Homeಚಳವಳಿಟ್ರ್ಯಾಕ್ಟರ್ ರ್‍ಯಾಲಿಗೆ ಪೊಲೀಸರ ಕೆಲವು ಷರತ್ತುಗಳು: ಒಪ್ಪದ ರೈತ ಸಂಘಟನೆಗಳು

ಟ್ರ್ಯಾಕ್ಟರ್ ರ್‍ಯಾಲಿಗೆ ಪೊಲೀಸರ ಕೆಲವು ಷರತ್ತುಗಳು: ಒಪ್ಪದ ರೈತ ಸಂಘಟನೆಗಳು

ರ್‍ಯಾಲಿಯನ್ನು ದೆಹಲಿ ಹೊರಗಿನ ರಿಂಗ್‌ರೋಡ್‌ನಲ್ಲೇ ನಡೆಸುವುದಾಗಿ ಸಂಘಟನೆಗಳು ಘೋಷಿಸಿದೆ

- Advertisement -
- Advertisement -

ದೆಹಲಿ ಪೊಲೀಸರು ಸೋಮವಾರ ಮತ್ತು ಮಂಗಳವಾರ ಪ್ರತಿಭಟನಾ ನಿರತ ವಿವಿಧ ರೈತ ಸಂಘಟನೆಗಳ ನಾಯಕರನ್ನು ಭೇಟಿ ಮಾಡಿ, ದೆಹಲಿಯ ಹೊರವಲಯಕ್ಕೆ ರ್‍ಯಾಲಿ ಸಿಮೀತಗೊಳಿಸಲು ಕೇಳಿದ್ದಾರೆ. ರಿಂಗ್ ರೋಡ್‌ ಮತ್ತು ಕಿಸಾನ್ ಘಾಟ್‌ನತ್ತ ರ್‍ಯಾಲಿ ಮುಂದುವರೆಯುವುದು ಬೇಡ ಎಂದಿರುವ ಪೊಲೀಸರ ಸಲಹೆಯನ್ನು ರೈತ ಸಂಘಟನೆಗಳ ನಾಯಕರು ಒಪ್ಪಿಕೊಂಡಿಲ್ಲ.

ಇಂದು ಕೂಡ ರೈತ ನಾಯಕರೊಂದಿಗೆ ಚರ್ಚಿಸಲಿರುವ ಪೊಲೀಸರು, ಭದ್ರತಾ ವ್ಯವಸ್ಥೆಯ ವಿಷಯವನ್ನು ಮಾತನಾಡಲಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆದರೆ ಪೊಲೀಸರ ಷರತ್ತಿಗೆ ಒಪ್ಪದ ರೈತ ಸಂಘಟನೆಗಳು ಹೊರ ರಿಂಗ್ ರೋಡಿನಲ್ಲೇ ರ್‍ಯಾಲಿ ನಡೆಯಲಿದೆ ಮತ್ತು ಅದು ಕಿಸಾನ್ ಘಾಟ್‌ವರೆಗೂ ನಡೆಯಲಿದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ರಿಂಗ್‌ರಸ್ತೆಯ ಬದಲು ಕೆಎಂಪಿ ಎಕ್ಸ್‌ಪ್ರೆಸ್ ವೇನಲ್ಲಿ ರ್‍ಯಾಲಿ ನಡೆಸಿ ಮತ್ತು ಬೇರೆ ರೂಟ್‌ನತ್ತ ರ್‍ಯಾಲಿ ಬರುವುದು ಬೇಡ, ಕಿಸಾನ್‌ಘಾಟ್‌ನತ್ತಲೂ ಬೇಡ ಎಂದು ರೈತ ನಾಯಕರಿಗೆ ಮನವರಿಕೆ ಮಾಡಿಕೊಡಲು ದೆಹಲಿ ಪೊಲೀಸ್ ಅಧಿಕಾರಿಗಳು ಯತ್ನಿಸಿದ್ದು, ಅದನ್ನು ರೈತ ಸಂಘಟನೆಗಳು ಒಪ್ಪಿಲ್ಲ.

ಇದನ್ನೂ ಓದಿ: ’ಪಂಜಾಬ್‌‌ಗೆ ಬಂದು ಕೃಷಿ ಕಾನೂನನ್ನು ವಿವರಿಸಿ’- BJP ಸಂಸದೆ ಹೇಮಾ ಮಾಲಿನಿಯನ್ನು ಆಹ್ವಾನಿಸಿದ ರೈತರು

’ಸಂಪೂರ್ಣ ಹೊರವಲಯಕ್ಕೆ ರ್‍ಯಾಲಿ ಸಿಮೀತಗೊಳಿಸಲು ಪೊಲೀಸರು ಸೂಚಿಸುತ್ತಿದ್ದಾರೆ. ಆದರೆ, ನಾವು ದೆಹಲಿಯ ಹೊರ ರಿಂಗ್‌ರೋಡಿನಲ್ಲೇ ರ್‍ಯಾಲಿ ಮಾಡಲಿದ್ದೇವೆ ಮತ್ತು ಗಣರಾಜ್ಯೋತ್ಸವ ಪರೇಡ್‌ಗೆ ಮತ್ತು ಸಾರ್ವಜನಿಕರಿಗೆ ತೊಂದರೆ ಅಗದಂತೆ ಶಾಂತಿಯು ರ್‍ಯಾಲಿ ಮಾಡುತ್ತೇವೆ’ ಎಂದು ರೈತ ನಾಯಕರು ತಿಳಿಸಿದ್ದಾರೆ.

’ನಮ್ಮ ಪರೇಡ್ ಕೂಡ ಗಣರಾಜ್ಯೋತ್ಸವದ ಪರೇಡ್‌ನಂತೆ ಇರಲಿದೆ. ಹೊಸ ಕೃಷಿ ಕಾಯ್ದೆಗಳ ಅಪಾಯಗಳನ್ನು ಬಿಂಬಿಸುವ ಟ್ಯಾಬ್ಲೊಗಳು, ಭಿತ್ತಿಪತ್ರಗಳನ್ನು ಟ್ರ್ಯಾಕ್ಟರ್‌ಗಳ ಮೇಲೆ ಪ್ರದರ್ಶಿಸಲಾಗುವುದು. ವಿವಿಧ ರಾಜ್ಯಗಳ ರೈತ ಸಂಘಟನೆಗಳು ಅಲ್ಲಿನ ರೈತರ ಸಂಕಷ್ಟಗಳನ್ನು ಬಿಂಬಿಸುವ ಭಿತ್ತಿಪತ್ರಗಳನ್ನು ಪ್ರದರ್ಶಿಸಲಿವೆ’ ಎಂದು ರೈತ ಸಂಘಟನೆಗಳು ತಿಳಿಸಿವೆ.

ಸಿಂಘು, ಟಿಕ್ರಿ ಮತ್ತು ಘಾಜಿಯಾಪುರ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟದ ಸ್ಥಳಗಳಲ್ಲಿ ಹರಿಯಾಣ ಮತ್ತು ರಾಜಸ್ತಾನ್ ಪೊಲೀಸರು ಹೆಚ್ಚಿನ ಪೊಲೀಸರನ್ನು ಮತ್ತು ಆರ್‌ಎಎಫ್ ತುಕಡಿಗಳನ್ನು ನಿಯೋಜಿಸಿದ್ದಾರೆ. ಅಲ್ಲಲ್ಲಿ ತಾತ್ಕಾಲಿಕ ಬ್ಯಾರಿಕೇಡ್‌ಗಳನ್ನು ನಿರ್ಮಿಸಿದ್ದಾರೆ.

ಇದನ್ನೂ ಓದಿ: ಟ್ರಾಕ್ಟರ್‌‌ ರ್‍ಯಾಲಿಯನ್ನು ಶಾಂತಿಯುತವಾಗಿ ನಡೆಸಿಯೆ ತೀರುತ್ತೇವೆ: ಹೋರಾಟ ನಿರತ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...