Homeಮುಖಪುಟಸಂದರ್ಶನದಲ್ಲಿ ‘ದಲಿತ’ ಪದ ಬಳಕೆ: ಬಿಜೆಪಿ ಶಾಸಕರ ವಿರುದ್ಧ ಎಫ್‌ಐಆರ್  ದಾಖಲು

ಸಂದರ್ಶನದಲ್ಲಿ ‘ದಲಿತ’ ಪದ ಬಳಕೆ: ಬಿಜೆಪಿ ಶಾಸಕರ ವಿರುದ್ಧ ಎಫ್‌ಐಆರ್  ದಾಖಲು

- Advertisement -
- Advertisement -

ಮುಂಬೈ:ಸುದ್ದಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡುವಾಗ ‘ದಲಿತ’ ಪದ ಬಳಸಿದ ಆರೋಪದ ಮೇಲೆ ಬಿಜೆಪಿ ಶಾಸಕ ನಿತೇಶ್ ರಾಣೆ ವಿರುದ್ಧ ಮಹಾರಾಷ್ಟ್ರದ ನವಿ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಕುರಿತು ಕಂಕವಲಿ ಶಾಸಕ ನಿತೇಶ್ ರಾಣೆ ವಿರುದ್ಧ ಕಳೆದ ವಾರ  ವಕೀಲರೊಬ್ಬರು  ದೂರು ದಾಖಲಿಸಿದ್ದರು.

ಯೂಟ್ಯೂಬ್‌ನಲ್ಲಿ ಪ್ರಾದೇಶಿಕ ಸುದ್ದಿ ವಾಹಿನಿಯೊಂದಕ್ಕೆ ನಿತೇಶ್ ರಾಣೆ ನೀಡಿದ ಸಂದರ್ಶನದ ವೀಡಿಯೊವನ್ನು ದೂರುದಾರರು ವೀಕ್ಷಿಸಿದ್ದಾರೆ. ಅದರಲ್ಲಿ ಅವರು ‘ದಲಿತ’ ಪದವನ್ನು ಬಳಸಿದ್ದಾರೆ. ಇದರಿಂದ ಶಾಸಕ ನಿತೇಶ್ ರಾಣೆ ವಿರುದ್ಧ ವಕೀಲರು ದೂರು ನೀಡಿದ್ದಾರೆ.

ದಲಿತ ಪದ ಬಳಕೆಯನ್ನು ಕೇಂದ್ರ ಸರ್ಕಾರವು ಆ. 7, 2018 ರಂದು ನಿಷೇಧಿಸಿದೆ  ಎಂದು ಎಫ್‌ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.

ಆರೋಪಿತ ಶಾಸಕರ ವಿರುದ್ಧ ಸೆಕ್ಷನ್ 153 ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 153 ಬಿ ಮತ್ತು 295 ಎ ಭಾರತೀಯ ದಂಡ ಸಂಹಿತೆಯಡಿ ಪ್ರಕ್ರರಣ ದಾಖಲಿಸಲಾಗಿದೆ.

ಇದನ್ನು ಓದಿ: ಏಕರೂಪ ನಾಗರಿಕ ಸಂಹಿತೆ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...