Homeಕರ್ನಾಟಕಬೆಂಗಳೂರಿನಲ್ಲಿ SIR ವಿರೋಧಿ ಪ್ರತಿಭಟನೆ ವೇಳೆ ಪೊಲೀಸ್ ಕ್ರಮ: "ಶಾಂತಿಯುತ ಹಕ್ಕು ರಕ್ಷಿಸಿ, ಪೊಲೀಸರ ನಡವಳಿಕೆ...

ಬೆಂಗಳೂರಿನಲ್ಲಿ SIR ವಿರೋಧಿ ಪ್ರತಿಭಟನೆ ವೇಳೆ ಪೊಲೀಸ್ ಕ್ರಮ: “ಶಾಂತಿಯುತ ಹಕ್ಕು ರಕ್ಷಿಸಿ, ಪೊಲೀಸರ ನಡವಳಿಕೆ ಮರುಪರಿಶೀಲಿಸಲಾಗುವುದು” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

- Advertisement -
- Advertisement -

ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಅಕ್ಟೋಬರ್ 12ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಂತಿಯುತ ಮೆರವಣಿಗೆಯ ಮೇಲೆ ನಗರ ಪೊಲೀಸರು ನಡೆದುಕೊಂಡ ರೀತಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಮೆರವಣಿಗೆ ಆರಂಭಕ್ಕೂ ಮುನ್ನವೇ ಪ್ರತಿಭಟನಾಕಾರರನ್ನು ಬಲವಂತವಾಗಿ ವಶಕ್ಕೆ ಪಡೆದದ್ದು ಹಾಗೂ ವರದಿಗಾರಿಕೆಯಲ್ಲಿದ್ದ ಪತ್ರಕರ್ತರ ಮೇಲೆ ನಡೆದ ಹಲ್ಲೆಯ ಕುರಿತು ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ, ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪೊಲೀಸರ ನಡವಳಿಕೆಯನ್ನು ಪುನರ್ ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ.

‘ಮೈ ವೋಟ್, ಮೈ ರೈಟ್’ ಅಭಿಯಾನದ ಭಾಗವಾಗಿ ವಕೀಲರು, ವಿದ್ಯಾರ್ಥಿಗಳು, ಪತ್ರಕರ್ತರು ಮತ್ತು ನಾಗರಿಕ ಸಂಘಟನೆಗಳು ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯತ್ತ ತೆರಳಿ ಮನವಿ ಸಲ್ಲಿಸಲು ಕೆ.ಆರ್. ವೃತ್ತ ಹಾಗೂ ಸ್ವತಂತ್ರ ಉದ್ಯಾನವನದ ಸುತ್ತಮುತ್ತ ಜಮಾಯಿಸಿದ್ದರು. ಆದರೆ ಪ್ರತಿಭಟನಾಕಾರರು ಒಂದೇ ಒಂದು ಭಿತ್ತಿಪತ್ರ ಎತ್ತಿಹಿಡಿಯುವ ಮುನ್ನವೇ ಪೊಲೀಸರು ಭಿತ್ತಿಪತ್ರಗಳನ್ನು ಕಸಿದುಕೊಂಡು, ಜನರನ್ನು ಎಳೆದಾಡಿ ವಶಕ್ಕೆ ಪಡೆದಿದ್ದರು. ಈ ವೇಳೆ ವರದಿಗಾರಿಕೆಯಲ್ಲಿದ್ದ ಛಾಯಾ ಪತ್ರಕರ್ತರು ಸೇರಿದಂತೆ ಹಲವು ಮಾಧ್ಯಮ ಪ್ರತಿನಿಧಿಗಳ ಮೇಲೆಯೂ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು.

ಪ್ರತಿಭಟನಾಕಾರರ ಮೇಲಿನ ಪೊಲೀಸ್ ಬಲಪ್ರಯೋಗಕ್ಕೆ ಸಾರ್ವಜನಿಕ ವಲಯ ಹಾಗೂ ನಾಗರಿಕ ಸಮಾಜದಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ಪಂದಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, “ಪ್ರಜಾಪ್ರಭುತ್ವದಲ್ಲಿ ಶಾಂತಿಯುತವಾಗಿ ಅಸಮ್ಮತಿ ಹಾಗೂ ಪ್ರತಿಭಟನೆ ವ್ಯಕ್ತಪಡಿಸುವುದು ನಾಗರಿಕರ ಸಾಂವಿಧಾನಿಕ ಮೂಲಭೂತ ಹಕ್ಕು. ಅದನ್ನು ಗೌರವಿಸಬೇಕು ಮತ್ತು ರಕ್ಷಿಸಬೇಕು” ಎಂದು ಸ್ಪಷ್ಟಪಡಿಸಿದ್ದಾರೆ.

ಯಾವುದೇ ಶಾಂತಿಯುತ ಪ್ರತಿಭಟನೆಗಳಿಗೆ ತಡೆಯೊಡ್ಡದಂತೆ ಪೊಲೀಸ್ ಇಲಾಖೆಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ನಿನ್ನೆ ಬೆಂಗಳೂರಿನಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ನಿರ್ವಹಿಸಿದ ರೀತಿಯನ್ನು ಪುನರ್ ಪರಿಶೀಲನೆಗೆ ಒಳಪಡಿಸಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ. ಅಲ್ಲದೆ, ಸಾರ್ವಜನಿಕರ ಹಕ್ಕುಗಳನ್ನು ರಕ್ಷಿಸುವುದು ಪೊಲೀಸರ ಕರ್ತವ್ಯವೇ ಹೊರತು ನಾಗರಿಕರ ಧ್ವನಿಯನ್ನು ಅಡಗಿಸುವುದಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಪೊಲೀಸ್ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ, ಗೃಹ ಸಚಿವರಿಂದ ಬಂದಿರುವ ಈ ಮರುಪರಿಶೀಲನೆಯ ಭರವಸೆ ಮತ್ತು ಸೂಚನೆಗಳು ಪ್ರಾಯೋಗಿಕವಾಗಿ ಹೇಗೆ ಜಾರಿಯಾಗಲಿವೆ ಎಂಬುದನ್ನು ನಾಗರಿಕ ಸಮುದಾಯ ಕಾದುನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯ್ ನೇತೃತ್ವದ ಟಿವಿಕೆ ಸೇರಿದ ಎಐಎಡಿಎಂಕೆ ಶಾಸಕರ ರಾಜೀನಾಮೆ ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್

ಚುನಾವಣೆಯ ಬೆನ್ನಲ್ಲೇ ಆಲ್ ಇಂಡಿಯಾ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (AIADMK) ಪಕ್ಷಕ್ಕೆ ರಾಜೀನಾಮೆ ನೀಡಿ, ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷ ಸೇರಿದ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಿದ್ಧ ತಮಿಳುನಾಡು...

ದೆಹಲಿ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ತೀವ್ರ ಹಲ್ಲೆ ನಡೆಸಿದ್ದ ಆರೋಪಿಗೆ 48 ಗಂಟೆಯೊಳಗೆ ಜಾಮೀನು, ಹೂಮಾಲೆ ಹಾಕಿ ಸ್ವಾಗತ!

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಹಿಂದೂ ರಕ್ಷಾ ದಳದ ನಾಲ್ವರು ಕಾರ್ಯಕರ್ತರು ಬಿಡುಗಡೆಯಾದ ಬಳಿಕ, ಅವರಲ್ಲಿ ಒಬ್ಬರಿಗೆ ಹೂಮಾಲೆ ಹಾಕಿ, ಹೂವುಗಳನ್ನು ಸುರಿದು...

SC, ST ಮೀಸಲಾತಿ ಹೆಚ್ಚಳ ರದ್ದು | ಸುಪ್ರೀಂ ಕೋರ್ಟ್‌ಗೆ ಹೋಗುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ : ಡಿಸಿಎಂ ಪರಮೇಶ್ವರ್

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಸಚಿವ ಸಂಪುಟದಲ್ಲಿ ಸಮಗ್ರವಾಗಿ ಚರ್ಚಿಸಿ, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದು ಸೇರಿದಂತೆ ಮುಂದಿನ ಕಾನೂನಾತ್ಮಕ ಕ್ರಮಗಳ...

SC, ST ಮೀಸಲಾತಿ ಹೆಚ್ಚಳ ರದ್ದು | ಹಿಂದಿನ ಬಿಜೆಪಿ ಸರ್ಕಾರದ ಬೇಜವಾಬ್ದಾರಿತನ ಕಾರಣ; ಡಿಸಿಎಂ ಪರಮೇಶ್ವರ್

ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿಯನ್ನು ಶೇಕಡ 50ರ ಮಿತಿಗಿಂತ ಹೆಚ್ಚಿಸುವ ಕಾಯ್ದೆಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ (ಅ.12) ರದ್ದುಗೊಳಿಸಿದೆ. ಈ ಮೀಸಲಾತಿ ಹೆಚ್ಚಳವು 'ಸಾಂವಿಧಾನಿಕವಾಗಿ ಅಸಮ್ಮತ' ಎಂದು...

ದೆಹಲಿ ಪ್ರತಿಭಟನೆ: ಇಂಡಿಯಾ ಬ್ಲಾಕ್ ಸಂಸದರು, ನಾಗರಿಕ ಸಮಾಜ ಮತ್ತು ವಿದ್ಯಾರ್ಥಿ ಸಂಘಟನೆಗಳೊಂದಿಗೆ ರಾಹುಲ್ ಗಾಂಧಿ ಚಹಾ ಕೂಟ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಚುನಾವಣಾ ಅಕ್ರಮಗಳು ಮತ್ತು ‘ಮತ ಚೋರಿ’ ಆರೋಪಗಳ ವಿರುದ್ಧ ದೇಶಾದ್ಯಂತ ವಿರೋಧ ಪಕ್ಷಗಳ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ಪ್ರತಿಭಟನೆಯ ವರದಿ ಮಾಡುತ್ತಿದ್ದ ಮಹಿಳಾ ಪತ್ರಕರ್ತರ ಮೇಲೆ ದೌರ್ಜನ್ಯ : ದೆಹಲಿ ಪೊಲೀಸ್‌ನ ಹಿರಿಯ ಅಧಿಕಾರಿ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ ಸುಪ್ರೀಂ ಕೋರ್ಟ್

ಇತ್ತೀಚೆಗೆ ದೆಹಲಿಯಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ಮಹಿಳಾ ಪತ್ರಕರ್ತೆಯರ ಮೇಲೆ ನಡೆದ ಹಲ್ಲೆಯ ಕುರಿತು ವಿವರಣೆ ನೀಡಲು ದೆಹಲಿ ಪೊಲೀಸ್‌ನ ಹಿರಿಯ ಅಧಿಕಾರಿಯೊಬ್ಬರು ವೈಯಕ್ತಿಕವಾಗಿ ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಅ.13)...

ಪ್ರಧಾನಿ ಮೋದಿ ವಿರುದ್ಧ ಹೇಳಿಕೆ : ರಾಹುಲ್ ಗಾಂಧಿ ಮೇಲಿನ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

ಪ್ರಧಾನಿ ನರೇಂದ್ರ ಮೋದಿ ಅವರನ್ನು "ಚೋರೋ ಕೆ ಸರ್ದಾರ್" (ಕಳ್ಳರ ಸರದಾರ) ಮತ್ತು "ಕಮಾಂಡರ್-ಇನ್-ಚೀಫ್" (ಕಳ್ಳರ ಸೇನಾಧಿಪತಿ) ಎಂದು ನಿಂದಿಸಿದ್ದಾರೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿದಂತೆ, ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ...

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ: ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಬಿಜೆಪಿಯ ಪಾರ್ಲಿಮೆಂಟರಿ ಬೋರ್ಡ್ ಸದಸ್ಯೆ ಹಾಗೂ ಮಾಜಿ ಸಂಸದೆ ಡಾ. ಸುಧಾ ಯಾದವ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ. ಪ್ರಸ್ತುತ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿರುವ...

DELHI PROTEST : ಜಂತರ್ ಮಂತರ್ ಪ್ರವೇಶಿಸಿದ ಸಿಜೆಪಿ ನಾಯಕರು ಪೊಲೀಸ್ ವಶಕ್ಕೆ

ನಿರ್ಬಂಧಗಳ ನಡುವೆ ಜಂತರ್ ಮಂತರ್ ಪ್ರವೇಶಿಸಿದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಸೌರವ್ ದಾಸ್, ಅಶುತೋಷ್ ರಾಂಕಾ, ಅಜಿಂಕ್ಯ ಶಿಂದೆ ಮತ್ತು ಇತರರನ್ನು ದೆಹಲಿ ಪೊಲೀಸರು ಮಂಗಳವಾರ (ಅ.13) ವಶಕ್ಕೆ ಪಡೆದಿದ್ದಾರೆ....

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ: ಚುನಾವಣಾ ಆಯೋಗಕ್ಕೆ ಸವಾಲು

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಪ್ರಶ್ನಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಭಾರತೀಯ ಚುನಾವಣಾ ಆಯೋಗದ (ಇಸಿಐ) ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ರಿಟ್...