Homeಕರ್ನಾಟಕಮುನಿರತ್ನ ಹನಿಟ್ರ್ಯಾಪ್ ಪ್ರಕರಣದಲ್ಲಿ ಮಹತ್ವದ ತಿರುವು : ಪೊಲೀಸ್ ಇನ್‌ಸ್ಪೆಕ್ಟರ್ ಬಂಧನ

ಮುನಿರತ್ನ ಹನಿಟ್ರ್ಯಾಪ್ ಪ್ರಕರಣದಲ್ಲಿ ಮಹತ್ವದ ತಿರುವು : ಪೊಲೀಸ್ ಇನ್‌ಸ್ಪೆಕ್ಟರ್ ಬಂಧನ

- Advertisement -
- Advertisement -

ಬಿಜೆಪಿ ಶಾಸಕ ಮುನಿರತ್ನ ನಡೆಸಿದ್ದಾರೆ ಎನ್ನಲಾದ ಹನಿಟ್ರ್ಯಾಪ್‌ಗೆ ಸಹಕರಿಸಿದ ಆರೋಪದ ಮೇಲೆ ಬೆಂಗಳೂರಿನ ಹೆಬ್ಬಗೋಡಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಅಯ್ಯಣ್ಣ ರೆಡ್ಡಿ ಅವರನ್ನು ಸಿಐಡಿ ವಿಶೇಷ ತನಿಖಾ ದಳ (ಎಸ್‌ಐಟಿ)ದ ಪೊಲೀಸರು ಗುರುವಾರ (ನ.14) ಬಂಧಿಸಿ, ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಠಾಣೆಯಲ್ಲಿ ಕರ್ತವ್ಯದಲ್ಲಿದ್ದಾಗಲೇ ಎಸ್‌ಐಟಿ ಅಧಿಕಾರಿಗಳು ಅಯ್ಯಣ್ಣ ರೆಡ್ಡಿಅವರನ್ನು ಬಂಧಿಸಿದ್ದಾರೆ. ಬಳಿಕ, ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ಪಡೆದಿದ್ದಾರೆ.

ಹನಿಟ್ರ್ಯಾಪ್‌ಗೆ ಇನ್‌ಸ್ಪೆಕ್ಟರ್ ನೆರವು ನೀಡಿದ್ದರು. ಅಲ್ಲದೆ, ಪ್ರಕರಣದ ಆರೋಪಿಗಳು ಕೆಲ ರಾಜಕಾರಣಿಗಳಿಗೆ ಏಡ್ಸ್‌ ಚುಚ್ಚುಮದ್ದು ಪ್ರಯೋಗಿಸಲು ಸಂಚು ರೂಪಿಸಿದ್ದು ಗೊತ್ತಿದ್ದರೂ, ಮಾಹಿತಿ ಮುಚ್ಚಿಟ್ಟಿದ್ದರು ಎಂದು ವರದಿಯಾಗಿದೆ.

ಮುನಿರತ್ನ ವಿರುದ್ದದ ಅತ್ಯಾಚಾರ, ಹನಿಟ್ರ್ಯಾಪ್ ಪ್ರಕರಣದ ಸಂತ್ರಸ್ತೆ ಮತ್ತು ಬಿಬಿಎಂಪಿ ಸದಸ್ಯ ವೇಲುನಾಯ್ಕರ್ ಅವರನ್ನು ಕೆಲ ದಿನಗಳ ಹಿಂದೆ ಎಸ್‌ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಇನ್‌ಸ್ಪೆಕ್ಟರ್ ಒಳಸಂಚು ರೂಪಿಸಿದ್ದ ಬಗ್ಗೆ ಮಾಹಿತಿ ಪಡೆದಿದ್ದರು. ಆ ಮಾಹಿತಿ ಆಧರಿಸಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಪ್ರಕರಣದ ಹಿನ್ನೆಲೆ : ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ದ ಬಿಬಿಎಂಪಿ ಗುತ್ತಿಗೆದಾರನಿಗೆ ಜಾತಿ ನಿಂದನೆ, ಅತ್ಯಾಚಾರ, ಹನಿಟ್ರ್ಯಾಪ್ ಸೇರಿದಂತೆ ಹಲವು ಆರೋಪಗಳಿವೆ. ಈ ಎಲ್ಲಾ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ ರಚಿಸಿದೆ.

ಬಿಬಿಎಂಪಿ ಗುತ್ತಿಗೆದಾರನಿಗೆ ಲಂಚಕ್ಕೆ ಬೇಡಿಕೆಯಿಟ್ಟು ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಸೆಪ್ಟೆಂಬರ್ 14ರಂದು ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಮುನಿರತ್ನ, ಸೆಪ್ಟೆಂಬರ್ 20ರಂದು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಮುನಿರತ್ನ ಜೈಲಿನಿಂದ ಹೊರಬರುತ್ತಿದ್ದಂತೆ ಅಲ್ಲೇ ಕಾದು ಕುಳಿತಿದ್ದ ರಾಮನಗರ ಜಿಲ್ಲೆ ಕಗ್ಗಲೀಪುರ ಠಾಣೆಯ ಪೊಲೀಸರು, ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧಿಸಿದ್ದರು. ಈ ಪ್ರಕರಣದಲ್ಲಿ ಅಕ್ಟೋಬರ್ 15ರಂದು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಹಾಗಾಗಿ, ಪ್ರಸ್ತುತ ಮುನಿರತ್ನ ಬಿಡುಗಡೆಯಾಗಿದ್ದಾರೆ. ಅವರ ವಿರುದ್ದದ ಪ್ರಕರಣಗಳ ತನಿಖೆ ಚುರುಕುಗೊಂಡಿದೆ.

ಇದನ್ನೂ ಓದಿ : ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ | ನವೆಂಬರ್ 20 ರಂದು ರಾಜ್ಯದಾದ್ಯಂತ ಮದ್ಯ ಮಾರಾಟ ಬಂದ್; ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...

ಸಚಿವ ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ನಿವಾಸಗಳ ಮೇಲೆ ಇಡಿ ದಾಳಿ: 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ನಿವಾಸಗಳು ಮತ್ತು ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ)...