ನಿರ್ದೇಶನ ನೀಡುವಾಗ ದೆಹಲಿ ಅಭಿವೃದ್ಧಿ ಪ್ರಾಧಿಕಾರದ (ಡಿಡಿಎ)...