Homeಮುಖಪುಟಮುಖೇಶ್ ಅಂಬಾನಿಗೆ ಬೆದರಿಕೆ ಪ್ರಕರಣ: 19 ವರ್ಷದ ಯುವಕನ ಬಂಧನ

ಮುಖೇಶ್ ಅಂಬಾನಿಗೆ ಬೆದರಿಕೆ ಪ್ರಕರಣ: 19 ವರ್ಷದ ಯುವಕನ ಬಂಧನ

- Advertisement -
- Advertisement -

ಮುಖೇಶ್ ಅಂಬಾನಿಗೆ ಇಮೇಲ್ ಮೂಲಕ ಕೊಲೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಪೊಲೀಸರು ಶನಿವಾರ ತೆಲಂಗಾಣದಲ್ಲಿ 19 ವರ್ಷದ ಯುವಕನನ್ನು ಬಂಧಿಸಿದ್ದಾರೆ.

ಕೊಲೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ಮುಂಬೈನ ಗಾಮ್‌ದೇವಿ ಠಾಣೆ ಪೊಲೀಸರು 19 ವರ್ಷದ ಯುವಕ ಗಣೇಶ್ ರಮೇಶ್ ವನಪರ್ಧಿ ಎಂಬಾತನನ್ನು ಇಂದು ಮುಂಜಾನೆ ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಂಧಿತನಿಗೆ ನ್ಯಾಯಾಲಯವು ನ.8ರವೆರೆಗೆ ಪೊಲೀಸ್ ಕಸ್ಟಡಿಯನ್ನು ವಿಧಿಸಿದೆ.

ಅಂಬಾನಿಗೆ 400 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟು ಇ ಮೇಲ್‌ ಮೂಲಕ ಬೆದರಿಕೆ ಹಾಕಲಾಗಿತ್ತು. ಇಮೇಲ್‌ನ್ನು ಕಡೆಗಣಿಸಿದರೆ ಗಂಭೀರವಾದ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಉಲ್ಲೇಖಿಸಲಾಗಿತ್ತು.

ಮುಖೇಶ್ ಅಂಬಾನಿ ಅ. 31 ಮತ್ತು ನ.1ರಂದು ಎರಡು ಬೆದರಿಕೆ ಇಮೇಲ್‌ಗಳನ್ನು ಸ್ವೀಕರಿಸಿದ್ದಾರೆ. ಹಿಂದಿನ ಇಮೇಲ್‌ಗಳನ್ನು ನಿರ್ಲಕ್ಷಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಇಮೇಲ್‌ನಲ್ಲಿ ಉಲ್ಲೇಖಿಸಲಾಗಿತ್ತು.

ಇಮೇಲ್‌ನಲ್ಲಿ 400 ಕೋಟಿ ನೀಡುವಂತೆ ಆಗ್ರಹಿಸಲಾಗಿತ್ತು. ಪೊಲೀಸರು ನನ್ನನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಸಾಧ್ಯವಿಲ್ಲ. ನಿಮ್ಮ ಭದ್ರತೆ ಎಷ್ಟು ಉತ್ತಮವಾಗಿದ್ದರೂ, ನಮ್ಮವರಲ್ಲಿ ಒಬ್ಬರು ನಿಮ್ಮನ್ನು ಕೊಲ್ಲಬಹುದು ಎಂದು ಉಲ್ಲೇಖಿಸಲಾಗಿತ್ತು.

ಕಳೆದ ಶುಕ್ರವಾರ ರಾತ್ರಿ ಕಳುಹಿಸಿದ ಮೊದಲ ಇ ಮೇಲ್‌ನಲ್ಲಿ ಬೆಲ್ಜಿಯಂ ಕಾರ್ಪೊರೇಟ್ ವಿಳಾಸವನ್ನು ಬಳಸಿಕೊಂಡು ಶಾದಾಬ್ ಖಾನ್ ಎಂದು ಹೇಳಿಕೊಂಡ ವ್ಯಕ್ತಿ 20 ಕೋಟಿ ನೀಡದಿದ್ದರೆ ನಿನ್ನನ್ನು ಸಾಯಿಸುತ್ತೇವೆ, ಭಾರತದಲ್ಲಿ ಅತ್ಯುತ್ತಮ ಶೂಟರ್‌ಗಳು ನಮ್ಮಲ್ಲಿದ್ದಾರೆ ಎಂದು ಇಮೇಲ್ ಬೆದರಿಕೆ ಹಾಕಿದ್ದರು.

ಅದೇ ಇ ಮೇಲ್ ಐಡಿಯಿಂದ ಶನಿವಾರ ಸಂಜೆ ಎರಡನೇ ಬೆದರಿಕೆ ಕಳುಹಿಸಲಾಗಿದ್ದು, ನೀವು ನಮ್ಮ ಇಮೇಲ್‌ಗೆ ಪ್ರತಿಕ್ರಿಯಿಸಲಿಲ್ಲ, ಆದ ಕಾರಣ ಈಗ ನೀವು ನಮಗೆ 200 ಕೋಟಿ ರೂ. ನೀಡಬೇಕು. ನೀವು ಹಣವನ್ನು ನೀಡದಿದ್ದರೆ, ನಿಮ್ಮ ಮರಣದಂಡನೆಗೆ ಸಹಿ ಹಾಕಲಾಗುತ್ತದೆ ಎಂದು ಹೇಳಿಕೆಯಲ್ಲಿ ಬರೆಯಲಾಗಿತ್ತು.

ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಮತ್ತು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿರುವ ಮುಖೇಶ್ ಅಂಬಾನಿ ಈಗಾಗಲೇ ಕೇಂದ್ರ ಸರ್ಕಾರದಿಂದ Z ಪ್ಲಸ್ ಭದ್ರತೆಯನ್ನು ನೀಡಲಾಗಿದೆ. ಬೆದರಿಕೆ ಇ ಮೇಲ್‌ ಹಿನ್ನೆಲೆ ಮುಖೇಶ್ ಅಂಬಾನಿಗೆ ಮತ್ತಷ್ಟು ಭದ್ರತೆ ನೀಡಲಾಗಿತ್ತು.

ಇದನ್ನು ಓದಿ: ಇಸ್ರೇಲ್‌ ವೈಮಾನಿಕ ದಾಳಿಗೆ ‘ಪ್ಯಾಲೆಸ್ತೀನ್‌ ಟಿವಿ’ ವರದಿಗಾರ ಅಬು ಹತಾಬ್ ಸೇರಿ ಕುಟುಂಬದ 12 ಮಂದಿ ಬಲಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಸೀದಿ, ದರ್ಗಾಗಳನ್ನು ಗುರಿಯಾಗಿಸಿಕೊಂಡು ಪದೇ ಪದೇ ಪಿಐಎಲ್‌ : ಎನ್‌ಜಿಒಗೆ ಹೈಕೋರ್ಟ್ ತರಾಟೆ

ರಾಷ್ಟ್ರ ರಾಜಧಾನಿಯಲ್ಲಿ ಮಸೀದಿ ಮತ್ತು ದರ್ಗಾಗಳು ಅತಿಕ್ರಮಣ ಮಾಡುತ್ತಿವೆ ಎಂದು ಆರೋಪಿಸಿ ಪದೇ ಪದೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದಕ್ಕಾಗಿ ಸೇವ್ ಇಂಡಿಯಾ ಫೌಂಡೇಶನ್ ಎಂಬ ಸಂಸ್ಥೆಯನ್ನು ದೆಹಲಿ ಹೈಕೋರ್ಟ್ ಬುಧವಾರ...

ಕಾಂಗ್ರೆಸ್‌ಗೆ ಮರಳಲು ಮುಂದಾದ ಬಿಜೆಪಿ ನಾಯಕನ ಮನೆ ಮೇಲೆ ಎಸಿಬಿ ದಾಳಿ

ಕಾಂಗ್ರೆಸ್‌ಗೆ ಮರಳುವ ಇಂಗಿತ ವ್ಯಕ್ತಪಡಿಸಿದ ಎರಡು ದಿನಗಳ ಬಳಿಕ ಬಿಜೆಪಿ ನಾಯಕ ಮತ್ತು ಮಾಜಿ ಸಚಿವ ಮಹೇಂದ್ರಜೀತ್ ಸಿಂಗ್ ಮಾಳವೀಯ ಅವರ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ನಡೆಸಿದೆ...

ಬೀದರ್: ಗಾಳಿಪಟದ ದಾರ ಕುತ್ತಿಗೆ ಸೀಳಿ ಸ್ಥಳದಲ್ಲಿ ಪ್ರಾಣ ಬಿಟ್ಟ 48 ವರ್ಷದ ಬೈಕ್ ಸವಾರ

ಬೀದರ್ ಜಿಲ್ಲೆಯ ತಲಮಡಗಿ ಸೇತುವೆ ಬಳಿಯ ರಸ್ತೆಯಲ್ಲಿ ಮಗಳನ್ನು ಕರೆತರಲು ಬೈಕ್ ನಲ್ಲಿ ತೆರಳುತ್ತಿದ್ದ 48 ವರ್ಷದ ವ್ಯಕ್ತಿ ಕೊರಳಿಗೆ ಗಾಳಿ ಪಟದ ದಾರ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ನಡೆದಿದೆ.  ಮೃತ...

ಐ-ಪ್ಯಾಕ್ ಮೇಲಿನ ದಾಳಿ: ಟಿಎಂಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್

ಐ-ಪಿಎಸಿಗೆ ಸಂಬಂಧಿಸಿದ ಇತ್ತೀಚಿನ ದಾಳಿಗಳ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಪಕ್ಷದ ಫೈಲ್‌ಗಳು ಮತ್ತು ಚುನಾವಣಾ ಸಂಬಂಧಿತ ಡೇಟಾವನ್ನು ವಶಪಡಿಸಿಕೊಂಡಿದೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಲ್ಲಿಸಿದ್ದ ಅರ್ಜಿಯನ್ನು ಕಲ್ಕತ್ತಾ ಹೈಕೋರ್ಟ್...

ತೆಲಂಗಾಣ| ಪಂಚಾಯತ್ ಚುನಾವಣೆಯ ನಂತರ 500 ಬೀದಿ ನಾಯಿಗಳ ಸಾಮೂಹಿಕ ಕೊಲೆ; ‘ನಾಯಿ ಮುಕ್ತ ಗ್ರಾಮ’ದ ಭರವಸೆ ನೀಡಿದ್ದ ಅಭ್ಯರ್ಥಿಗಳು

ತೆಲಂಗಾಣದ ಹನಮಕೊಂಡ ಮತ್ತು ಕಾಮರೆಡ್ಡಿ ಜಿಲ್ಲೆಗಳಿಂದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಜನವರಿಯ ಮೊದಲ ಎರಡು ವಾರಗಳಲ್ಲಿ ಸುಮಾರು 500 ನಾಯಿಗಳನ್ನು ವಿಷ ಹಾಕಿ ಕೊಂದಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ....

ಕಾನ್ಪುರ ದೇಹತ್‌ನಲ್ಲಿ ನೆರೆಯವರ ಹಲ್ಲೆಯಿಂದ ದಲಿತ ರೈತ ಸಾವು; ಆರು ಮಂದಿ ಬಂಧನ

ಉತ್ತರ ಪ್ರದೇಶದ ಕಾನ್ಪುರ ದೇಹತ್ ಜಿಲ್ಲೆಯಲ್ಲಿ 50 ವರ್ಷದ ದಲಿತ ರೈತನೊಬ್ಬ ತನ್ನ ನೆರೆಹೊರೆಯವರು ಮತ್ತು ಅವರ ಸಂಬಂಧಿಕರಿಂದ ಥಳಿತಕ್ಕೊಳಗಾಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮತ್ತು ಆತನ...

ಸರ್ಕಾರದ ಅಧಿಕೃತ ದಾಖಲೆಗಳಲ್ಲಿ ‘ಹರಿಜನ-ಗಿರಿಜನ’ ಪದಗಳನ್ನು ನಿಷೇಧಿಸಿದ ಹರಿಯಾಣ ಸರ್ಕಾರ

ಹರಿಯಾಣ ಸರ್ಕಾರವು ತನ್ನ ಎಲ್ಲಾ ಅಧಿಕೃತ ಸಂವಹನಗಳಲ್ಲಿ 'ಹರಿಜನ' ಮತ್ತು 'ಗಿರಿಜನ' ಪದಗಳ ಬಳಕೆಯನ್ನು ನಿಷೇಧಿಸಿದೆ. ಇಲಾಖೆಗಳು 'ಪರಿಶಿಷ್ಟ ಜಾತಿ (ಎಸ್‌ಸಿ)' ಮತ್ತು 'ಪರಿಶಿಷ್ಟ ಪಂಗಡ (ಎಸ್‌ಟಿ)' ಅಥವಾ ಅವುಗಳ ಸಮಾನ ಪದಗಳನ್ನು...

ಐಎಎಸ್ ಅಧಿಕಾರಿ ಮಾನನಷ್ಟ ಮೊಕದ್ದಮೆ ಪ್ರಕರಣ: ಎನ್‌ಟಿವಿ ಸಂಪಾದಕ, ಇಬ್ಬರು ಪತ್ರಕರ್ತರ ಬಂಧನ

ತೆಲಂಗಾಣ ಸರ್ಕಾರದ ರಸ್ತೆ ಮತ್ತು ಕಟ್ಟಡಗಳ ಸಚಿವ ಕೋಮತಿರೆಡ್ಡಿ ವೆಂಕಟ್ ರೆಡ್ಡಿ ಹಾಗೂ ಮಹಿಳಾ ಐಎಎಸ್ ಅಧಿಕಾರಿ ಅವರ ಕುರಿತು ವಿವಾದಾತ್ಮಕ ಸುದ್ದಿ ವರದಿಗೆ ಸಂಬಂಧಿಸಿದಂತೆ, ಹೈದರಾಬಾದ್ ಕೇಂದ್ರ ಅಪರಾಧ ಠಾಣೆ...

ಇರಾನ್: ಪ್ರತಿಭಟನಾಕಾರರ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವಿನ ಸಂಖ್ಯೆ 2571ಕ್ಕೆ ಏರಿಕೆ 

ಇರಾನ್‌ನಲ್ಲಿ ಪ್ರತಿಭಟನೆಗಳ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕನಿಷ್ಠ 2,571 ಕ್ಕೆ ಏರಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಬುಧವಾರ ತಿಳಿಸಿದ್ದಾರೆ. ಈ ಅಂಕಿ ಅಂಶವು ಅಮೆರಿಕ ಮೂಲದ ಮಾನವ ಹಕ್ಕುಗಳ...

ಕಾಂಗ್ರೆಸ್‌ ಮುಖಂಡನ ಗೂಂಡಾವರ್ತನೆ : ಫ್ಲೆಕ್ಸ್‌ ತೆರವುಗೊಳಿಸಿದ್ದಕ್ಕೆ ಪೌರಾಯುಕ್ತೆಗೆ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದನೆ

ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ನಟನೆಯ 'ಕಲ್ಟ್' ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ ಅವರೊಂದಿಗೆ ಗೂಂಡಾವರ್ತನೆ...