Homeಕರ್ನಾಟಕಅಮಾಯಕ ಮುಸ್ಲಿಂ ಯುವಕನ ಕೊಲೆಗೆ ಪೊಲೀಸ್ ಇಲಾಖೆ, ಸರಕಾರವೆ ನೇರ ಹೊಣೆ- ಡಿವೈಎಫ್ಐ

ಅಮಾಯಕ ಮುಸ್ಲಿಂ ಯುವಕನ ಕೊಲೆಗೆ ಪೊಲೀಸ್ ಇಲಾಖೆ, ಸರಕಾರವೆ ನೇರ ಹೊಣೆ- ಡಿವೈಎಫ್ಐ

- Advertisement -
- Advertisement -

ಅಮಾಯಕ ಮುಸ್ಲಿಂ ಸಮುದಾಯದ ಯುವಕನ ಕೊಲೆಯನ್ನು ಖಂಡಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಡಿವೈಎಫ್‌ಐ ಸಮಿತಿ, ಕಾನೂನು ಸುವ್ಯವಸ್ಥೆ ನಿಯಂತ್ರಿಸಲಾಗದ ಪೊಲೀಸ್ ಇಲಾಖೆ ಮತ್ತು ಸರಕಾರವೇ ನೇರ ಹೊಣೆ ಎಂದು ಆರೋಪಿಸಿದೆ. ಅಮಾಯಕ ಮುಸ್ಲಿಂ ಯುವಕನ

ಬಂಟ್ವಾಳ ತಾಲೂಕಿನ ಕೊಳ್ತಮಜಲಿನ ಮುಸ್ಲಿಂ ಸಮುದಾಯದ ಯುವಕನೊಬ್ಬನ ಹತ್ಯೆಯಿಂದ ಮತ್ತೆ ಜಿಲ್ಲೆಯ ಜನಸಾಮಾನ್ಯರಲ್ಲಿ ಆತಂಕ ಮನೆಮಾಡಿದೆ. ದ.ಕ ಜಿಲ್ಲೆಯಲ್ಲಿ ಪದೇ ಪದೇ ನಡೆಯುವ ಇಂತಹದೇ ಮತೀಯ ಹಿಂಸಾಚಾರವು ಜನರ ನೆಮ್ಮದಿಯ ಜೀವನಕ್ಕೆ ಮತ್ತೆ ಜಿಲ್ಲೆಯ ಆರ್ಥಿಕತೆಯ ಮೇಲೆ ಬಹುದೊಡ್ಡ ಹೊಡೆತ ನೀಡಿದೆ ಎಂದು ಡಿವೈಎಫ್‌ಐ ಜಿಲ್ಲಾಧ್ಯಕ್ಷ ಇಮ್ತಿಯಾಜ್ ಅವರು ಹೇಳಿದ್ದಾರೆ.

ಬಿಜೆಪಿ ಸಂಘಪರಿವಾರದ ಮತೀಯ ದ್ರುವೀಕರಣದ ರಾಜಕಾರಣ, ಕೋಮು ದ್ವೇಷಕಾರುವ, ಹಿಂಸಾಚಾರದ ಕರೆಗಳು ಪ್ರತೀಕಾರದ ಕೊಲೆಗಳಿಗೆ ಅವಕಾಶ ಮಾಡಿಕೊಟ್ಟಂತೆ ಕಾಣುತ್ತಿದೆ. ಜಿಲ್ಲಾಡಳಿತ ಪೊಲೀಸ್ ಇಲಾಖೆ ಈ ಕೂಡಲೇ ಬಂಟ್ವಾಳದಲ್ಲಿ ಕೊಲೆಯಾದ ಮುಸ್ಲಿಂ ಸಮುದಾಯದ ಯುವಕನ ಹಂತಕರನ್ನು ಶೀಘ್ರಗತಿಯಲ್ಲಿ ಬಂಧಿಸಬೇಕು. ಕೊಲೆಯ ಹಿಂದಿರುವ ನೈಜಾಂಶವನ್ನು ಬಯಲುಗೊಳಿಸಬೇಕೆಂದು ಡಿವೈಎಫ್ಐ ಒತ್ತಾಯಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವೇಷ ರಾಜಕಾರಣದಲ್ಲೇ ಹಿಡಿತ ಸಾಧಿಸುತ್ತ ಬಂದಿರುವ ಬಿಜೆಪಿ, ಸಂಘಪರಿವಾರದ ಹಿನ್ನಲೆಗಳನ್ನು ಅರಿತಿರುವ ಇಲ್ಲಿನ ಜಿಲ್ಲಾಡಳಿತ, ಪೊಲೀಸ್ ಇಲಾಖೆಯ ಮತ್ತು ಈಗಿನ ಸರಕಾರ ಅವರ ಕಾನೂನು ವಿರೋಧಿ ಚಟುವಟಿಕೆಗಳನ್ನು, ದ್ವೇಷ ಹರಡುವ ಭಾಷಣಗಳನ್ನು ನಿಯಂತ್ರಿಸದೆ ಇರುವ ಕಾರಣಕ್ಕೆ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ದಾಳಿಗೆ ಮುಂದಾಗುವ, ಇಂತಹ ಪ್ರತೀಕಾರದ ಕೊಲೆಗಳಿಗೆ ಪ್ರಚೋದನೆಯನ್ನು ಒದಗಿಸಲು ಕಾರಣವಾಗಿದೆ ಎಂದು ಡಿವೈಎಫ್‌ಐ ಹೇಳಿದೆ.

ಜಿಲ್ಲೆಯ ಪೊಲೀಸ್ ಇಲಾಖೆ ಸಂಪೂರ್ಣ ವೈಫಲ್ಯತೆಯಿಂದ ಕಾನೂನು ಸುವ್ಯವಸ್ಥೆ ಹದಗೆಟ್ದಿದೆ ಇಲ್ಲಿನ ಪೊಲೀಸ್ ಇಲಾಖೆಯೊಳಗೆ ಅಮೂಲಾಗ್ರವಾದ ಬದಲಾವಣೆ ತರಬೇಕೆಂದು ಹಲವು ಬಾರಿ ಒತ್ತಾಯಿಸಿದರೂ ಈ ಬಗ್ಗೆ ಕ್ರಮಕೈಗೊಳ್ಳುವಲ್ಲಿ ಆಳುವ ಸರಕಾರಗಳು ಬೇಜವಾಬ್ದಾರಿಯನ್ನು ವಹಿಸಿದೆ ಎಂದು ಇಮ್ತಿಯಾಝ್ ಹೇಳಿದ್ದಾರೆ.

ಜಿಲ್ಲೆಯ ಉಸ್ತುವಾರಿ ಮಂತ್ರಿ ಕೇವಲ ಕಟ್ಟುನಿಟ್ಟಿನ ಕ್ರಮಕೈಗೊಳ್ಳಾಗುವುದೆಂಬ ಕೇವಲ ಹೇಳಿಕೆಗಳನ್ನಷ್ಟೇ ಹೊರಡಿಸುತ್ತಾರೆಯೇ ಹೊರತು ಇಲ್ಲಿ ಬಿಜೆಪಿ ಸಂಘಪಾರಿವಾರದ ಹಿಂಸಾಚಾರಕ್ಕೆ ಗುರಿಯಾಗುತ್ತಿರುವ ಅಮಾಯಕ ಮುಸ್ಲಿಂ ಸಮುದಾಯದ ರಕ್ಷಣೆಗೆ ಯಾವೊಂದು ಕ್ರಮಗಳು ಇಲ್ಲದೇ ಇರೋದು ಖೇದಕರ. ಮತ್ತದೇ ಸಂಜೆಯಾಗುತ್ತಲೇ ವ್ಯಾಪಾರ ನಡೆಸಿ ಬದುಕುವ ಅಂಗಡಿ ಮುಂಗಟ್ಟುಗಳನ್ನು ಬಲವಂತದಿಂದ ಬಂದು ಮಾಡಿಸಿ ನಗರವನ್ನು ಮುಚ್ಚುವ, ಮನೆಯಿಂದ ಹೊರಬರೋದಕ್ಕೂ ಭೀತಿ ಹುಟ್ಟಿಸುವಂತಹ ಕ್ರಮಗಳಿಂದ ಯಾವುದೇ ಪ್ರಯೋಜನಗಳಿಲ್ಲ ಎಂದು ಡಿವೈಎಫ್ಐ ಹೇಳಿದೆ.

ಬಂಟ್ವಾಳದಲ್ಲಿ ಹತ್ಯೆಯಾಗಿರುವ ಮುಸ್ಲಿಂ ಸಮುದಾಯದ ಅಮಾಯಕ ಯುವಕನ ಹಂತಕರನ್ನು ಕೂಡಲೇ ಬಂಧಿಸಬೇಕು. ಕೊಲೆಗೆ ಪ್ರಚೋದನೆ ಕಾರಣದಾವರನ್ನೆಲ್ಲಾ ಬಯಲಿಗೆಳೆಯಬೇಕು. ಜಿಲ್ಲೆಯ ಯುವಜನತೆ ಶಾಂತಿಯನ್ನು ಕಾಪಾಡಬೇಕೆಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಒತ್ತಾಯಿಸಿದೆ. ಅಮಾಯಕ ಮುಸ್ಲಿಂ ಯುವಕನ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮ್ಯಾಗಿ ರೀತಿ ದುಷ್ಕರ್ಮಿಗಳಿಗೆ ಜಾಮೀನು ಸಿಗುತ್ತದೆ; ಅಮಾಯಕರು ಕೊಲೆಯಾಗುತ್ತಿದ್ದಾರೆ: ಉಳ್ಳಾಲ ವಿಧಾನಸಭೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಮೀರ್ ರಾಜೀನಾಮೆ

ಮ್ಯಾಗಿ ರೀತಿ ದುಷ್ಕರ್ಮಿಗಳಿಗೆ ಜಾಮೀನು ಸಿಗುತ್ತದೆ; ಅಮಾಯಕರು ಕೊಲೆಯಾಗುತ್ತಿದ್ದಾರೆ: ಉಳ್ಳಾಲ ವಿಧಾನಸಭೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಮೀರ್ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...