Homeಮುಖಪುಟಪೌರತ್ವ ಕಾಯ್ದೆ ಪ್ರತಿಭಟನೆ: ಇತಿಹಾಸಕಾರ ರಾಮಚಂದ್ರ ಗುಹಾ ಮೇಲೆ ಹಲ್ಲೆಗೆ ಮುಂದಾದ ಪೊಲೀಸರು: ತೀವ್ರ ಖಂಡನೆ,...

ಪೌರತ್ವ ಕಾಯ್ದೆ ಪ್ರತಿಭಟನೆ: ಇತಿಹಾಸಕಾರ ರಾಮಚಂದ್ರ ಗುಹಾ ಮೇಲೆ ಹಲ್ಲೆಗೆ ಮುಂದಾದ ಪೊಲೀಸರು: ತೀವ್ರ ಖಂಡನೆ, ವಿಡಿಯೋ ನೋಡಿ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸಿದ್ದಕ್ಕಾಗಿ ಇತಿಹಾಸಕಾರ ರಾಮಚಂದ್ರ ಗುಹಾ, ಲೇಖಕಿ ಗೀತಾ ಮೆನನ್‌ ಸೇರಿದಂತೆ ಹಲವು ಹೋರಾಟಗಾರರನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಟೌನ್‌ ಹಾಲ್‌ ಮುಂದೆ “ಪೌರತ್ವ ಕಾಯ್ದೆ ಸಂವಿಧಾನದ ವಿರುದ್ಧವಿದೆ” ಎಂಬ ಅಂಬೇಡ್ಕರ್‌ರವರ ಭಿತ್ತಿ ಪತ್ರ ಹಿಡಿದುಕೊಂಡಿದ್ದ ರಾಮಚಂದ್ರ ಗುಹರವರನ್ನು ಪೊಲೀಸರು ಅಮಾನವೀಯವಾಗಿ ಎಳೆದಾಡಿ ಬಂಧಿಸಿದ್ದಾರೆ.

ಬಂಧಿಸುವುದಿದ್ದರೆ ಗೌರವಯುತವಾಗಿ ಬಂಧಿಸಿ ಹೀಗೆಕೆ ಮಾಡುತ್ತೀರಿ ಎಂದು ಅವರು ಪ್ರಶ್ನಿಸಿದ್ದಕ್ಕೆ ಅವರ ಮೇಲೆ ಪೊಲೀಸರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಮುಂದಾಗಿದ್ದಾರೆ. ವಿಡಿಯೋ ನೋಡಿ

ಈ ಕುರಿತು ಹಲವಾರು ಜನ ಸಾಮಾಜಿಕ ಜಾಲತಾಣಗಳ್ಲಲಿ ಪೊಲೀಸರ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಪ್ರತಿಭಟನಾಕಾರರನ್ನು ಮೈಸೂರ ರಸ್ತೆ ಮತ್ತು ಸಂಪಂಗಿರಾಮನಗರದ ಪೊಲೀಸ್‌ ಠಾಣೆಗಳಿಗೆ ಕರೆದೊಯ್ದಿದ್ದ ಅವರ ಮೊಬೈಲ್‌ ಕಸಿದುಕೊಂಡಿರುವ ಪೊಲೀಸರು ದೂರು ದಾಖಲಿಸಲು ಪ್ರತಿಯೊಬ್ಬರ ವಿಳಾಸ ಸಂಗ್ರಹಿಸುತ್ತಿದ್ದಾರೆ.

ಒಟ್ಟಿನಲ್ಲಿ ಶಾಂತಿಯುತವಾಗಿ ಪ್ರತಿಭಟಿಸುವವರ ಮೇಲೆ ಪೊಲೀಸರು ಹಲ್ಲೆ ಮಾಡಲು, ಪ್ರತಿಭಟನೆಯನ್ನು ನಿಗ್ರಹಿಸಲು ಮುಂದಾಗಿದ್ದಾರೆ. ಆದರೆ ನಿಷೇದಾಜ್ಞೆ ನಡುವೆಯೂ ಪ್ರತಿಭಟನೆಗಳು ಹೆಚ್ಚಾಗುತ್ತಲೇ ಇವೆ.

ನಿಷೇಧಾಜ್ಞೆ ಧಿಕ್ಕರಿಸಿ ಕಲಬುರಗಿಯಲ್ಲಿ ಸುಮಾರು ನಲ್ವತ್ತು ಸಾವಿರ ಜನರು ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾರೆ. ಜನಸ್ತೋಮಕ್ಕೆ ಹೆದರಿ ಬಂಧಿಸಿದ ಕೆಲವರನ್ನೂ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

0
ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಪ್ರಯೋಗಿಸುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನು ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...