ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ಭೂಸ್ವಾಧೀನ ವಿರೋಧಿಸಿ, ಸಂಯುಕ್ತ ಹೋರಾಟ-ಕರ್ನಾಟಕ ನೇತೃತ್ವದಲ್ಲಿ ಬುಧವಾರ ನಡೆದ ‘ದೇವನಹಳ್ಳಿ ಚಲೋ’ ಪ್ರತಿಭಟನೆಯನ್ನು ಪೊಲೀಸರು ಹತ್ತಿಕ್ಕಿದ್ದು, ಪ್ರತಿಭಟನಾನಿರತ ಹೋರಾಟಗಾರರು ಮತ್ತು ರೈತರನ್ನು ಅಮಾನವೀಯವಾಗಿ ಎಳೆದಾಡಿ ಬಂಧಿಸಿದ್ದರು. ಸರ್ಕಾರದ ಈ ನಡೆ ಖಂಡಿಸಿ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾ ಕೇಂದ್ರಗಳಲ್ಲಿ ಇಂದು ಸರ್ಕಾರದ ವಿರುದ್ಧ ಜನಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚಪ್ಪರದಕಲ್ಲಿನ ಬಳಿಯಿರುವ ಜಿಲ್ಲಾಧಿಕಾರಿ ಕಚೇರಿ ಮುಂದೆ ದಲಿತ, ಕಾರ್ಮಿಕ, ಪ್ರಗತಿಪರ ಮತ್ತು ರೈತ ಸಂಘಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಬಲವಂತದ ಭೂಸ್ವಾಧೀನ ವಾಪಸ್ ಪಡೆಯಬೇಕು ಹಾಗೂ ಪ್ರತಿಭಟನಾನಿರತರನ್ನು ಬಂಧಿಸಲು ಹಿಂಸಾತ್ಮಕ ದಾರಿ ಬಳಸಿದ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಮುಖಂಡರು ಒತ್ತಾಯಿಸಿದ್ದರು.
ಪೊಲೀಸರಿಂದ ನಿನ್ನೆ ದೌರ್ಜನ್ಯಕ್ಕೆ ಒಳಗಾಗಿದ್ದ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಕಾರಳ್ಳಿ ಶ್ರೀನಿವಾಸ್, ನಂಜಪ್ಪ, ರಮೇಶ್ ಚೀಮಾಚನಹಳ್ಳಿ, ಮಾರೇಗೌಡ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಂಚಾಲಕರಾದ ಕೊರಳೂರು ಶ್ರೀನಿವಾಸ್ ಸೇರಿದಂತೆ ಹಲವರು ಇದ್ದರು.
ಬಳ್ಳಾರಿ
ದೇವನಹಳ್ಳಿಯಲ್ಲಿ ಶಾಂತಿಯುತ ಧರಣಿ ನಡೆಸುತ್ತಿದ್ದ ಸಂದರ್ಭದಲ್ಲಿ ಪೋಲಿಸ್ ಅಧಿಕಾರಿಗಳು ದಬ್ಬಾಳಿಕೆಯಿಂದ ಹೋರಾಟಗಾರರನ್ನು ಬಂಧಿಸಿರುವುದನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ( ಸಮಿತಿ ಅಂಬೇಡ್ಕರ್ ವಾದ) ಬಳ್ಳಾರಿ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗ
ದೇವನಹಳ್ಳಿಯಲ್ಲಿ ಶಾಂತಿಯುತವಾಗಿ ನಡೆಸುತ್ತಿದ್ದ ಹೋರಾಟದಲ್ಲಿ ರೈತರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿ ಬಂಧಿಸಿರುವ ಕ್ರಮವನ್ನು ವಿರೋಧಿಸಿ ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಬಂಧಿಸಿರುವ ಮುಖಂಡರು ಹಾಗೂ ಹೋರಾಟಗಾರರನ್ನು ಬೇಷರತ್ ಆಗಿ ಬಿಡುಗಡೆ ಮಾಡಬೇಕು. ಡಿಸಿಪಿ ಸಜಿತ್‌ರವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು, ಚನ್ನರಾಯಪಟ್ಟಣ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ದೇವನಹಳ್ಳಿಯ ಚನ್ನರಾಯಪಟ್ಟಣ ಹೋಬಳಿಯಲ್ಲಿ ಬಲವಂತದ ಭೂಸ್ವಾದೀನದ ವಿರುದ್ಧ ಹಮ್ಮಿಕೊಂಡಿದ್ದ ದೇವನಹಳ್ಳಿ ಚಲೋ ಹೋರಾಟದಲ್ಲಿ ರೈತರು ಮತ್ತು ಹೋರಾಟಗಾರರ ಮೇಲೆ ದೌರ್ಜನ್ಯ ನಡೆಸಿ ಬಂಧಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಖಂಡಿಸಿ ಸಿಪಿಐ(ಎಂ)ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿತ್ತು. ಸಿಪಿಐ(ಎಂ) ಬೆಂಗಳೂರು ಉತ್ತರ-ದಕ್ಷಿಣ ಜಿಲ್ಲಾ ಸಮಿತಿಗಳ ನೇತೃತ್ವದಲ್ಲಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಸಿಪಿಐಎಂ ರಾಜ್ಯ ಕಾರ್ಯದರ್ಶಿ ಡಾ.ಕೆ.ಪ್ರಕಾಶ್, ಸಿಪಿಐಎಂ ರಾಜ್ಯ ನಾಯಕರಾದ ಯು.ಬಸವರಾಜ, ಗೋಪಾಲಕೃಷ್ಣ ಅರಳಹಳ್ಳಿ, ಕೆ.ಮಹಾಂತೇಶ್, ಉತ್ತರ ಜಿಲ್ಲಾ ಕಾರ್ಯದರ್ಶಿ ಎನ್.ಪ್ರತಾಪ್ ಸಿಂಹ, ರಾಜ್ಯ ಸಮಿತಿ ಸದಸ್ಯರಾದ ಯಶವಂತ್ ಹಾಗೂ ಇತರರು ಭಾಗವಹಿಸಿ ಮಾತನಾಡಿದರು.

ಹೊಸಕೋಟೆ

ದಾವಣಗೆರೆ

ಮಂಡ್ಯ

ಹಾಗಲಗಂಚಿ-ಶೃಂಗೇರಿ

ಆಳಂದ

ಕಂಪ್ಲಿ

ಕುಡತಿನಿ

ಕುರಗೋಡು

ಚಿಕ್ಕಬಳ್ಳಾಪುರ

ತುಮಕೂರು

ಪಾವಗಡ

ಬಾಗೇಪಲ್ಲಿ

ಹಾಸನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ 1777 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕೆ ಸ್ಥಾಪನೆಗಾಗಿ ಸ್ವಾಧೀನಕ್ಕೆ ತೆಗೆದುಕೊಳ್ಳಲು ಮುಂದಾಗಿರುವ ಸರ್ಕಾರದ ನಿರ್ಧಾರ ವಿರೋಧಿಸಿ ಮೂರೂವರೆ ವರ್ಷಗಳಿಂದ ರೈತರು ಹೋರಾಟ ನಡೆಸಿತ್ತಿದ್ದಾರೆ. ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಮತ್ತು ಕೆಐಎಡಿಬಿ ನಡುವಿನ ಸಂಘರ್ಷ ನಿರ್ಣಾಯ ಹಂತಕ್ಕೆ ತಲುಪಿದ್ದು, ಸಂಯುಕ್ತ ಹೋರಾಟ-ಕರ್ನಾಟಕ ಸಂಘಟನೆ ಬುಧವಾರ (ಜೂ.25) ದೇವನಹಳ್ಳಿ ಚಲೋ ಹೋರಾಟಕ್ಕೆ ಕರೆ ನೀಡಿತ್ತು.
ಚನ್ನರಾಯಪಟ್ಟಣ ರೈತರ ಬಂಧನ: ಸಿಎಂ ಭೇಟಿಗೆ ಆಗಮಿಸಿದ್ದ ನಟ ಪ್ರಕಾಶ್ ರಾಜ್ ಅವರನ್ನು ತಡೆದ ಪೊಲೀಸರು


