Homeಮುಖಪುಟಪಂಜಾಬ್‌ನಲ್ಲಿ ರೈತರ ಮೇಲೆ ಪೊಲೀಸ್ ದಬ್ಬಾಳಿಕೆ; ಮಾ.28 ರಂದು ದೇಶಾದ್ಯಂತ ಪ್ರತಿಭಟನೆಗೆ ಎಸ್‌ಕೆಎಂ ಕರೆ

ಪಂಜಾಬ್‌ನಲ್ಲಿ ರೈತರ ಮೇಲೆ ಪೊಲೀಸ್ ದಬ್ಬಾಳಿಕೆ; ಮಾ.28 ರಂದು ದೇಶಾದ್ಯಂತ ಪ್ರತಿಭಟನೆಗೆ ಎಸ್‌ಕೆಎಂ ಕರೆ

- Advertisement -
- Advertisement -

“ಪಂಜಾಬ್‌ನಲ್ಲಿ ರೈತರ ಪ್ರತಿಭಟನೆಯ ಮೇಲಿನ ಪೊಲೀಸ್ ದಬ್ಬಾಳಿಕೆಯ ವಿರುದ್ಧ ಮಾರ್ಚ್ 28 ರಂದು ಭಾರತದಾದ್ಯಂತ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುವಂತೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ರಾಷ್ಟ್ರೀಯ ಸಮನ್ವಯ ಸಮಿತಿಯು ಭಾರತದಾದ್ಯಂತ ರೈತರಿಗೆ ಕರೆ ನೀಡಿದೆ” ಎಂದು ರೈತ ಸಂಘ ಭಾನುವಾರ ಹೇಳಿಕೆಯಲ್ಲಿ ತಿಳಿಸಿದೆ.

ಕಿಸಾನ್ ಮಜ್ದೂರ್ ಮೋರ್ಚಾ, ಎಸ್‌ಕೆಎಂ ಸೇರಿದಂತೆ ಎಲ್ಲ ರೈತ ಸಂಘಟನೆಗಳು ಮತ್ತು ವೇದಿಕೆಗಳು ಸಮಸ್ಯೆ ಆಧಾರಿತ ಏಕತೆಗೆ ಸೇರಬೇಕು. ದಬ್ಬಾಳಿಕೆಯ ವಿರುದ್ಧ ಒಗ್ಗೂಡಲು ಮುಂದೆ ಬರಬೇಕು ಎಂದು ಎಸ್‌ಕೆಎಂ ಒತ್ತಾಯಿಸಿದೆ.

“ಭಗವಂತ್ ಸಿಂಗ್ ಮಾನ್ ನೇತೃತ್ವದ ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ, ಪಂಜಾಬ್ ಪೊಲೀಸರು ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಸರ್ವಾನ್ ಸಿಂಗ್ ಪಂಧೇರ್ ಸೇರಿದಂತೆ 350 ರೈತ ಮುಖಂಡರು, ಕಾರ್ಯಕರ್ತರನ್ನು ಬಂಧಿಸಿ ಜೈಲಿಗೆ ಹಾಕಿದ್ದರು. ಖಾನೌರಿ ಮತ್ತು ಶಂಬು ಗಡಿಗಳಲ್ಲಿ ಪ್ರತಿಭಟನಾ ನಿರತ ರೈತರ ಡೇರೆಗಳು ಮತ್ತು ವೇದಿಕೆಗಳನ್ನು ಪೊಲೀಸರು ಬುಲ್ಡೋಜರ್‌ನಿಂದ ಕೆಡವಿದ್ದು, ಟ್ರ್ಯಾಕ್ಟರ್ ಟ್ರೇಲರ್‌ಗಳು, ಟ್ರಾಲಿಗಳು ಮತ್ತು ಇತರ ಉಪಕರಣಗಳನ್ನು ಬಲವಂತವಾಗಿ ತೆರವುಗೊಳಿಸಿದರು” ಎಂದು ಹೇಳಿಕೆ ತಿಳಿಸಿದೆ.

ಈ ಮಧ್ಯೆ, ಬುಧವಾರ ಹಲವಾರು ರೈತ ನಾಯಕರೊಂದಿಗೆ ಬಂಧನಕ್ಕೊಳಗಾದ ಹಿರಿಯ ರೈತ ನಾಯಕ ಜಗಜಿತ್ ಸಿಂಗ್ ದಲ್ವಾಲ್ ಅವರನ್ನು ಭಾನುವಾರ ಜಲಂಧರ್‌ನಿಂದ ಪಟಿಯಾಲಕ್ಕೆ ಸ್ಥಳಾಂತರಿಸಲಾಯಿತು.

ಕಳೆದ ವರ್ಷ ನವೆಂಬರ್ 26 ರಿಂದ ಅನಿರ್ದಿಷ್ಟಾವಧಿ ಉಪವಾಸ ನಡೆಸುತ್ತಿರುವ ದಲ್ಲೆವಾಲ್ ಅವರನ್ನು ಬುಧವಾರ ಪಂಜಾಬ್ ಪೊಲೀಸರು ಹಲವಾರು ರೈತರನ್ನು ಬಂಧಿಸಿದ ನಂತರ ಜಲಂಧರ್‌ನ ಪಂಜಾಬ್ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಕರೆದೊಯ್ಯಲಾಯಿತು. ಬಳಿಕ, ಅವರನ್ನು ಜಲಂಧರ್‌ನ ಪಿಡಬ್ಲ್ಯೂಡಿ ವಿಶ್ರಾಂತಿ ಗೃಹಕ್ಕೆ ಕರೆದೊಯ್ಯಲಾಯಿತು.

ಭಾನುವಾರ, ರೈತ ನಾಯಕನನ್ನು ಪಟಿಯಾಲದ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತು ಎಂದು ಮೂಲಗಳು ತಿಳಿಸಿವೆ.

ಚಂಡೀಗಢದಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಕೇಂದ್ರ ನಿಯೋಗದೊಂದಿಗೆ ಸಭೆಯ ನಂತರ ಹಿಂತಿರುಗುತ್ತಿದ್ದ ಪಂಧೇರ್, ದಲ್ಲೆವಾಲ್ ಮತ್ತು ಹಲವಾರು ರೈತ ನಾಯಕರನ್ನು ಬುಧವಾರ ಮೊಹಾಲಿಯಲ್ಲಿ ಪಂಜಾಬ್ ಪೊಲೀಸರು ಬಂಧಿಸಿದ್ದರು.

ಸಭೆಯಲ್ಲಿ ರೈತರ ವಿವಿಧ ಬೇಡಿಕೆಗಳ ಬಗ್ಗೆ, ವಿಶೇಷವಾಗಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವ ಕಾನೂನಿನ ಬಗ್ಗೆ ಚರ್ಚಿಸಲಾಯಿತು. ಸಭೆಯ ನಂತರ ನಿರ್ಗಮಿಸಿದ ರೈತರು ಮೊಹಾಲಿಗೆ ಪ್ರವೇಶಿಸಿದಾಗ, ಅವರನ್ನು ತಡೆಯಲಿ ಭಾರೀ ಬ್ಯಾರಿಕೇಡ್ ಹಾಕಲಾಯಿತು; ಅವರಸ್ಥಳದಲ್ಲೇ ಕೆಲವು ನಾಯಕರನ್ನು ಬಂಧಿಸಲಾಯಿತು.

ಶಂಭು ಮತ್ತು ಖಾನೌರಿಯಲ್ಲಿ ನಡೆದ ಪ್ರತಿಭಟನೆಗಳ ನೇತೃತ್ವವನ್ನು ಎಸ್‌ಕೆಎಂ ಮತ್ತು ಕೆಎಂಎಂ ಸಂಘಟನೆಗಳು ವಹಿಸಿವೆ.

ಪಂಜಾಬ್ ಪೊಲೀಸರು ಪ್ರತಿಭಟನಾ ನಿರತ ರೈತರ ಮೇಲೆ ನಡೆಸಿದ ದಬ್ಬಾಳಿಕೆಯ ನಡುವೆ, ಎಸ್‌ಕೆಎಂ ಮತ್ತು ಭಾರತಿ ಕಿಸಾನ್ ಯೂನಿಯನ್ ಶುಕ್ರವಾರ ಪಂಜಾಬ್ ಸರ್ಕಾರ ಕರೆದಿದ್ದ ಸಭೆಯಲ್ಲಿ ಭಾಗವಹಿಸಲು ನಿರಾಕರಿಸಿದವು.

ರೈತರ ವಿರುದ್ಧ ಪೊಲೀಸ್ ಕ್ರಮಕ್ಕಾಗಿ ಸರ್ಕಾರವನ್ನು ಟೀಕಿಸಿದ ರೈತ ಸಂಘಟನೆಗಳು, ಬಂಧನಕ್ಕೊಳಗಾದ ಪ್ರತಿಭಟನಾಕಾರರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಾ ಮಾತುಕತೆಗೆ ಅನುಕೂಲಕರ ವಾತಾವರಣವನ್ನು ಸೃಷ್ಟಿಸಲು ಪ್ರಯತ್ನಿಸಿದವು.

ಭಾನುವಾರ ಎಸ್‌ಕೆಎಂ ಹೇಳಿಕೆಯ ಪ್ರಕಾರ, ಮಾರ್ಚ್ 28 ರಂದು ಪಂಜಾಬ್‌ನಾದ್ಯಂತ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಗಳ ಮುಂದೆ ‘ಪೊಲೀಸ್ ದಬ್ಬಾಳಿಕೆ’ಯ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಲಿದೆ.

ಧರ್ಮಾಧಾರಿತ ಮೀಸಲಾತಿ ಸಂವಿಧಾನವನ್ನು ಉಲ್ಲಂಘಿಸುತ್ತದೆ: ಆರ್‌ಎಸ್‌ಎಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...