Homeಮುಖಪುಟಜೂಜಾಡುತ್ತಿದ್ದವರ ಬೆನ್ನತ್ತಿದ್ದ ಪೊಲೀಸರು; ತಪ್ಪಿಸಿಕೊಳ್ಳುವ ಧಾವಂತದಲ್ಲಿ ನದಿಯಲ್ಲಿ ಮುಳುಗಿದ ಆರು ಜನ

ಜೂಜಾಡುತ್ತಿದ್ದವರ ಬೆನ್ನತ್ತಿದ್ದ ಪೊಲೀಸರು; ತಪ್ಪಿಸಿಕೊಳ್ಳುವ ಧಾವಂತದಲ್ಲಿ ನದಿಯಲ್ಲಿ ಮುಳುಗಿದ ಆರು ಜನ

- Advertisement -
- Advertisement -

ವಿಜಯಪುರದಿಂದ 45 ಕಿ.ಮೀ ದೂರದಲ್ಲಿರುವ ಕೊಲ್ಹಾರ ಪಟ್ಟಣದ ಸಮೀಪ ಕೃಷ್ಣಾ ನದಿಯ ಬಲೂಟಿ ಜಾಕ್‌ವೆಲ್‌ನಲ್ಲಿ ಮಂಗಳವಾರ ಕನಿಷ್ಠ ಆರು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇವರೆಲ್ಲರೂ ಜೂಜಾಡುತ್ತಿದ್ದಾಗ ಪೊಲೀಸರ ದಾಳಿಯಿಂದ ತಪ್ಪಿಸಿಕೊಳ್ಳಲು ತೆಪ್ಪ ಏರಿದ್ದರು ಎನ್ನಲಾಗಿದೆ.

ನದಿಯ ದಡದಲ್ಲಿ ಇಸ್ಪೀಟ್ ಆಡುತ್ತಿದ್ದ ಕೆಲವರು ಜೂಜಾಡುತ್ತಿದ್ದ ತಮ್ಮನ್ನು ಬಂಧಿಸಲು ಪೊಲೀಸರು ಬರುತ್ತಿದ್ದಾರೆ ಎಂದು ಹೆದರಿ ತೆಪ್ಪದ ಮೇಲೆ ಹಾರಿದ ಘಟನೆ ನಡೆದಿದೆ. ತಪ್ಪಿಸಿಕೊಳ್ಳುವ ಆತುರದಲ್ಲಿ, ಅವರು ಮೀನುಗಾರರು ನದಿಯ ದಡದಲ್ಲಿ ಇಟ್ಟುಕೊಂಡಿದ್ದ ತೆಪ್ಪ ಬಳಸಿಕೊಂಡು ನಡುಗಡ್ಡೆ ಪ್ರವೇಶಿಸಲು ಯತ್ನಿಸಿದ್ದಾರೆ. ಆದರೆ, ಇದ್ದಕ್ಕಿದ್ದಂತೆ, ಬಲವಾದ ಗಾಳಿಗೆ ತೆಪ್ಪ ಅಲುಗಾಡಿದ್ದು, ಅದರಲ್ಲಿದ್ದವರು ನಿಯಂತ್ರಣ ಕಳೆದುಕೊಂಡರು. ಬಿದಿರು ಮತ್ತು ಪಾಲಿಥಿನ್ ಹಾಳೆಗಳಿಂದ ನಿರ್ಮಿಸಲಾಗಿದ್ದ ವೃತ್ತಾಕಾರದ ತೆಪ್ಪ ನದಿ ಮಧ್ಯದಲ್ಲಿ ಉರುಳಿಬಿದ್ದಿದೆ. ಅದರಲ್ಲಿದ್ದ ಎಂಟು ಜನರಲ್ಲಿ ಇಬ್ಬರು ಸುರಕ್ಷಿತವಾಗಿ ಈಜಿ ದಡ ಸೇರಿದ್ದಾರೆ. ಆದರೆ, ಆರು ಮಂದಿ ನೀರಿನಲ್ಲಿ ಮುಳುಗಿದ್ದು, ಈವರೆಗೆ ಇಬ್ಬರ ದೇಹ ಮಾತ್ರ ಪತ್ತೆಯಾಗಿದೆ.

ಬಳಿಕ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಎರಡು ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮಂಗಳವಾರ ತಡರಾತ್ರಿವರೆಗೂ ಉಳಿದ ಶವಗಳಿಗಾಗಿ ಶೋಧಕಾರ್ಯ ನಡೆದಿದೆ.

ಪೊಲೀಸ್ ವರಿಷ್ಠಾಧಿಕಾರಿ ರಿಸಿಕೇಶ್ ಸೋನಾವಾನೆ ಮತ್ತು ಇತರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...