Homeಮುಖಪುಟಹತ್ಯೆಗೀಡಾದ ರೈತ ಕುಟುಂಬಗಳ ಭೇಟಿಗೆ ಹೊರಟಿದ್ದ ಪ್ರಿಯಾಂಕ ಗಾಂಧಿ ವಶಕ್ಕೆ ಪಡೆದ ಪೊಲೀಸರು: ತೀವ್ರ ವಾಗ್ವಾದ

ಹತ್ಯೆಗೀಡಾದ ರೈತ ಕುಟುಂಬಗಳ ಭೇಟಿಗೆ ಹೊರಟಿದ್ದ ಪ್ರಿಯಾಂಕ ಗಾಂಧಿ ವಶಕ್ಕೆ ಪಡೆದ ಪೊಲೀಸರು: ತೀವ್ರ ವಾಗ್ವಾದ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಕೇಂದ್ರ ಸಚಿವನ ಮಗ ರೈತರ ಮೇಲೆ ಕಾರು ಹರಿಸಿ ನಾಲ್ವರನ್ನು ಕೊಂದ ಘಟನೆ ಮತ್ತು ಆನಂತರದ ಹಿಂಸಾಚಾರದಲ್ಲಿ ನಾಲ್ವರು ಕಾರ್ಯಕರ್ತರು ಕೊಲೆಯಾದ ಘಟನೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರೈತರ ಹತ್ಯೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿವೆ. ಇಂದು ಮುಂಜಾನೆ ಹತ್ಯೆಯಾದ ರೈತ ಕುಟುಂಬಗಳ ಭೇಟಿಗೆ ಹೊರಟಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿಯವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ತೀವ್ರ ಮಾತಿನ ಚಕಮಕಿ ನಡೆದಿದೆ.

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್‌ ಮೌರ್ಯ ಮತ್ತು ಕೇಂದ್ರದ ಸಹಾಯಕ ಗೃಹಸಚಿವ ಅಜಯ್‌ ಮಿಶ್ರಾ ಅವರ ಭೇಟಿಯನ್ನು ವಿರೋಧಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ಅವರ ಮೇಲೆ ಕಾರು ಹರಿಸಲಾಗಿತ್ತು. ಈ ಹಿಂಸಾಚಾರದಲ್ಲಿ ಒಂಟು ಎಂಟು ಮಂದಿ ಸಾವನ್ನಪ್ಪಿದ್ದಾರೆ.

ಬಂಧನದ ಬಳಿಕ ಉತ್ತರ ಪ್ರದೇಶ ಕಾಂಗ್ರೆಸ್ ವಿಡಿಯೋವೊಂದನ್ನು ಟ್ವೀಟ್ ಮಾಡಿದೆ. ರೈತರ ಭೇಟಿಗೆ ಹೊರಟಿದ್ದ ನಮ್ಮ ನಾಯಕಿ ಪ್ರಿಯಾಂಕ ಗಾಂಧಿಯನ್ನು ಸೀತಾಪುರ ಪೊಲೀಸರು ಬಂಧಿಸಿದ್ದಾರೆ. ಬನ್ನಿ ಹೆಚ್ಚಿನ ಸಂಖ್ಯೆಯಲ್ಲಿ ಸೇರೋಣ ಎಂದು ಕರೆ ನೀಡಲಾಗಿದೆ.

“ನೀವು ಕೊಂದ ರೈತರಿಗಿಂತ ನಾನು ಮುಖ್ಯವಲ್ಲ. ಆದರೆ ನೀವು ಈ ಸರ್ಕಾರವನ್ನು ರಕ್ಷಿಸುತ್ತಿದ್ದೀರಿ. ನೀವು ನನಗೆ ಕಾನೂನು ವಾರಂಟ್, ಕಾನೂನು ಆಧಾರ ನೀಡಿ. ಇಲ್ಲವಾದರೆ ನಾನು ಇಲ್ಲಿಂದ ಕದಲುವುದಿಲ್ಲ ಮತ್ತು ನೀವು ನನ್ನನ್ನು ಮುಟ್ಟುವಂತಿಲ್ಲ” ಎಂದು ಪ್ರಿಯಾಂಕಾ ಗಾಂಧಿ ಪೊಲೀಸರೊಡನೆ ವಾಗ್ವಾದ ಮಾಡುತ್ತಿರುವ ದೃಶ್ಯಗಳು ವಿಡಿಯೋದಲ್ಲಿ ದಾಖಲಾಗಿವೆ.

ಇದೇ ವೇಳೆ ಪೊಲೀಸರು ಪ್ರಿಯಾಂಕ ಗಾಂಧಿ ಜೊತೆಗಿದ್ದ ಕಾಂಗ್ರೆಸ್ ಮುಖಂಡ ದೀಪೇಂದರ್ ಹೂಡಾ ಮೇಲೆ ಹಲ್ಲೆಗೆ ಮುಂದಾಗಿದ್ದರು ಎಂದು ಅವರು ಆರೋಪಿಸಿದ್ದಾರೆ. ನಾನು ಇದನ್ನು ಕಣ್ಣರೆ ಕಂಡಿದ್ದೇನೆ, ಹೂಡಾ ಅವರನ್ನು ಪೊಲೀಸರು ಹಿಂದೆ ತಳ್ಳಿದ್ದಾರೆ ಎಂದು ಪ್ರಿಯಾಂಕ ಆರೋಪಿಸಿದ್ದಾರೆ.

“ನೀವು ಮಹಿಳೆಯೊಂದಿಗೆ ಮಾತನಾಡುತ್ತಿಲ್ಲ, ಆದರೆ ಆತನನ್ನು ಹೊಡೆಯುತ್ತಿದ್ದೀರಿ” ಎಂದು ಪ್ರಿಯಾಂಕಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೆ ಮತ್ತೆ ಆತನನ್ನು ಹಿಂದಕ್ಕೆ ತಳ್ಳುತ್ತಿದ್ದೀರಿ ಎಂದು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, “ಪ್ರಿಯಾಂಕ, ನನಗೆ ಗೊತ್ತು ನೀನು ಹಿಂದೆ ಸರಿಯುವುದಿಲ್ಲ ಎಂದು. ನಿನ್ನ ಧೈರ್ಯದಿಂದ ಅವರು ಕಂಗಲಾಗಿದ್ದಾರೆ. ಈ ಅಹಿಂಸಾತ್ಮಕ ಹೋರಾಟದಿಂದ ನಾವು ದೇಶದ ಅನ್ನದಾತರನ್ನು ಗೆಲ್ಲಿಸುತ್ತೇವೆ” ಎಂದಿದ್ದಾರೆ.


ಇದನ್ನೂ ಒದಿ: ಸಚಿವರ ಬೆಂಗಾವಲು ವಾಹನ ಹತ್ತಿಸಿ ನಾಲ್ವರು ರೈತರ ಹತ್ಯೆ; ನಂತರದ ಪ್ರತಿರೋಧದಲ್ಲಿ ನಾಲ್ವರ ಸಾವು

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...