Homeಕರ್ನಾಟಕಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ.

ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ ತಗುಲಿದ ಪರಿಣಾಮ ಹೊಗೆಯಿಂದ ಉಸಿರುಗಟ್ಟಿ ಶರ್ಮಿಳಾ ಅವರು ಸಾವಿಗೀಡಾಗಿದ್ದರು ಎಂದು ನಂಬಲಾಗಿತ್ತು. ಆದರೆ, ಪೊಲೀಸರ ತನಿಖೆಯಿಂದ ಅದು ಆಕಸ್ಮಿಕ ಸಾವಲ್ಲ, ಕೊಲೆ ಎಂದು ಗೊತ್ತಾಗಿದೆ. ಶರ್ಮಿಳಾ ಅವರನ್ನು ಕತ್ತು ಹಿಸುಕಿ ಕೊಂದು, ನಂತರ ಸಾಕ್ಷ್ಯಗಳನ್ನು ನಾಶಮಾಡಲು ಆಕೆಯ ಫ್ಲ್ಯಾಟ್‌ಗೆ ಬೆಂಕಿ ಹಚ್ಚಿದ ಆರೋಪದ ಮೇಲೆ 18 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಕೊಡಗು ಜಿಲ್ಲೆಯ ವಿರಾಜಪೇಟೆ ಮೂಲದ ಪಿಯುಸಿ ವಿದ್ಯಾರ್ಥಿ ಕರ್ನಲ್ ಕುರೈ ಕೆ ಎಂದು ಗುರುತಿಸಲಾಗಿದೆ. ಈತ ಶರ್ಮಿಳಾ ಅವರ ಪಕ್ಕದ ಫ್ಲಾಟ್‌ನಲ್ಲಿ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದ.

ಶರ್ಮಿಳಾ ಅವರ ಸ್ನೇಹಿತರ ಹೇಳಿಕೆಗಳು ಮತ್ತು ವಿಧಿವಿಜ್ಞಾನ ಪರೀಕ್ಷೆಯ ಆಧಾರದ ಮೇಲೆ, ಪೊಲೀಸರು ಕರ್ನಲ್‌ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಪೊಲೀಸರ ಪ್ರಕಾರ, ಜನವರಿ 3ರಂದು ರಾತ್ರಿ 9 ಗಂಟೆಯ ಸುಮಾರಿಗೆ ಆರೋಪಿ ಕರ್ನಲ್ ಶರ್ಮಿಳಾ ಅವರ ಫ್ಲ್ಯಾಟ್‌ಗೆ ಸ್ಲೈಡಿಂಗ್ ಕಿಟಕಿ ಮೂಲಕ ಪ್ರವೇಶಿಸಿದ್ದ. ಶರ್ಮಿಳಾ ಮುಖಾಮುಖಿಯಾದಾಗ ಆಕೆಯೊಂದಿಗೆ ಲೈಂಗಿಕವಾಗಿ ಸಹಕರಿಸುವಂತೆ ಕೇಳಿದ್ದ. ಆಕೆ ವಿರೋಧಿಸಿದಾಗ ಬಾಯಿ ಮತ್ತು ಮೂಗನ್ನು ಒತ್ತಿ ಹಿಡಿದಿದ್ದಾನೆ. ಇದರಿಂದ ಶರ್ಮಿಳಾ ಅವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

ಶರ್ಮಿಳಾ ಅವರ ಮನೆಗೆ ಹೋಗಿರುವುದನ್ನು ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಯೇ ಎಂಬುವುದು ಇನ್ನೂ ದೃಢವಾಗಿಲ್ಲ. ಕೆಲ ಮಾಧ್ಯಮಗಳು ಅತ್ಯಾಚಾರ ನಡೆದಿದೆ ಎಂದು ವರದಿ ಮಾಡಿವೆ.

ಶರ್ಮಿಳಾ ಅವರ ಮೃತದೇಹದ ಮೇಲೆ ರಕ್ತದ ಕಲೆಗಳು ಕಂಡು ಬಂದಿವೆ. ಆರೋಪಿ ಕೊಲೆ ಮಾಡಿದ ಬಳಿಕ ಸಾಕ್ಷ್ಯ ನಾಶ ಮಾಡಲು ಬಟ್ಟೆಗೆ ಬೆಂಕಿ ಹಚ್ಚಿದ್ದಾನೆ. ಬಳಿಕ ಒಳಗಡೆ ಪ್ರವೇಶಿಸಿದ ಅದೇ ಕಿಟಕಿಯ ಮೂಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ವಿಧಿವಿಜ್ಞಾನ ಮತ್ತು ಮರಣೋತ್ತರ ಪರೀಕ್ಷೆಯ ವರದಿಗಳು ಶರ್ಮಿಳಾ ಬೆಂಕಿ ಅವಘಡಕ್ಕೆ ಬಲಿಯಾಗಿದ್ದಾರೆ ಎಂಬ ಆರಂಭಿಕ ನಂಬಿಕೆಗೆ ವಿರುದ್ಧವಾಗಿ ಬಂದಿವೆ. ಆ ಬಳಿಕ ಪ್ರಕರಣ ತಿರುವು ಪಡೆದುಕೊಂಡಿದೆ. ಶರ್ಮಿಳಾ ಅವರ ಕೈಗಳ ಮೇಲಿದ್ದ ಗಾಯಗಳು, ಕೊನೆ ಕ್ಷಣದಲ್ಲಿ ಜೀವ ಉಳಿಸಿಕೊಳ್ಳಲು ಆಕೆ ಹೋರಾಟ ನಡೆಸಿದ್ದನ್ನು ಎತ್ತಿ ತೋರಿಸಿವೆ. ಮರಣೋತ್ತರ ಪರೀಕ್ಷೆಯ ವರದಿ ಬೆಂಕಿ ಆವರಿಸಿಕೊಳ್ಳುವ ಮುನ್ನವೇ ದೇಹದ ಮೇಲೆ ಗಾಯಗಳಾಗಿವೆ ಎಂಬುವುದಾಗಿ ಹೇಳಿವೆ ಎಂದು ತಿಳಿಸಿದ್ದಾರೆ.

ಕೊಲೆ ಮತ್ತು ಸಾಕ್ಷ್ಯ ನಾಶದ ಆರೋಪದ ಮೇಲೆ ಕರ್ನಲ್‌ನನ್ನು ಬಂಧಿಸಲಾಗಿದ್ದು, ಮೂರು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಪ್ರಕರಣದ ಹಿನ್ನೆಲೆ : ಜನವರಿ 3ರಂದು ರಾತ್ರಿ 10.30ರ ಸುಮಾರಿಗೆ ಶರ್ಮಿಳಾ ಅವರ ಫ್ಲ್ಯಾಟ್‌ನಿಂದ ಹೊಗೆ ಬರುತ್ತಿರುವುದನ್ನು ನೋಡಿದ ಅಪಾರ್ಟ್‌ಮೆಂಟ್ ಮಾಲೀಕ, ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದರು. ಸ್ಥಳಕ್ಕೆ ತೆರಳಿದ ಅಗ್ನಿಶಾಮಕ ಸಿಬ್ಬಂದಿ ಫ್ಲ್ಯಾಟ್‌ ಬಾಗಿಲು ಒಡೆದು ಒಳನುಗ್ಗಿ ಬೆಂಕಿ ನಂದಿಸಿದ್ದರು. ಈ ವೇಳೆ ಅವರಿಗೆ ಶರ್ಮಿಳಾ ಅವರು ಅಡುಗೆ ಕೋಣೆ ಬಳಿ ಪ್ರಜ್ಞಾಹೀನರಾಗಿ ಬಿದ್ದಿರುವುದು ಕಂಡು ಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಫ್ಲ್ಯಾಟ್‌ನಲ್ಲಿ ಬೆಂಕಿ ಹೊತ್ತಿಕೊಂಡು ಹೊಗೆ ಆವರಿಸಿದ ಕಾರಣ ಉಸಿರುಗಟ್ಟಿ ಶರ್ಮಿಳಾ ಸಾವಿಗೀಡಾಗಿರಬಹುದು ಎಂದು ಅಂದಾಜಿಸಿದ್ದರು. ಘಟನೆ ಸಂಬಂದ ಶರ್ಮಿಳಾ ಅವರ ಸ್ನೇಹಿತ ಕೆ. ರೋಹಿತ್ ಎಂಬವರು ದೂರು ದಾಖಲಿಸಿದ್ದರು. ಈ ದೂರು ಆಧರಿಸಿ ತನಿಖೆ ಕೈಗೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...