Homeಮುಖಪುಟಬೆತ್ತಲು ಮೆರವಣಿಗೆ ಮಾಡಿ ಅತ್ಯಾಚಾರವೆಸಗಿದ ಗುಂಪಿಗೆ ನಮ್ಮನ್ನು ಒಪ್ಪಿಸಿದ್ದೇ ಪೊಲೀಸರು: ಮಣಿಪುರ ಸಂತ್ರಸ್ತೆಯ ಅಳಲು

ಬೆತ್ತಲು ಮೆರವಣಿಗೆ ಮಾಡಿ ಅತ್ಯಾಚಾರವೆಸಗಿದ ಗುಂಪಿಗೆ ನಮ್ಮನ್ನು ಒಪ್ಪಿಸಿದ್ದೇ ಪೊಲೀಸರು: ಮಣಿಪುರ ಸಂತ್ರಸ್ತೆಯ ಅಳಲು

- Advertisement -
- Advertisement -

ಮಣಿಪುರದಲ್ಲಿ ಕುಕಿ-ಜೋ ಸಮುದಾಯದ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಬುಧವಾರ ವಿಡಿಯೋವೊಂದು ವೈರಲ್ ಆಗಿದೆ. ಆ ಘಟನೆಯಲ್ಲಿನ ಸಂತ್ರಸ್ತ ಮಹಿಳೆಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಮಾತನಾಡಿದ್ದು, ”ಆ ಗುಂಪಿನೊಂದಿಗೆ ಪೊಲೀಸರೇ ನಮನ್ನು ಬಿಟ್ಟಿದ್ದರು” ಎಂದು ಹೇಳಿದ್ದಾರೆ.

ಆ ವಿಡಿಯೋದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲು ಮಾಡಿ ಗಂಡಸರ ಗುಂಪೊಂದು ಮೆರವಣಿಗೆ ನಡೆಸುತ್ತಿರುವುದನ್ನು ಕಾಣುತ್ತದೆ. ಒಬ್ಬರು 20ರ ಹದಿಹರೆಯದ ಮಹಿಳೆ ಮತ್ತು ಇನ್ನೊಬ್ಬರು 40 ವರ್ಷದ ಮಹಿಳೆಯಾಗಿದ್ದಾರೆ. ಕೆಲವು ಪುರುಷರು ಇಬ್ಬರು ಮಹಿಳೆಯರನ್ನು ಹೊಲದ ಕಡೆಗೆ ಬಲವಂತವಾಗಿ ಎಳೆದೊಯ್ಯುತ್ತಿರುವುದನ್ನು ಕಾಣಬಹುದು. ಈ ಬಗ್ಗೆ ಮೇ 18ರಂದು ಪೊಲೀಸರಿಗೆ ದೂರು ಸಲ್ಲಿಸಲಾಗಿದೆ. ದೂರಿನಲ್ಲಿ, 20ರ ಹದಿಹರೆಯದ ಮಹಿಳೆಯನ್ನು ಕ್ರೂರವಾಗಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

”ಕಾಂಗ್‌ಪೊಕ್ಪಿ ಜಿಲ್ಲೆಯ ತಮ್ಮ ಹಳ್ಳಿಯ ಮೇಲೆ ಗುಂಪೊಂದು ದಾಳಿ ಮಾಡಿದ ನಂತರ ಆಶ್ರಯಕ್ಕಾಗಿ ಕಾಡಿಗೆ ಓಡಿಹೋದೆವು. ಆ ನಂತರ ತೌಬಲ್ ಪೊಲೀಸರು ಅವರನ್ನು ರಕ್ಷಿಸಿ ಠಾಣೆಗೆ ಕರೆದೊಯ್ಯುವಾಗ ಗುಂಪೊಂದು ದಾರಿಯಲ್ಲಿ ಅಡ್ಡಗಟ್ಟಿತು. ಪೊಲೀಸ್ ಠಾಣೆ ಸುಮಾರು ಎರಡು ಕಿಲೋಮೀಟರ್ ದೂರದಲ್ಲಿರುವಾಗಲೇ  ಪೊಲೀಸರ ಕಸ್ಟಡಿಯಿಂದ ನಮ್ಮನ್ನು ಅವರು ವಶಪಡಿಸಿಕೊಂಡರು” ಎಂದು ದೂರಿನಲ್ಲಿ ಸಂತ್ರಸ್ತರು ಹೇಳಿದ್ದಾರೆ.

ಸಂತ್ರಸ್ತೆಯ ಗಂಡ ಮನೆಯಿಂದ ಫೋನ್‌ನಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡುತ್ತ 20ವರ್ಷದ ಮಹಿಳೆ ಆರೋಪಿಸಿದ್ದನು ಹೇಳಿದ್ದಾರೆ. ”ನಮ್ಮ ಹಳ್ಳಿಯ ಮೇಲೆ ದಾಳಿ ಮಾಡುತ್ತಿದ್ದ ಗುಂಪಿನೊಂದಿಗೆ ಪೊಲೀಸರು ಅಲ್ಲಿದ್ದರು. ಪೋಲೀಸರು ನಮ್ಮನ್ನು ಮನೆಯ ಹತ್ತಿರದಿಂದ ಕರೆದುಕೊಂಡು ಹೋಗಿ, ಹಳ್ಳಿಯಿಂದ ಸ್ವಲ್ಪ ದೂರ ಕರೆದುಕೊಂಡು ಹೋಗಿ ಗುಂಪಿನೊಂದಿಗೆ ರಸ್ತೆಯಲ್ಲಿ ಬಿಟ್ಟರು. ನಮ್ಮನ್ನು ಪೊಲೀಸರು ಅವರಿಗೆ ಒಪ್ಪಿಸಿದ್ದಾರೆ” ಎಂದು ಹೇಳಿರುವುದಾಗಿ ಅವರು ತಿಳಿಸಿದ್ದಾರೆ.

ಸಂತ್ರಸ್ತರು ತಮ್ಮ ದೂರಿನಲ್ಲಿ, ”ನಾವು ಐವರು ಒಟ್ಟಿಗೆ ಇದ್ದೇವು. ವೀಡಿಯೊದಲ್ಲಿ ಕಾಣುವ ಇಬ್ಬರು ಮಹಿಳೆಯರು ಮತ್ತು 50ವರ್ಷದ ಇನ್ನೊಬ್ಬ ಮಹಿಳೆಯನ್ನು ಸಹ ವಿವಸ್ತ್ರಗೊಳಿಸಲಾಗಿದೆ. ಕಿರಿಯ ಮಹಿಳೆಯ ತಂದೆ ಮತ್ತು ಆಕೆಯ ಸಹೋದರನನ್ನು ಆ ಗುಂಪಿನವರು ಕೊಂದಿದ್ದಾರೆ” ಎಂದು ಆರೋಪಿಸಿದ್ದಾರೆ.

”ಈ ಘಟನೆಯ ವಿಡಿಯೋ ಸೆರೆಹಿಡಿದಿರುವ ಬಗ್ಗೆ ನಮಗೆ ತನಗೆ ಮತ್ತು ತನ್ನ ಕುಟುಂಬಕ್ಕೆ ತಿಳಿದಿಲ್ಲ. ಅದು ವೈರಲ್ ಆದಬಳಿಕ ದೇಶಾದ್ಯಂತ ಆಕ್ರೋಶ ವ್ಯಕ್ತವಾಯಿತು. ಈಗಲಾದರೂ ರಾಜ್ಯ ಸರ್ಕಾರ ಮತ್ತು ಪೊಲೀಸರು ಕ್ರಮ ಕೈಗೊಳ್ಳಬೇಕು” ಎಂದು ಸಂತ್ರಸ್ತ ಮಹಿಳೆ ಹೇಳಿದರು.

”ಮಣಿಪುರದಲ್ಲಿ ಇಂಟರ್ನೆಟ್ ಇಲ್ಲ, ನಮಗೆ ಗೊತ್ತಿಲ್ಲ” ಎಂದು ಅವರು ಹೇಳಿದರು.

”ಆ ಜನಸಮೂಹದ ಭಾಗವಾಗಿರುವವರಲ್ಲಿ ಕೆಲವರನ್ನು ಗುರುತಿಸಲು ಸಾಧ್ಯವಾಯಿತು” ಎಂದು ಹೇಳಿದ್ದಾರೆ.

ಪೈಶಾಚಿಕ ಕೃತ್ಯದ ವೀಡಿಯೋ ವೈರಲ್ ಆದ ಬಳಿಕ ಜನಾಕ್ರೋಶ ವ್ಯಕ್ತವಾಯಿತು. ಗುರುವಾರ ಬೆಳಿಗ್ಗೆ, ಘಟನೆಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯ ಬಂಧಿಸಲಾಗಿದೆ ಎಂದು ಸರ್ಕಾರ ದೃಢಪಡಿಸಿತು. ಇನ್ನೂ ಹೆಚ್ಚಿನ ದುಷ್ಕರ್ಮಿಗಳ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ಗುರುವಾರ ಮಧ್ಯಾಹ್ನ ತಿಳಿಸಿದ್ದಾರೆ.

ಇದನ್ನೂ ಓದಿ: ಮಣಿಪುರದಲ್ಲಿ ಹೇಯ ಕೃತ್ಯ: ಬುಡಕಟ್ಟು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ ಸಾಮೂಹಿಕ ಅತ್ಯಾಚಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...