Homeದಲಿತ್ ಫೈಲ್ಸ್ಜಾತಿ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸ್ ವಿಳಂಬ: ಮನನೊಂದು ದಲಿತ ಯುವಕ ಸಾವಿಗೆ ಶರಣು

ಜಾತಿ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸ್ ವಿಳಂಬ: ಮನನೊಂದು ದಲಿತ ಯುವಕ ಸಾವಿಗೆ ಶರಣು

ಸಂವಿಧಾನವನ್ನು ಓದಿ ಅರ್ಥ ಮಾಡಿಕೊಂಡಿದ್ದೇನೆ. ಈ ವ್ಯವಸ್ಥೆಯಿಂದ ಏನೂ ಮಾಡಲಾಗಲಿಲ್ಲ ಎಂದು ರಾಜಸ್ಥಾನದ ದಲಿತ ಯುವಕ ತನ್ನ ಡೆತ್‌ನೋಟ್‌ನಲ್ಲಿ ಬರೆದಿದ್ದಾನೆ.

- Advertisement -
- Advertisement -

ರಾಜಸ್ಥಾನದ ಅಜ್ಮೀರ್ ಜಿಲ್ಲೆಯ ರೂಪಂಗಢ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ 25 ವರ್ಷದ ದಲಿತ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ರಾಜಕೀಯ ಒತ್ತಡದಿಂದ ಪೊಲೀಸರು ತನ್ನ ದೂರಿನ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ‘ಡೆತ್‌ ನೋಟ್’ ಬರೆದಿದ್ದಾನೆ.

ಮೃತರನ್ನು ಓಂಪ್ರಕಾಶ್ ರಾಯಗಾರ್ ಎಂದು ಗುರುತಿಸಲಾಗಿದೆ. ರಾಯಗಾರ್‌ ಅವರ ಡೆತ್‌ನೋಟ್‌ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗಿದೆ. ತಮ್ಮ ದೈಹಿಕ ವಿಕಲಚೇತನ ತಂದೆಯ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ದೂರು ನೀಡಿ ಪ್ರಕರಣ ದಾಖಲಿಸಿದ್ದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಆದರೆ ರೂಪಂಗಢ ಪೊಲೀಸರು ಮತ್ತು ಪ್ರಭಾವಿ ಸಮುದಾಯದ ಸ್ಥಳೀಯರೊಬ್ಬರು ಪ್ರಕರಣದ ವರದಿಯನ್ನು ದುರ್ಬಲಗೊಳಿಸಿದರು, ರಾಜಕೀಯ ಒತ್ತಡವನ್ನು ಸೃಷ್ಟಿಸಿದರು ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನನ್ನ ತಂದೆ ನಾರಾಯಣ್ ರಾಯಗಾರ್‌ ಅವರು ದೀಪಾವಳಿಯಂದು ನಮ್ಮ ಹೊಲದಲ್ಲಿ ಚೌಳೆಕಾಯಿ ಮತ್ತು ಸಜ್ಜೆ ಸಂಗ್ರಹಿಸುತ್ತಿದ್ದರು. ಆಗ ಕಿಷ್ಣರಾಮ್ ಗುರ್ಜರ್ ಎಂಬ ವ್ಯಕ್ತಿ ಮತ್ತು ಅವರ ಇಬ್ಬರು ಸೋದರಳಿಯರಾದ ಕನರಾಮ್, ನಂದರಾಮ್ ಅವರು ತಮ್ಮ ದನಗಳನ್ನು ಮೇಯಿಸಲು ಹೊಲಕ್ಕೆ ಬಂದರು. ನಮ್ಮ ತಂದೆ ವಿರೋಧಿಸಿದಾಗ ಹಲ್ಲೆ ನಡೆಸಿದರು” ಎಂದು ರಾಯಗಾರ್‌‌ ತಮ್ಮ ಪತ್ರದಲ್ಲಿ ಬರೆದಿದ್ದಾರೆ.

“ನನ್ನ ತಂದೆ ಹೇಗೋ ಅವರಿಂದ ತಪ್ಪಿಸಿಕೊಂಡು ಊರಿನ ಕಡೆಗೆ ಓಡಿಬಂದರು. ಅವರು ನನಗೆ ಮತ್ತು ನನ್ನ ತಾಯಿಗೆ ಘಟನೆಯನ್ನು ವಿವರಿಸಿದರು. ನಾವು ಹೊಲದತ್ತ ಹೋದಾಗ, ಅವರು ನಮ್ಮನ್ನು ಸುತ್ತುವರೆದು ಜಾತಿ ನಿಂದನೆ ಮಾಡಿ ಅವಮಾನಿಸಿದರು. ಅವರು ನಮ್ಮೊಂದಿಗೆ ಪ್ರತಿ ವರ್ಷವೂ ಅದೇ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ನಾವು ಬೆಳೆಯನ್ನು ಬೆಳೆಯುವಾಗ ನಮಗೆ ತೊಂದರೆ ನೀಡಲು ತಮ್ಮ ಕುರಿ ಮತ್ತು ಮೇಕೆಗಳನ್ನು ಹೊಲದಲ್ಲಿ ಬಿಡುತ್ತಾರೆ” ಎಂದು ರಾಯಗಾರ್‌‌ ತಮ್ಮ ಆತ್ಮಹತ್ಯೆ ಪತ್ರದಲ್ಲಿ ಸಂಕಟ ವ್ಯಕ್ತಪಡಿಸಿದ್ದಾರೆ.

ಅವರು ದೂರು ದಾಖಲಿಸಲು ಪೊಲೀಸ್ ಠಾಣೆಗೆ ಹೋದರು. ರಾಯಗಾರ್‌ ಕುಟುಂಬದ ವಿವರಗಳನ್ನು ಕೇಳುತ್ತಿದ್ದ ಅಧಿಕಾರಿಗೆ ಪ್ರಕರಣವನ್ನು ದಾಖಲಿಸಬೇಡಿ ಎಂಬ ಸೂಚನೆಯೊಂದು ಕರೆಯ ಮೂಲಕ ಬಂದು. ರಾಯಗಾರ್‌‌ ಅವರ ಕುಟುಂಬವನ್ನು ವೈದ್ಯಕೀಯ ಪರೀಕ್ಷೆ ಮಾಡಿದ ನಂತರ ಮನೆಗೆ ಕಳುಹಿಸಲಾಯಿತು. ಮರುದಿನ ಬರುವಂತೆ ಪೊಲೀಸರು ಹೇಳಿದ್ದರು.

“ನಾವು ಮರುದಿನ ಹೋದಾಗ, ಮತ್ತೆ ಮರುದಿನ ಬರಲು ಹೇಳಲಾಯಿತು. ನಾಳೆ ಬನ್ನಿ ಎಂದು ಹೇಳುವ ಮೂಲಕ ಪೊಲೀಸರು ವಿಳಂಬ ಮಾಡಿದರು. ನಾವು ನ್ಯಾಯಾಲಯಕ್ಕೆ ಹೋಗುತ್ತೇವೆ ಎಂದು ಪೊಲೀಸರಿಗೆ ಹೇಳಿದಾಗ ಅವರು ಎಫ್ಐಆರ್ ದಾಖಲಿಸಿದರು. ಆದರೆ ಪ್ರಕರಣವನ್ನು ದುರ್ಬಲಗೊಳಿಸಿದರು” ಎಂದು ಆತ್ಮಹತ್ಯೆ ಪತ್ರದಲ್ಲಿ ದೂರಲಾಗಿದೆ.

“…ನಮ್ಮ ಗ್ರಾಮದ ಮಾಜಿ ಸರಪಂಚ್ ರಂಜಿತ್ ಸಿಂಗ್ ರಾಥೋಡ್ ಮತ್ತು ಠಾಣಾಧಿಕಾರಿ ಅಯೂಬ್ ಖಾನ್ ಅವರು ನನ್ನ ಕಿರಿಯ ಸಹೋದರ ರಾಹುಲ್ ಮತ್ತು ನನ್ನ ಚಿಕ್ಕಪ್ಪ ಜುಗಲ್ಕಿಶೋರ್ ವಿರುದ್ಧ ನಕಲಿ ಎಫ್ಐಆರ್ ದಾಖಲಿಸಿದ್ದಾರೆ. ಇದುವರೆಗೂ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ರಾಯಗಾರ್‌ ತಿಳಿಸಿದ್ದಾರೆ.

“ತಂದೆ-ತಾಯಿಯ ಆತ್ಮಗೌರವವನ್ನು ಉಳಿಸಲಾಗಲಿಲ್ಲ. ಸಂವಿಧಾನವನ್ನು ಓದಿ ಅರ್ಥ ಮಾಡಿಕೊಂಡಿದ್ದೇನೆ. ಈ ವ್ಯವಸ್ಥೆಯಿಂದ ಏನೂ ಮಾಡಲಾಗಲಿಲ್ಲ. ಮಾಜಿ ಸರಪಂಚ್‌ಗೆ ರಾಜಕೀಯ ಶಕ್ತಿ ಇದೆ. ನಾನು ನೋಡುತ್ತಲೇ ಇದ್ದೆ. ಯಾವಾಗ ನಾನು ಕಾನೂನಿನ ಸಹಾಯವನ್ನು ಪಡೆಯಲು ಪ್ರಯತ್ನಿಸಿದೆನೋ, ಅವರು ನಮ್ಮ ವಿರುದ್ಧ ನಕಲಿ ಪ್ರಕರಣವನ್ನು ದಾಖಲಿಸಿದ್ದಾರೆ” ಎಂದು ವಿವರಿಸಿದ್ದಾರೆ.

ತಾನು ಇಡುತ್ತಿರುವ ಹೆಜ್ಜೆಯನ್ನು “ತಪ್ಪು” ಎಂದು ಕರೆದುಕೊಂಡಿರುವ ರಾಯಗಾರ್‌ ತನ್ನ ತಾಯಿಯಲ್ಲಿ ಕ್ಷಮೆಯಾಚಿಸಿದ್ದಾರೆ. ತಪ್ಪಿತಸ್ಥರನ್ನು ಸುಮ್ಮನೆ ಬಿಡದಂತೆ ಸಹೋದರಿ ನೀತೂ ಅವರಿಗೆ ಕೋರಿರುವ ರಾಯಗರ್, “… ಪಿತೂರಿಯಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಿ, ಎಲ್ಲವನ್ನೂ ಮಾರಾಟ ಮಾಡಿದರೂ ಸರಿ ಯಾರನ್ನೂ ಬಿಡಬೇಡಿ” ಎಂದು ಮನನೊಂದು ನುಡಿದಿದ್ದಾರೆ.

ಬುಧವಾರ ದಲಿತ ಜನ ಸಮೂಹವು ರಾಯಗಾರ್‌‌ ಅವರ ಕುಟುಂಬದ ಜೊತೆಗೂಡಿ ಸಮುದಾಯ ವೈದ್ಯಕೀಯ ಕೇಂದ್ರದ ಹೊರಗೆ ಧರಣಿ ನಡೆಸಿದರು. ಪರಿಸ್ಥಿತಿ ಉದ್ವಿಗ್ನಗೊಂಡಿತು. ನ್ಯಾಯ ಸಿಗುವವರೆಗೂ ಶವವನ್ನು ತೆಗೆದುಕೊಳ್ಳಲು ನಿರಾಕರಿಸಲಾಯಿತು. ಭೀಮ್ ಆರ್ಮಿಯ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ಕೂಡ ರೂಪಂಗಢಕ್ಕೆ ಬಂದು ಸೇರಿಕೊಂಡರು.

ರಾಯಗಾರ್‌ ಅವರ ಮನೆಗೆ ರಾಷ್ಟ್ರೀಯ ಲೋಕತಾಂತ್ರಿಕ್ ಪಕ್ಷದ ಗೋಪಾಲ್ಗಢ ಶಾಸಕ ಪುಖ್ರಾಜ್ ಗರ್ಗ್ ಭೇಟಿ ನೀಡಿದರು. ಮೃತರ ಸಂಬಂಧಿಕರಿಗೆ ಪರಿಹಾರ, ಸರ್ಕಾರಿ ನೌಕರಿ ಹಾಗೂ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ನಾಲ್ಕು ಪೊಲೀಸ್ ಠಾಣೆಗಳಿಂದ ಪೊಲೀಸ್ ತಂಡಗಳು, ಉಪವಿಭಾಗೀಯ ಮ್ಯಾಜಿಸ್ಟ್ರೇಟ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿ ಮನೀಶ್ ಶರ್ಮಾ ಸ್ಥಳಕ್ಕೆ ಆಗಮಿಸಿ ದಲಿತ ಸಮುದಾಯವನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಪೊಲೀಸರು ಆರು ಜನರ ವಿರುದ್ಧ ಪ್ರಕರಣ ದಾಖಲಿಸಿದ ನಂತರ, ಶವಪರೀಕ್ಷೆಗೆ ಕುಟುಂಬ ಒಪ್ಪಿದೆ.

ಇದನ್ನೂ ಓದಿರಿ: ದಲಿತರ ಮದುವೆಗೆ ಕಲ್ಯಾಣ ಮಂಟಪ ನೀಡದೆ ಅಸ್ಪೃಶ್ಯತೆ ಆಚರಣೆ: ದೂರು – ಪ್ರತಿಭಟನೆ

ಸಂತ್ರಸ್ತೆಯ ಕುಟುಂಬದವರ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ಉಪ ಎಸ್ಪಿ ಮನೀಶ್ ಶರ್ಮಾ ತಿಳಿಸಿದ್ದಾರೆ. ಇಬ್ಬರು ಪೊಲೀಸ್ ಅಧಿಕಾರಿಗಳು ಮತ್ತು ಇತರ ನಾಲ್ವರ ವಿರುದ್ಧ ಆರೋಪ ಮಾಡಲಾಗಿದೆ. “ದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಮತ್ತು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ” ಎಂದು ಶರ್ಮಾ ಹೇಳಿದ್ದಾರೆ.

ಭೀಮ್ ಆರ್ಮಿಯ ಚಂದ್ರಶೇಖರ್ ಅವರು ಆಜಾದ್ ಪ್ರಕರಣವನ್ನು ಖಂಡಿಸಿದ್ದು, “ಓಂಪ್ರಕಾಶ್ ರಾಯಗಾರ್‌‌ ನಿಧನರಾಗಿ ಮೂರು ದಿನಗಳು ಕಳೆದರೂ ನಿರ್ದಿಷ್ಟ ಕ್ರಮ ಕೈಗೊಂಡಿಲ್ಲ. ನಮ್ಮ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ಮುಂದುವರಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...