ಅಲಿಘರ್ (ಉತ್ತರಪ್ರದೇಶ): ಬಿಧಾನ್ ನಗರ ಗ್ರಾಮದ ಬಳಿ ನಡೆದ ಗೋಹತ್ಯೆ ಪ್ರಕರಣ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಕರ್ತವ್ಯ ಲೋಪಕ್ಕಾಗಿ ಪೊಲೀಸ್ ಅಧಿಕಾರಿಯೊಬ್ಬರನ್ನು (ಎಸ್‌ಎಚ್‌ಒ) ಬುಧವಾರ ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ.
ಗೋಹತ್ಯೆಯ ಘಟನೆಯ ನಂತರ ಪ್ರತಿಭಟನಾಕಾರರ ದೊಡ್ಡ ಗುಂಪೊಂದು ಸುಮಾರು ಎರಡು ಗಂಟೆಗಳ ಕಾಲ ಬುಲಂದ್‌ಶಹರ್‌ನಿಂದ ಅಲಿಘರ್‌ಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 91 ಅನ್ನು ಬಂದ್ ಮಾಡಿ ಪ್ರತಿಭಟಿಸಿತ್ತು.
ಗಭಾನಾ ಪ್ರದೇಶದಲ್ಲಿ ಎರಡು ದಿನಗಳ ಅಂತರದಲ್ಲಿ ನಡೆದ ಇಂತಹ ಎರಡನೇ ಘಟನೆ ಇದಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ರಸ್ತೆ ತಡೆ ವೇಳೆ ಒತ್ತಾಯಿಸಿದ್ದರು.
ಪ್ರತಿಭಟನಕಾರರ ಉದ್ವಿಗ್ನ ಪರಿಸ್ಥಿತಿಯನ್ನು ಶಮನಗೊಳಿಸಲು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದರು ಮತ್ತು ರಸ್ತೆ ತಡೆಯನ್ನು ಕೈಬಿಡುವಂತೆ ಪ್ರತಿಭಟನಾಕಾರರ ಮನವೊಲಿಸಿದ್ದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅಲಿಘರ್ ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಸಂಜೀವ್ ಸುಮನ್, ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಯಾವುದೇ ಪೊಲೀಸ್ ಸಿಬ್ಬಂದಿ ತಮ್ಮ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದರೆ ಮುಂದಿನ ಶಿಸ್ತು ಕ್ರಮಗಳನ್ನು ಪ್ರಾರಂಭಿಸಲಾಗುವುದು ಎಂದು ಎಸ್‌ಎಸ್‌ಪಿ ಸುಮನ್ ಹೇಳಿದ್ದಾರೆ.
ಕರ್ತವ್ಯಲೋಪದಲ್ಲಿ ಗಭಾನಾ ಎಸ್‌ಎಚ್‌ಒ ಗಜೇಂದ್ರ ಸಿಂಗ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಳೆದ ವರ್ಷ ಜಿಲ್ಲೆಯಲ್ಲಿ ನಡೆದ ಇಂತಹ ಪ್ರಕರಣದ ವಿರುದ್ಧ ಪೊಲೀಸರ ಪೂರ್ವಭಾವಿ ನಿಲುವನ್ನು ಎತ್ತಿ ಹಿಡಿದ ಅವರು, ಈ ಅವಧಿಯಲ್ಲಿ ಒಂಬತ್ತು ಗೋಹತ್ಯೆ ಪ್ರಕರಣಗಳು ವರದಿಯಾಗಿವೆ. ಈ ಎಲ್ಲಾ ಪ್ರಕರಣಗಳಲ್ಲಿ, ದುಷ್ಕರ್ಮಿಗಳನ್ನು ಬಂಧಿಸಲಾಗಿದೆ. ಅವರ ವಿರುದ್ಧ ದರೋಡೆಕೋರರ ಕಾಯಿದೆಯಡಿಯಲ್ಲಿ ಆರೋಪ ಹೊರಿಸಲಾಗಿದ್ದು, ಅವರ ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ” ಎಂದು ಅವರು ಹೇಳಿದರು.
ಜಾಮೀನಿನ ಮೇಲೆ ಬಿಡುಗಡೆಯಾದ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ


