Homeಮುಖಪುಟಮಹಾರಾಷ್ಟ್ರ: ಆದಿವಾಸಿ ಪ್ರತಿಭಟನಾಕಾರರ ಮೇಲೆ ಪೊಲೀಸ್‌ ದೌರ್ಜನ್ಯ

ಮಹಾರಾಷ್ಟ್ರ: ಆದಿವಾಸಿ ಪ್ರತಿಭಟನಾಕಾರರ ಮೇಲೆ ಪೊಲೀಸ್‌ ದೌರ್ಜನ್ಯ

- Advertisement -
- Advertisement -

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಸುರ್ಜಗಢ್ ಪ್ರದೇಶದಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಆದಿವಾಸಿ ಪ್ರತಿಭಟನಾಕಾರರ ಮೇಲೆ ಪೊಲೀಸ್‌ ದೌರ್ಜನ್ಯ ನಡೆಸಿರುವ ಆರೋಪಗಳು ಕೇಳಿ ಬಂದಿದೆ.

ಪ್ರತಿಭಟನಾಕಾರರ ಪ್ರಕಾರ, ಪೊಲೀಸರು ಎಲ್ಲಾ ಪ್ರಮುಖ ನಾಯಕರನ್ನು ಬಂಧಿಸಿದ್ದಾರೆ. ಅವರಿಂದ ಚೀಲ, ವಸ್ತುಗಳನ್ನು ಬಲವಂತವಾಗಿ ಪಡೆದು ಶೋಧಿಸಿದ್ದಾರೆ. 8 ಜನ ಚಳವಳಿಯ ಮುಖಂಡರನ್ನು ಹೆಲಿಕಾಪ್ಟರ್ ಮೂಲಕ ಬಲವಂತವಾಗಿ ಕರೆದೊಯ್ಯಲಾಗಿದೆ ಅವರ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಯಿತು.

ಬಂಧಿತ 8 ಮಂದಿ ಚಳುವಳಿಯ ನಾಯಕರಲ್ಲಿ ಮಂಗೇಶ್ ನರೋಟಿ, ಪ್ರದೀಪ್ ಹೆಡೊ, ಸಾಯಿ ಕಾವ್ಡೊ, ಗಿಲ್ಲು ಕೌಡೊ, ಲಕ್ಷ್ಮಣ್ ಜೆಟ್ಟಿ, ಮಹದು ಕೌಡೊ, ನಿಕೇಶ್ ನರೋಟಿ ಮತ್ತು ಗಣೇಶ್ ಕೊರಿಯಾ ಅವರು ಸೇರಿದ್ದಾರೆ.

ಪೊಲೀಸರು ಗ್ರಾಮದಲ್ಲಿ ಗುಡಿಸಲುಗಳನ್ನು ಧ್ವಂಸಗೊಳಿಸಿ ಸುಟ್ಟು ಹಾಕಿದ್ದು, ಕೆಲವು ಪ್ರತಿಭಟನಾಕಾರರ ಬಳಿಯಿದ್ದ ಸಾಮಾಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಸ್ಥಳದಲ್ಲಿ ಲಾಠಿ ಚಾರ್ಜ್‌ ಮಾಡಲಾಗಿದೆ.  ಈ ವೇಳೆ ಹಲವರು ಗಾಯಗೊಂಡಿದ್ದಾರೆ. ತಲೆಗೆ ಗಾಯವಾಗಿ ಕೆಲವರು ಪ್ರಜ್ಞೆ ಕಳೆದುಕೊಂಡಿದ್ದಾರೆ. 8 ಮುಖಂಡರಲ್ಲದೆ, ಸುಮಾರು 25 ಪ್ರತಿಭಟನಾಕಾರರನ್ನು ಬಂಧಿಸಿ ಟ್ರಕ್‌ಗಳಲ್ಲಿ ಕರೆದೊಯ್ಯಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ದಾಮ್ಕೊಂಡ್ವಾಹಿ ಬಚಾವೋ ಸಂಘರ್ಷ ಸಮಿತಿಯು ಪ್ರತಿಭಟನಾಕಾರರನ್ನು ಗಡ್ಚಿರೋಲಿ ಜಿಲ್ಲಾ ಕೇಂದ್ರಕ್ಕೆ ಕರೆದೊಯ್ಯಲಾಗಿದೆ ಎಂದು ಹೇಳಿದೆ. 8 ನಾಯಕರು ಸೇರಿ ವಶಕ್ಕೆ ಪಡೆದುಕೊಂಡ ಇತರ ಪ್ರತಿಭಟನಾಕಾರರನ್ನು ಎತ್ತಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಸ್ತುತ ಇರಿಸಲಾಗಿದೆ ಮತ್ತು ಭಾರತೀಯರ ಸೆಕ್ಷನ್ 353ರಡಿ ಪ್ರಕರಣ ದಾಖಲಿಸಲಾಗಿದೆ. ಬಂಧಿತರನ್ನು 8 ದಿನಗಳ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಅವರನ್ನು ಚಂದ್ರಾಪುರ ಜೈಲಿಗೆ ಹಾಕಲಾಗುತ್ತದೆ ಆದರೆ ಅವರ ಬಗ್ಗೆ ಹೆಚ್ಚಿನ ಮಾಹಿತಿ ನಮಗೆ ತಿಳಿದಿಲ್ಲ ಎಂದು ಹೇಳಿದೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಬಂಧಿತರ ಯೋಗಕ್ಷೇಮದ ಬಗ್ಗೆ ನಮಗೆ ಭಯವಿದೆ ಮತ್ತು ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆದ ವೀಡಿಯೊದಲ್ಲಿ, ಪೊಲೀಸ್ ಅಧಿಕಾರಿಗಳು ಲಾಠಿಗಳನ್ನು ಬಳಸಿ ಜನರನ್ನು ಬೆದರಿಸುತ್ತಿರುವುದು ಮತ್ತು ಯಾವುದೇ ವೀಡಿಯೊ ಅಥವಾ ಪೋಟೋಗಳನ್ನು ಚಿತ್ರೀಕರಿಸದಂತೆ ತಡೆಯುತ್ತಿರುವುದು ಕಂಡು ಬಂದಿದೆ.

ಈ ಮಧ್ಯೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಕೂಡ ಆರೋಪವನ್ನು ಮಾಡಿದ್ದಾರೆ. ಪ್ರತಿಭಟನಾಕಾರರು ಪೊಲೀಸರ ಕೊಲೆಗೆ ಪ್ರಯತ್ನಿಸಿದರು. ಅವರ ಬಳಿ ಸ್ಫೋಟಕಗಳಿತ್ತು ಮತ್ತು ಮಾವೋವಾದಿಗಳಿಂದ ಹಣ ಪಡೆದಿದ್ದಾರೆ. ಮಾವೋವಾದಿ ಪ್ರಭಾವದಿಂದ ಪ್ರತಿಭಟನೆ ನಡೆಸುತ್ತಿದ್ದವರು ತೊಡಗಟ್ಟಾ ಮೂಲಕ ವಾಂಗೆಟೂರಿಗೆ ತೆರಳುತ್ತಿದ್ದ ಭದ್ರತಾ ಸಿಬ್ಬಂದಿಗಳನ್ನು ತಡೆದಿದ್ದಾರೆ ಎಂದು ಹೇಳಿದ್ದಾರೆ.

ಇದಲ್ಲದೆ ಪ್ರತಿಭಟನೆಯಲ್ಲಿ ಕುಳಿತುಕೊಳ್ಳಲು ತಮಗೆ ಬಲವಂತ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮಾವೋವಾದಿಗಳ ನೇತೃತ್ವದ ಪ್ರತಿಭಟನೆಯಿಂದ ಬೇಸತ್ತ ಕಾರಣ ಗ್ರಾಮಸ್ಥರೇ ಪ್ರತಿಭಟನಾ ಸ್ಥಳದಲ್ಲಿ ಗುಡಿಸಲುಗಳನ್ನು ತೆಗೆದುಹಾಕಿದ್ದೇವೆ ಎಂದು ನಮಗೆ ತಿಳಿಸಿದ್ದಾರೆ. ಆದರೆ ಪೊಲೀಸರು ಯಾವುದೇ ಗುಡಿಸಲುಗಳನ್ನು ಧ್ವಂಸ ಗೊಳಿಸಿಲ್ಲ ಎಂದು ಹೇಳಿದ್ದಾರೆ.

ಗಡ್ಚಿರೋಲಿಯಲ್ಲಿ ದಬ್ಬಾಳಿಕೆ ಕುರಿತ ಪ್ರಜಾಸತ್ತಾತ್ಮಕ ಹಕ್ಕುಗಳ ಸಂಘಟನೆಯ 2018ರ ಸತ್ಯಶೋಧನೆಯ ವರದಿಯು ಎಟಪಲ್ಲಿಯಲ್ಲಿ ಗಣಿಗಾರಿಕೆ ಕಂಪನಿ, ಸ್ಥಳೀಯ ಆಡಳಿತ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಒಟ್ಟಾಗಿ ಕೆಲಸ ಮಾಡುತ್ತದೆ ಎಂದು ಗಮನಿಸಿದೆ ಎಂದು ಸೆಪ್ಟೆಂಬರ್‌ನಲ್ಲಿ Scroll.in.ವರದಿ ಮಾಡಿದೆ ಎಂದು ವೈರ್‌ ಉಲ್ಲೇಖಿಸಿದೆ.

ಗಣಿಗಾರಿಕೆಯಿಂದ ಕೃಷಿ, ಪರಿಸರ ವ್ಯವಸ್ಥೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇದಲ್ಲದೆ ಮತ್ತು ಸುರ್ಜಗರ್ ನಿವಾಸಿಗಳ ಆರೋಗ್ಯದ ಮೇಲೆ ಭಾರಿ ಪ್ರಭಾವವನ್ನು ಬೀರಿದೆ. ಈ ಪ್ರದೇಶವು ರೆಡ್ ಐರನ್ ಆಕ್ಸೈಡ್ ವಿಸರ್ಜನೆ, ರಾಸಾಯನಿಕ ಹೊರಸೂಸುವಿಕೆ ಮತ್ತು ದೊಡ್ಡ ಪ್ರಮಾಣದ ಶಿಲಾಖಂಡರಾಶಿಗಳಿಂದ ಕಲುಷಿತಗೊಂಡಿದೆ. ಈ ಭಾಗದ ಶುದ್ಧ ನೀರು ಕೆಂಪು ಬಣ್ಣಕ್ಕೆ ತಿರುಗಿದ್ದು, ಬಳಕೆಗೆ ಯೋಗ್ಯವಾಗಿಲ್ಲ ಮತ್ತು ಕೃಷಿ ಗದ್ದೆಗಳು ಹೂಳು ತುಂಬಿಕೊಂಡಿದೆ ಎಂದು ವರದಿ ಉಲ್ಲೇಖಿಸಿದೆ.

 

ಇದನ್ನು ಓದಿ; ಮಧ್ಯಪ್ರದೇಶ: ಘರ್ಷಣೆ ವೇಳೆ ಕೈ ಕಾರ್ಯಕರ್ತ ಸಾವು: ಬಿಜೆಪಿ ಅಭ್ಯರ್ಥಿಯ ಬಂಧನಕ್ಕೆ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...