Homeಅಂತರಾಷ್ಟ್ರೀಯಪೋಲೆಂಡ್: 2ನೇ ಮಹಾಯುದ್ಧದ ಅತಿದೊಡ್ಡ ಬಾಂಬ್ ನಿನ್ನೆ ಸ್ಫೋಟ!

ಪೋಲೆಂಡ್: 2ನೇ ಮಹಾಯುದ್ಧದ ಅತಿದೊಡ್ಡ ಬಾಂಬ್ ನಿನ್ನೆ ಸ್ಫೋಟ!

ಬಾಂಬ್‌ನ ತೂಕ ಸುಮಾರು 5,400 ಕೆಜಿ ಇದ್ದು, ಇದರಲ್ಲಿ 2,400 ಕೆಜಿ ಸ್ಪೋಟಕ ಇತ್ತು.

- Advertisement -
- Advertisement -

ಪೋಲೆಂಡ್‌ನಲ್ಲಿ ಪತ್ತೆಯಾಗಿದ್ದ 2ನೇ ಮಹಾಯುದ್ಧದ ಅತಿದೊಡ್ಡ ಬಾಂಬ್ ನೀರಿನಲ್ಲಿ ಸ್ಫೋಟಗೊಂಡಿದ್ದು, ನೌಕಾಪಡೆಯ ಅಧಿಕಾರಿಗಳು ಬಾಂಬ್‌ ಅನ್ನು ನಿಷ್ಕ್ರಿಯಗೊಳಿಸಲು ಪ್ರಯತ್ನಿಸುವಾಗ ಈ ಘಟನೆ ನಡೆದಿದೆ. ಬಾಂಬ್‌ನ ತೂಕ ಸುಮಾರು 5,400 ಕೆಜಿ ಇದ್ದು ಇದರಲ್ಲಿ 2,400 ಕೆಜಿ ಸ್ಪೋಟಕ ಇತ್ತು.

ಬ್ರಿಟನ್‌ನ ರಾಯಲ್ ಏರ್ ಫೋರ್ಸ್ (ಆರ್‌ಎಎಫ್) ಬಳಸಿದ ಟಾಲ್‌ಬಾಯ್ ಬಾಂಬ್ ಪತ್ತೆಯಾದ, ಪಿಯಾಸ್ಟ್ ಕಾಲುವೆಯ ಸಮೀಪವಿರುವ ಪ್ರದೇಶದಲ್ಲಿ ವಾಸವಿದ್ದ ಸುಮಾರು 750ಕ್ಕೂ ಹೆಚ್ಚು ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.

“ಬಾಂಬ್‌ ಅನ್ನು ತಟಸ್ಥಗೊಳಿಸುವ ಪ್ರಕ್ರಿಯೆಯಲ್ಲಿ ಸ್ಫೋಟ ಉಂಟಾಗಿದೆ. ಈಗ ವಸ್ತುವನ್ನು ನಿಷ್ಕ್ರಿಯಗೊಳಿಸಲಾಗಿದೆ. ಅದು ಯಾವುದೇ ಅಪಾಯವನ್ನು ಉಂಟುಮಾಡುವುದಿಲ್ಲ” ಎಂದು 8ನೇ ಕರಾವಳಿ ರಕ್ಷಣಾ ಫ್ಲೋಟಿಲ್ಲಾದ ವಕ್ತಾರರು ಸುದ್ದಿ ಸಂಸ್ಥೆ ಪಿಎಪಿಗೆ ತಿಳಿಸಿದ್ದಾರೆ.

ಸ್ವಿನೌಜ್ಸಿ (Swinoujscie) ದ್ರವೀಕೃತ ನೈಸರ್ಗಿಕ ಅನಿಲ (ಎಲ್‌ಎನ್‌ಜಿ) ಟರ್ಮಿನಲ್ ಅನ್ನು ಕೂಡ ಹೊಂದಿದೆ. ಆದರೆ ಸ್ವಿನೌಜ್ಸಿ ಮೇಯರ್, ’ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ ಮತ್ತು ಯಾವುದೇ ಮೂಲಸೌಕರ್ಯಗಳಿಗೆ ಹಾನಿಯಾಗಿಲ್ಲ’ ಎಂದು ಪಿಪಿಎ ಸುದ್ದಿ ಸಂಸ್ಥೆಗೆ ಹೇಳಿದ್ದಾರೆ.

ಪಿಯಾಸ್ಟ್ ಕಾಲುವೆ ಬಾಲ್ಟಿಕ್ ಸಮುದ್ರವನ್ನು ಪೋಲೆಂಡ್‌ನ ಜರ್ಮನಿಯ ಗಡಿಯಲ್ಲಿರುವ ಓಡರ್ ನದಿಯೊಂದಿಗೆ ಸಂಪರ್ಕಿಸುತ್ತದೆ. 1945ರಲ್ಲಿ ಜರ್ಮನ್ ಕ್ರೂಸರ್ ಮೇಲೆ ನಡೆದ ದಾಳಿಯಲ್ಲಿ ಆರ್‌ಎಎಫ್‌ (Royal Air Force) ಈ ಬಾಂಬ್ ಎಸೆದಿತ್ತು.


ಇದನ್ನೂ ಓದಿ: ಕೊರೊನಾ ನಿರ್ವಹಣೆಯಲ್ಲಿ ವಿಫಲ: ಕಣ್ಣೀರು ಹಾಕಿ ಕ್ಷಮೆ ಕೇಳಿದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...