Homeಕರ್ನಾಟಕಅಕ್ರಮ ಮರಳು ಮಾಫಿಯಾ ತಡೆಯಲು ಮುಂದಾದ ಪೊಲೀಸ್ ಪೇದೆ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆ

ಅಕ್ರಮ ಮರಳು ಮಾಫಿಯಾ ತಡೆಯಲು ಮುಂದಾದ ಪೊಲೀಸ್ ಪೇದೆ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆ

- Advertisement -
- Advertisement -

ಅಕ್ರಮ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ತಡೆಯಲು ಮುಂದಾದ ಪೊಲೀಸ್ ಪೇದೆಯ ಮೇಲೆ ದುಷ್ಕರ್ಮಿಗಳು ಟ್ರ್ಯಾಕ್ಟರ್ ಹರಿಸಿದ ಕಾರಣ ಪೇದೆ ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಹುಲ್ಲೂರು ಗ್ರಾಮದಲ್ಲಿ ವರದಿಯಾಗಿದೆ.

ಗುರುವಾರ ಸಂಜೆ ಭೀಮಾ ನದಿ ತೀರದಿಂದ ಅಕ್ರಮ ಮರಳು ಸಾಗಿಸುತ್ತಿದ್ದ ಸಂದರ್ಭದಲ್ಲಿ ಪೊಲೀಸ್ ಪೇದೆ ಮಯೂರ ಚವ್ಹಾಣ (51) ಎಂಬುವವರು ತಡೆಯಲು ಮುಂದಾದಾಗ ಅವರ ಮೇಲೆ ಟ್ರಾಕ್ಟರ್ ಹರಿಸಿ ಕೊಲ್ಲಲಾಗಿದೆ ಎಂದು ಪೊಲೀಸರು ಎಫ್‌ಐಆರ್ ದಾಖಲಿಸಿ, ಸಿದ್ದಪ್ಪ ಕರ್ಜಗಿ ಎಂಬಾತನನ್ನು ಬಂಧಿಸಿದ್ದಾರೆ.

ಹುಲ್ಲೂರು ಗ್ರಾಮದಲ್ಲಿ ತಪಾಸಣೆ ನಡೆಸಲು ಚೆಕ್ ಪೋಸ್ಟ್ ಹಾಕಲಾಗಿದ್ದು, ಅಲ್ಲಿ ನಿಲ್ಲಿಸದೇ ತೆರಳುತ್ತಿದ್ದ ಟ್ರ್ಯಾಕ್ಟರ್‌ಗೆ ಅಡ್ಡಬಂದ ಪೊಲೀಸ್ ಮೇಲೆ ಹರಿಸಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಐಪಿಸಿ ಸೆಕ್ಷನ್ 302, 333, 307, 379, 504, 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಕಲಬುರಗಿ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆಯವರು ಸಂತ್ರಸ್ತರ ಕುಟುಂಬದವರೊಡನೆ ಮಾತನಾಡಿದ್ದು, ಸೂಕ್ತ ತನಿಖೆ ಮತ್ತು ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದ್ದಾರೆ. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೊತೆ ಚರ್ಚೆ ನಡೆಸಿದ್ದಾರೆ.

ಇದನ್ನೂ ಓದಿ: ಬಿಜೆಪಿಯವರು ಅದೆಷ್ಟೇ ಷಡ್ಯಂತ್ರ ನಡೆಸಿದರೂ ಅನ್ನಭಾಗ್ಯದ ಅಕ್ಕಿ 10 ಕೆಜಿಗೆ ಏರಿಸುವುದು ನಿಶ್ಚಿತ: ಕಾಂಗ್ರೆಸ್…

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...