Homeಕರ್ನಾಟಕ‘ಮಜಾ ಮಾಡಿ ಗೌಡ್ರೇ’ ಎಂದು ದಲಿತ ಹೆಣ್ಣುಮಗಳ ಬಗ್ಗೆ ಪೊಲೀಸ್ ಅಧಿಕಾರಿ ಪ್ರತಿಕ್ರಿಯೆ; ದಸಂಸ ಆಕ್ರೋಶ

‘ಮಜಾ ಮಾಡಿ ಗೌಡ್ರೇ’ ಎಂದು ದಲಿತ ಹೆಣ್ಣುಮಗಳ ಬಗ್ಗೆ ಪೊಲೀಸ್ ಅಧಿಕಾರಿ ಪ್ರತಿಕ್ರಿಯೆ; ದಸಂಸ ಆಕ್ರೋಶ

- Advertisement -
- Advertisement -

ವಸತಿ ನಿಲಯದಲ್ಲಿ ದಲಿತ ಹೆಣ್ಣುಮಗಳೊಬ್ಬಳಿಗೆ ಹೆರಿಗೆಯಾಗಿದ್ದು, ಈ ಕುರಿತು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಅಧಿಕಾರಿಯೊಬ್ಬರು ಅವಹೇಳನಕಾರಿಯಾಗಿ ವಾಟ್ಸಾಪ್‌ನಲ್ಲಿ ಪ್ರತಿಕ್ರಿಯಿಸಿದ್ದು ಆಕ್ರೋಶಕ್ಕೆ ಗುರಿಯಾಗಿದೆ.

ವಿದ್ಯಾರ್ಥಿನಿಯೊಬ್ಬಳಿಗೆ ವಸತಿನಿಲಯದಲ್ಲಿ ಹೆರಿಗೆಯಾಗಿರುವ ಸುದ್ದಿಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿ ಜಯರಾಮ್‌ ‘ಮಜಾ ಮಾಡಿ ಗೌಡ್ರೆ’ ಎಂದು ವಾಟ್ಸಾಪ್‌ನಲ್ಲಿ ಪ್ರತಿಕ್ರಿಯಿಸಿ ದಲಿತ ಹೆಣ್ಣು ಮಗಳಿಗೆ ಅವಹೇಳನ ಮಾಡಿದ್ದಾರೆ ಎಂದು ದಲಿತ ಸಂಘಟನೆಗಳ ಐಕ್ಯತಾ ಚಾಲನಾ ಸಮಿತಿ ಆರೋಪಿಸಿದೆ. ಪೊಲೀಸರು ಈ ಆರೋಪವನ್ನು ಅಲ್ಲಗೆಳೆದಿದ್ದಾರೆ.

ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿರುವ ಸಮಿತಿಯ ಮುಖಂಡರಾದ ದಂಟರಮಕ್ಕಿ ಶ್ರೀನಿವಾಸ್, ಅಂಗಡಿ ಚಂದ್ರು, ಮರ್ಲೆ ಅನ್ನಯ್ಯ ಪೊಲೀಸ್‌ ಅಧಿಕಾರಿಗಳ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ದಲಿತರಿಗೆ ವಸತಿ ನಿಲಯದಲ್ಲೂ ರಕ್ಷಣೆ ಇಲ್ಲದಂತಾಗಿದೆ. ವಿದ್ಯಾರ್ಥಿನಿ ಪಿಯುಸಿ ಓದುತ್ತಿದ್ದಾಳಷ್ಟೆ. ಪ್ರಕರಣ ಹೊರ ಬರದಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ವಾರ್ಡನ್‌ ಹಲವು ಪ್ರಯತ್ನ ನಡೆಸಿದ್ದಾರೆ. ಇದೊಂದು ಆಘಾತಕಾರಿ ವಿಷಯವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ದಲಿತ ಹೆಣ್ಣು ಮಗಳಿಗೆ ಹೆರಿಗೆಯಾಗಿದೆ ಎಂಬ ಸುದ್ದಿಯನ್ನು ಚಿಕ್ಕಮಗಳೂರು ನಗರ ಪೊಲೀಸ್‌ ಠಾಣೆಯ ವಾಟ್ಸಾಪ್‌ ಗ್ರೂಪ್‌ನಲ್ಲಿ ಪಿಎಸ್‌ಐ ರನ್ನಗೌಡ ಅವರು ಹಂಚಿಕೊಂಡಿದ್ದರು. ಇದಕ್ಕೆ ಠಾಣೆಯ ಪಿಐ ಜಯರಾಮ್‌, ‘ಮಜಾ ಮಾಡಿ ಗೌಡ್ರೆ’ ಎಂದು ಪ್ರತಿಕ್ರಿಯಿಸಿ ನಂತರ ಡಿಲೀಟ್‌ ಮಾಡಿದ್ದಾರೆ. ದಲಿತ ಹೆಣ್ಣು ಮಗಳ ಬಗ್ಗೆ ಪೊಲೀಸರು ಹಗುರವಾಗಿ ನೀಚತನದಿಂದ ಮಾತನಾಡಿದ್ದಾರೆ. ರಕ್ಷಣೆ ಕೊಡಬೇಕಾದ ಇವರೇ ಹೀಗೆ ಮಾಡಿದರೆ ಹೇಗೆ?” ಎಂದು ಪ್ರಶ್ನಿಸಿದ್ದಾರೆ.

“ವಾಟ್ಸಾಪ್ ಗ್ರೂಪ್‌ನಲ್ಲಿ ಪೊಲೀಸರಿಬ್ಬರು ದಲಿತ ಹೆಣ್ಣು ಮಗಳ ಬಗ್ಗೆ ಕೆಟ್ಟದಾಗಿ ಚರ್ಚಿಸಿದ ವಿಷಯವನ್ನು ಅನಾಮಧೇಯ ವ್ಯಕ್ತಿಯೊಬ್ಬರು ದಲಿತ ಸಂಘಟನೆಗಳ ಮುಖಂಡರ ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್ ಕಳುಹಿಸಿದ್ದಾರೆ. ದಲಿತ ಹೆಣ್ಣು ಮಗಳಿಗೆ ಅವಹೇಳನ ಮಾಡಿದ ಪಿಐ ಜಯರಾಮ್‌ ಹಾಗೂ ಪಿಎಸ್ಐ ರನ್ನಗೌಡ ಇಬ್ಬರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಸೂಕ್ತ ತನಿಖೆ ನಡೆಸಬೇಕೆಂದು ಒತ್ತಾಯಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಪ್ರಕರಣವನ್ನು ವಿಳಂಬ ಅಥವಾ ಮುಚ್ಚಿ ಹಾಕಲು ಪ್ರಯತ್ನಿಸಿದ್ದಲ್ಲಿ, ಒಂದು ವಾರದ ನಂತರ ಎಲ್ಲಾ ದಲಿತ ಮತ್ತು ಪ್ರಗತಿಪರ ಸಂಘಟನೆಗಳು ಸೇರಿಸಿಕೊಂಡು ಜಿಲ್ಲೆಯಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು” ಎಂದು ಐಕ್ಯತಾ ಸಮಿತಿ ಎಚ್ಚರಿಕೆ ನೀಡಿದೆ.

ಮಿಸ್ ಆಗಿ ಗ್ರೂಪ್‌ನಲ್ಲಿ ಮೆಸೇಜ್‌ ಮಾಡಿದ್ದೇನೆ: ಅಧಿಕಾರಿ ಜಯರಾಮ್‌

ಈ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿರುವ ಪಿಐ ಜಯರಾಮ್‌, “ನನ್ನ ಮೇಲೆ ಸುಳ್ಳು ಆರೋಪಗಳು ಬಂದಿವೆ. ನಾನು ಆ ರೀತಿಯಲ್ಲಿ ಪ್ರತಿಕ್ರಿಯೆ ನೀಡಿಲ್ಲ” ಎಂದರು.

“ಪಿಎಸ್‌ಐ ರನ್ನಗೌಡ ಅವರು ನನಗೆ ವೈಯಕ್ತಿಕವಾಗಿ ಹಲವಾರು ತಮಾಷೆಯ ಸಂದೇಶಗಳನ್ನು ಕಳುಹಿಸುತ್ತಾರೆ. ಆ ದಿನ ಕೂಡ ನನಗೆ ಅವರು ವೈಯಕ್ತಿಕವಾಗಿ ಒಂದು ತಮಾಷೆ ವೀಡಿಯೊ ಕಳುಹಿಸಿದ್ದರು. ನಾನು ಅವರಿಗೆ ವೈಯಕ್ತಿಕವಾಗಿ ಪ್ರತಿಕ್ರಿಯಿಸುವಾಗ ಗೊತ್ತಾಗದೆ ಗ್ರೂಪ್‌ನಲ್ಲಿ ಪ್ರತಿಕ್ರಿಯೆ ನೀಡಿದೆ. ನಮ್ಮ ಗ್ರೂಪ್‌ನಲ್ಲೇ ಇದ್ದ ನನಗಾಗದವರು ಇದನ್ನು ತಿರುಚಿ ಅಪಪ್ರಚಾರ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

“ತಪ್ಪಾಗಿ ಗ್ರೂಪ್‌ನಲ್ಲಿ ಮೆಸೇಜ್ ಹೋಗಿರುವುದು ಗೊತ್ತಾದ ತಕ್ಷಣ ಆ ಸಂದೇಶವನ್ನು ಡಿಲೀಟ್‌ ಮಾಡಿದೆ. ಇದನ್ನೇ ಯಾರೋ ಎತ್ತಿಕೊಂಡು ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ನಾನು ನಿಜವಾಗಿಯೂ ಆ ರೀತಿಯಲ್ಲಿ ಪ್ರತಿಕ್ರಿಯಿಸಿಲ್ಲ” ಎಂದು ಹೇಳಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ದಲಿತ ವಿದ್ಯಾರ್ಥಿನಿಗೆ ಹೆರಿಗೆಯಾದ ಕುರಿತು ವರದಿಯಾದಾಗ ದಲಿತ ಸಂಘಟನೆಗಳು ಸಮಾಜ ಕಲ್ಯಾಣ ಇಲಾಖೆ ಮತ್ತು ವಾರ್ಡನ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದವು.

“ಹಾಸ್ಟೆಲ್​ನಲ್ಲಿದ್ದುಕೊಂಡು ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಗೆ ಹೆರಿಗೆಯಾಗಿದೆ. ಆದರೆ ಈ ವಿಚಾರವನ್ನು ಹೊರಬರಲು ಬಿಡದೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ, ಹಾಸ್ಟೆಲ್ ವಾರ್ಡನ್ ಮುಚ್ಚಿ ಹಾಕಿದ್ದಾರೆ. ವಿಷಯ ತಿಳಿದಾಗ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯನ್ನು ಪ್ರಶ್ನಿಸಿದೆವು. ವಿದ್ಯಾರ್ಥಿನಿ ಹೊಟ್ಟೆಗೆ ಬಟ್ಟೆ ಕಟ್ಟಿಕೊಳ್ಳುತ್ತಿದ್ದಳು. ಹಾಗಾಗಿ ಗೊತ್ತಾಗಿಲ್ಲ ಎಂದು ಬೇಜವಾಬ್ದಾರಿಯಿಂದ ಹೇಳಿದ್ದಾರೆ” ಎಂದು ಟೀಕಿಸಿದ್ದವು. ಯುವತಿಯನ್ನು ಮನೆಗೆ ಕಳಿಸಿ ಹುಡುಗನ ವಿರುದ್ಧ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...